ಮೂಳೂರು: ಮಲಗಿದಲ್ಲೇ ಸಾವಿಗೀಡಾದ ಮಹಿಳೆ
Team Udayavani, May 23, 2018, 12:32 PM IST
ಕಾಪು: ಮನೆಯಲ್ಲಿ ಮಲಗಿದ್ದಲ್ಲಿಯೇ ಮಹಿಳೆಯೋರ್ವರು ಸಾವಿಗೀಡಾದ ಘಟನೆ ಮೂಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮೂಳೂರು – ಬೆಳಪು ರಸ್ತೆ ಬದಿಯಲ್ಲಿರುವ ಮನೆಯಲ್ಲಿ ವಾಸವಿದ್ದ ಲಲಿತಾ ರಾಜನ್ (65) ಮೃತ ಮಹಿಳೆ.
ಲಲಿತಾ ಅವರು ತನ್ನ ತಮ್ಮನ ಹೆಂಡತಿಯೊಂದಿಗೆ ವಾಸವಿದ್ದರು. ಮನೆಯವರು ಮೇ 17ರಂದು ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದರು.
ಮಂಗಳವಾರ ಬೆಳಗ್ಗೆ ಬಂದು ನೋಡಿದಾಗ ಮಹಿಳೆ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿತ್ತು.
ಮೂರ್ನಾಲ್ಕು ದಿನಗಳ ಹೃದಯಾಘಾತದಿಂದ ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದ್ದು, ಮೃತ ದೇಹ ಕೊಳೆತು ಹೋದ ಸ್ಥಿತಿಯಲ್ಲಿತ್ತು. ಸ್ಥಳಕ್ಕೆ ಭೇಟಿ ನೀಡಿದ ಕಾಪು ಎಸ್ಐ ನಿತ್ಯಾನಂದ ಗೌಡ ಅವರು ಕಾಪುವಿನ ಸೂರಿ ಶೆಟ್ಟಿ ಮತ್ತು ನಾಗರಾಜ್ ಶವವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದರು.
ಮೃತರ ಸಂಬಂಧಿ ಜಯಮ್ಮ ನೀಡಿದ ದೂರಿನಂತೆ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ