Udayavni Special

ಮುನಿಯಾಲು: ಪದವಿ ಕಾಲೇಜು ಕಟ್ಟಡ ಉದ್ಘಾಟನೆ

Team Udayavani, Feb 10, 2019, 12:35 AM IST

0902ajke02.jpg

ಅಜೆಕಾರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣದ ಅನಂತರ ವಿದ್ಯಾಭ್ಯಾಸವನ್ನು ಮುಂದುವರಿಸಲು ಅಸಾಧ್ಯವಾಗಿ ಶಿಕ್ಷಣ ಮೊಟಕುಗೊಳಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗವಾದ ಮುನಿಯಾಲುವಿಗೆ ಪದವಿ ಕಾಲೇಜನ್ನು ಒದಗಿಸಲಾಗಿದ್ದು ಈ ಭಾಗದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಸುನಿಲ್‌ ಕುಮಾರ್‌ ಹೇಳಿದರು.

ಮುನಿಯಾಲು ಚಟ್ಕಲ್‌ಪಾದೆ ಬಳಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜಿಗೆ ಮೂಲ ಸೌಕರ್ಯ ಒದಗಿಸುವ ಜತೆಗೆ ಮುಂದಿನ ವರ್ಷದಲ್ಲಿ ಸುಮಾರು 2.50 ಕೋಟಿ ವೆಚ್ಚದಲ್ಲಿ ಮುಂದುವರಿದ ಕಾಮಗಾರಿ ನಡೆಸಲಾಗುವುದು. ತಾಲೂಕಿನಾದ್ಯಂತ ದಾಖಲೆಯ ಪ್ರಮಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದ್ದು ಮುಂದಿನ ಆರ್ಥಿಕ ವರ್ಷದಲ್ಲಿ ಮುನಿಯಾಲು ಚಟ್ಕಲ್‌ಪಾದೆಯಿಂದ ಕಾಡುಹೊಳೆ ಸೇತುವೆವರೆಗೆ ರಸ್ತೆಯನ್ನು ಅಗಲಗೊಳಿಸಿ ಚತುಷ್ಪಥ ಕಾಮಗಾರಿ ನಡೆಸಲಾಗುವುದು ಎಂದರು.

ಅಧ್ಯಕ್ಷತೆಯನ್ನು ವರಂಗ ಗ್ರಾ.ಪಂ. ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ ವಹಿಸಿದ್ದರು.ಈ ಸಂದರ್ಭ ಸುನಿಲ್‌ ಕುಮಾರ್‌ ಅವರನ್ನು ಗ್ರಾಮಸ್ಥರ ಪರವಾಗಿ ಸಮ್ಮಾನಿಸಲಾಯಿತು.ಸಭಾ ಕಾರ್ಯಕ್ರಮಕ್ಕೂ ಮುನ್ನ ದಿನೇಶ್‌ ಪೈ ಅವರ ನೇತೃತ್ವದಲ್ಲಿ ಅರ್ಚಕ ಬಂಗಾರ್‌ ಭಟ್ ಅವರು ವಿವಿಧ ಧಾರ್ಮಿಕ ಕಾರ್ಯಗಳನ್ನು ಕಟ್ಟಡದಲ್ಲಿ ನೆರವೇರಿಸಿದರು.

ಜಿ.ಪಂ. ಸದಸ್ಯೆ ಜ್ಯೋತಿಹರೀಶ್‌, ಕಾರ್ಕಳ ಎಪಿಎಂಸಿ ನಿಕಟಪೂರ್ವ ಅಧ್ಯಕ್ಷ ಮುಟ್ಲುಪಾಡಿ ಸತೀಶ್‌ ಶೆಟ್ಟಿ, ತಾ.ಪಂ. ಅಧ್ಯಕ್ಷರಾದ ಮಾಲಿನಿ ಜೆ. ಶೆಟ್ಟಿ, ಸದಸ್ಯರಾದ ಸುಲತಾ ನಾಯ್ಕ, ರಮೇಶ್‌ ಕುಮಾರ್‌, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಗೋಪಿನಾಥ್‌ ಭಟ್, ಸದಸ್ಯರಾದ ದಿನೇಶ್‌ ಪೈ, ಗುತ್ತಿಗೆದಾರರಾದ ಉದಯ್‌ ಕುಮಾರ್‌ ಶೆಟ್ಟಿ ಮುನಿಯಾಲು, ಮುನಿಯಾಲು ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾದ ಶ್ರೀಧರ್‌ ಪೈ, ಉದ್ಯಮಿಗಳಾದ ಶಂಕರ್‌ ಶೆಟ್ಟಿ, ಮಂಜುನಾಥ್‌ ಕೆ., ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಬಾಯರಿ ಉಪಸ್ಥಿತರಿದ್ದರು

ಗೋಪಿನಾಥ್‌ ಭಟ್ ಸ್ವಾಗತಿಸಿದರು. ವರುಣ್‌ ಭಟ್ ಪ್ರಾರ್ಥಿಸಿದರು, ಸೀತಾರಾಮ್‌ ಹೆಬ್ಟಾರ್‌ ಹಾಗೂ ಸುಹಾಸ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ದಿನೇಶ್‌ ಪೈ ಪ್ರಸ್ತಾವನೆಗೈದರು. ರತ್ನಾಕರ್‌ ಪೂಜಾರಿ ವಂದಿಸಿದರು.

ಮುನಿಯಾಲುವಿನಲ್ಲಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಶಿಕ್ಷಣ ಸಂಸ್ಥೆಗಳು ಪ್ರಾರಂಭವಾಗಿದ್ದು ಸುತ್ತಲಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳ ಬೇಕಾದರೆ ಸರಕಾರಿ ಬಸ್ಸಿನ ವ್ಯವಸ್ಥೆ ಅತ್ಯಗತ್ಯ ಈ ನಿಟ್ಟಿನಲ್ಲಿ ಶಾಸಕರು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸತೀಶ್‌ ಶೆಟ್ಟಿ ಮುಟ್ಲುಪಾಡಿ ಮನವಿ ಮಾಡಿದರು. ಕೆರ್ವಾಶೆ, ಶಿರ್ಲಾಲು, ಅಂಡಾರು, ಮುನಿಯಾಲು ಮಾರ್ಗವಾಗಿ ಹೆಬ್ರಿಗೆ ಹಾಗೂ ಕಬ್ಬಿನಾಲೆ, ಮುನಿಯಾಲು ಮಾರ್ಗವಾಗಿ ಪಡುಕುಡೂರು ಸಂಪರ್ಕಿಸುವಂತೆ ಸರಕಾರಿ ಬಸ್ಸಿನ ವ್ಯವಸ್ಥೆ ಆಗಬೇಕಿದೆ ಎಂದು ಹೇಳಿದರು.

ಸರಕಾರಿ ಬಸ್‌ಗೆ ಮನವಿ

ಟಾಪ್ ನ್ಯೂಸ್

1-haara

ಆರ್ಯನ್ ಗೆ ಜಾಮೀನಿಲ್ಲ :’ಅತಿರೇಕ,ಹೃದಯ ವಿದ್ರಾವಕ’ಎಂದ ಬಾಲಿವುಡ್ ಮಂದಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

1-b

ಬ್ರಹ್ಮಾವರ : ಈಜಲು ತೆರಳಿ ನೀರುಪಾಲಾಗಿದ್ದ ಇಬ್ಬರ ಶವಗಳು ಪತ್ತೆ

hfgjhgfds

ಕಟಪಾಡಿ : ಭತ್ತ ಕಟಾವು ಯಂತ್ರ ಗಂಟೆಗೆ 2500 ರೂ : ಬೇಸತ್ತ ರೈತರು

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಅ. 21ರಿಂದ ಜಿಲ್ಲೆಯಾದ್ಯಂತ ಜಾರಿ; ಮಕ್ಕಳು, ಶಿಕ್ಷಕರ ಬೆಂಬಲಕ್ಕೆ “ಶಾಲಾ ಸ್ಪಂದನ’

ಅ. 21ರಿಂದ ಜಿಲ್ಲೆಯಾದ್ಯಂತ ಜಾರಿ; ಮಕ್ಕಳು, ಶಿಕ್ಷಕರ ಬೆಂಬಲಕ್ಕೆ “ಶಾಲಾ ಸ್ಪಂದನ’

MUST WATCH

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

udayavani youtube

ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ

udayavani youtube

ನಮ್ಮ ಸೇನೆಗೊಂದು ಸಲಾಂ

ಹೊಸ ಸೇರ್ಪಡೆ

ಭತ್ತದ ಗದ್ದೆ ಇದ್ದರೂ ಅಡಿಕೆಗೆ ಸಿಗಬೇಕಾದ ಸೌಲಭ್ಯಕ್ಕೆ ಖೋತಾ 

ಭತ್ತದ ಗದ್ದೆ ಇದ್ದರೂ ಅಡಿಕೆಗೆ ಸಿಗಬೇಕಾದ ಸೌಲಭ್ಯಕ್ಕೆ ಖೋತಾ 

1-haara

ಆರ್ಯನ್ ಗೆ ಜಾಮೀನಿಲ್ಲ :’ಅತಿರೇಕ,ಹೃದಯ ವಿದ್ರಾವಕ’ಎಂದ ಬಾಲಿವುಡ್ ಮಂದಿ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

Untitled-1

ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಕಸ ತ್ಯಾಜ್ಯ ನಿರ್ಮೂಲನೆಗೆ ಪಣತೊಟ್ಟ ಗ್ರಾ.ಪಂ.ಅಧ್ಯಕ್ಷ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.