ಮತ್ತೆ 84 ಪ್ರಕರಣಗಳು: ಎರಡು ಸಾವಿರದ ಗಡಿಯತ್ತ ಉಡುಪಿಯ ಸೋಂಕಿತರ ಸಂಖ್ಯೆ
Team Udayavani, Jul 17, 2020, 6:12 PM IST
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ಇಂದು ಮತ್ತೆ 84 ಜನರಿಗೆ ಕೋವಿಡ್ 19 ಸೋಂಕು ದೃಢವಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿಯ ಸನಿಹ ತಲುಪಿದೆ.
ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1979ಕ್ಕೆ ಏರಿಕೆಯಾಗಿದೆ. ಇದುವರೆಗೆ 1543 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಏಳು ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇನ್ನೂ 439 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಇಂದು ಒಟ್ಟು 393 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 309 ಮಾದರಿಯ ಪರೀಕ್ಷಾ ವರದಿ ನೆಗಟಿವ್ ಬಂದಿದೆ. ಉಳಿದ 84 ಜನರ ಮಾದರಿ ಫಲಿತಾಂಶ ಪಾಸಿಟಿವ್ ಆಗಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 23, 858 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. ಅವುಗಳ ಪರೀಕ್ಷೆ ನಡೆಸಿದಾಗ 1979 ಜನರ ಗಂಟಲು ದ್ರವ ಮಾದರಿ ಫಲಿತಾಂಶ ಪಾಸಿಟಿವ್ ಆಗಿದ್ದು, 21.465 ಜನರ ಮಾದರಿ ನೆಗಟಿವ್ ಆಗಿದೆ. ಇನ್ನೂ 414 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ಫಲಿತಾಂಶ ಬಾಕಿಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ