ನಳಿನ್‌, ಶೋಭಾಗೆ ಒಲಿದ ಬಿಜೆಪಿ ಸಂಸದೀಯ ಸಮಿತಿ ಸಚೇತಕ ಹುದ್ದೆ

Team Udayavani, Jun 13, 2019, 5:00 AM IST

t-26

ಮಂಗಳೂರು/ ಉಡುಪಿ: ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸಚೇತಕರಾಗಿ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲು ಮತ್ತು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ. ನಳಿನ್‌ಗೆ ಕರ್ನಾಟಕದ 21 ಸಂಸದರ ಹೊಣೆಗಾರಿಕೆ ಮತ್ತು ಶೋಭಾ ಅವರಿಗೆ 12 ಮಂದಿ ಮಹಿಳಾ ಸಂಸದೆಯರ ಜವಾಬ್ದಾರಿ ವಹಿಸಲಾಗಿದೆ.

ಸತತ ಮೂರು ಬಾರಿ ಬಿಜೆಪಿಯಿಂದ ಸಂಸದರಾಗಿ ಆಯ್ಕೆಯಾದ ನಳಿನ್‌ ಅವರಿಗೆ ಕೇಂದ್ರ ಸಚಿವ ಸ್ಥಾನಮಾನ ದೊರೆಯಬಹುದು ಎಂದು ನಿರೀಕ್ಷಿಸಲಾಗಿತ್ತಾದರೂ ಕರಾವಳಿಗೆ ಸಂಪುಟ ಸ್ಥಾನಮಾನ ದೊರೆತಿರಲಿಲ್ಲ. ಆದರೆ ಇದೀಗ ಇಬ್ಬರು ಸಂಸದರಿಗೆ ಬಿಜೆಪಿಯ ಸಂಸದೀಯ ಸಮಿತಿಯ ಸಚೇತಕ ಸ್ಥಾನ ದೊರೆಯುವ ಮೂಲಕ ಕರಾವಳಿಗೆ ವಿಶೇಷ ಸ್ಥಾನಮಾನ ದೊರೆತಂತಾಗಿದೆ.

2004ರಲ್ಲಿ ಜಿಲ್ಲಾ ಬಿಜೆಪಿಯ ಸಂಘಟನ ಕಾರ್ಯದರ್ಶಿಯಾಗಿ ಆಯ್ಕೆಯಾದ ನಳಿನ್‌ 2009ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಜನಾರ್ದನ ಪೂಜಾರಿ ವಿರುದ್ಧ ಸ್ಪರ್ಧಿಸಿ 40,420 ಮತಗಳ ಅಂತರದಿಂದ ಗೆದ್ದು ಸಂಸತ್‌ ಪ್ರವೇಶಿಸಿದರು. 2014ರಲ್ಲಿ ಮತ್ತೆ ಪೂಜಾರಿ ವಿರುದ್ಧ 1,43,709 ಮತಗಳ ಅಂತರದಿಂದ ಗೆದ್ದಿದ್ದರು. ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿದ್ದ ನಳಿನ್‌ ಕೇರಳ ರಾಜ್ಯದಲ್ಲಿ ಬಿಜೆಪಿಯ ಪ್ರಭಾರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕೇಂದ್ರ ಸರಕಾರದ ವಿವಿಧ ಸಮಿತಿಗಳ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗೆ ನಡೆದ ಲೋಕಸಭಾ ಚುನಾವOೆಯಲ್ಲಿ ಮತ್ತೂಮ್ಮೆ ದಾಖಲೆ ಮತಗಳ ಅಂತರದ ಗೆಲುವು ದಾಖಲಿಸಿ ಕರಾವಳಿಯಲ್ಲಿ ಬಿಜೆಪಿ ಕೋಟೆಯನ್ನು ಭದ್ರಗೊಳಿಸುವಲ್ಲಿ ಯಶಸ್ವಿಯಾಗಿದ್ದರು.

ಉಡುಪಿ-ಚಿಕ್ಕಮಗಳೂರು ಕ್ಷೇತ್ರ ದಲ್ಲಿ 2014 ಮತ್ತು 2019ರಲ್ಲಿ 2 ಬಾರಿ ಸಂಸದೆಯಾಗಿ ಶೋಭಾ ಕರಂದ್ಲಾಜೆ ಅವರು ಆಯ್ಕೆಯಾ ಗಿದ್ದಾರೆ. 2010ರಲ್ಲಿ ರಾಜ್ಯ ಇಂಧನ ಸಚಿವರಾಗಿಯೂ ಇವರು ಕರ್ತವ್ಯ ನಿರ್ವಹಿಸಿ ಜನಮೆಚ್ಚುಗೆ ಗಳಿಸಿದ್ದಾರೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.