ಮೂಳೂರು: ಬೈಕ್ ಗೆ ಲಾರಿ ಢಿಕ್ಕಿ; ಸವಾರ ಗಂಭೀರ
Team Udayavani, Jan 23, 2022, 7:20 PM IST
ಕಾಪು: ಬೈಕ್ ಗೆ ಲಾರಿ ಢಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮೂಳೂರು ಸಿಎಸ್ಐ ಸ್ಕೂಲ್ ಮುಂಭಾಗದಲ್ಲಿ ರವಿವಾರ ಸಂಜೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳೂರು ಕಡೆಯಿಂದ ಉಡುಪಿಯತ್ತ ಚಲಿಸುತ್ತಿದ್ದ ಲಾರಿ ಪಲ್ಸರ್ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದಾನೆ.
ಅಪಘಾತದ ತೀವ್ರತೆಗೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬೈಕ್ ಸವಾರನ ಗುರುತು ಇನ್ನಷ್ಟೆ ಪತ್ತೆಯಾಗಬೇಕಿದೆ.
ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಮುಂದುವರಿಸಿದ್ದಾರೆ.