ಸಚಿವರು, ಅಧಿಕಾರಿಗಳ ಪರಿಶೀಲನೆಯ ಬಳಿಕ ಮೀನುಗಾರರಲ್ಲಿ ಹೊಸ ಭರವಸೆ

ಮೂರು ಜೆಟ್ಟಿಗಳ ಸಂಪರ್ಕ ಕೊಂಡಿ ಹಂಗಾರಕಟ್ಟೆ ಅಳಿವೆ ಸಮಸ್ಯೆಗೆ ಸಿಗುವುದೇ ಮುಕ್ತಿ?

Team Udayavani, Nov 17, 2019, 5:26 AM IST

1511KOTA8E

ಕೋಟ: ಹಂಗಾರಕಟ್ಟೆ, ಕೋಡಿಕನ್ಯಾಣ ಹಾಗೂ ಕೋಡಿಬೆಂಗ್ರೆ ಈ ಮೂರು ಮೀನುಗಾರಿಕೆ ಜೆಟ್ಟಿಗಳಿಗೆ ಸಂಪರ್ಕ ಬೆಸೆಯುವ ಹಂಗಾರಕಟ್ಟೆ ಅಳಿವೆಗೆ ತಡೆಗೋಡೆ ಇಲ್ಲದೆ ಬೋಟ್‌ಗಳ ಸಂಚಾರಕ್ಕೆ ಹಲವು ವರ್ಷದಿಂದ ಸಮಸ್ಯೆಯಾಗುತ್ತಿದೆ. ಹೀಗಾಗಿ ಇಲ್ಲಿಗೆ ಬ್ರೇಕ್‌ ವಾಟರ್‌ ನಿರ್ಮಿಸಬೇಕು ಎನ್ನುವುದು ಮೀನುಗಾರರ ಹತ್ತಾರು ವರ್ಷದ ಬೇಡಿಕೆಯಾಗಿದೆ. ಇದೀಗ ಇವರ ಮನವಿಯನ್ನು ಪುರಸ್ಕೃರಿಸಿ ಮೀನುಗಾರಿಕೆ ಸಚಿವರು ಮತ್ತು ಬಂದರು, ಮೀನುಗಾರಿಕೆ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಕುರಿತು ಪರಿಶೀಲನೆ ನಡೆಸಿ ವರದಿ ತಯಾರಿಸಿದ್ದಾರೆ. ಹೀಗಾಗಿ ತಮ್ಮ ಬಹುಕಾಲದ ಬೇಡಿಕೆ ಈಡೇರಬಹುದು ಎನ್ನುವ ಭರವಸೆಯಲ್ಲಿ ಮೀನುಗಾರರಿದ್ದಾರೆ.

ಹಂಗಾರಕಟ್ಟೆ ಬ್ರೇಕ್‌ ವಾಟರ್‌ಗೆ
ಒಕ್ಕೊರಳ ಆಗ್ರಹ
ಹಂಗಾರಕಟ್ಟೆ ಅಳಿವೆಯಲ್ಲಿ ಬ್ರೇಕ್‌ ವಾಟರ್‌ಗೆ ಇಲ್ಲದಿರುವುದರಿಂದ ಮೀನುಗಾರಿಕೆ ಚಟುವಟಿಕೆಗೆ ಹಿನ್ನಡೆಯಾಗಿದ್ದು ದೊಡ್ಡ ಬೋಟ್‌ಗಳ ಸಂಚಾರ ಕಷ್ಟಸಾಧ್ಯವಾಗಿದೆ. ಹೀಗಾಗಿ ಪ್ರತಿವರ್ಷ ಒಂದೆರಡು ತಿಂಗಳು ತಡವಾಗಿ ಇಲ್ಲಿ ಮೀನುಗಾರಿಕೆ ಆರಂಭವಾಗುತ್ತದೆ. ಆದ್ದರಿಂದ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಸುವ ಮೊದಲು ಬ್ರೇಕ್‌ ವಾಟರ್‌ ನಿರ್ಮಿಸಬೇಕು ಎಂದು ಮೂರು ಜೆಟ್ಟಿಗಳ ಮೀನುಗಾರ ಪ್ರಮುಖರ ಒಕ್ಕೊರಳ ಬೇಡಿಕೆ ಸಲ್ಲಿಸಿದ್ದಾರೆ.

ಕೋಡಿಕನ್ಯಾಣದ ಬೇಡಿಕೆ
ಕೋಡಿಕನ್ಯಾಣ ಜೆಟ್ಟಿಯ ಹೂಳೆತ್ತುವ ಕಾಮಗಾರಿಗೆ 2017ರಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಸುಮಾರು 6ಕೋಟಿ ರೂ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ಚಾಲನೆ ನೀಡಿತ್ತು. ಆದರೆ ಹಲವು ಕಾರಣಗಳನ್ನು ನೀಡಿ ಗುತ್ತಿಗೆ ವಹಿಸಿಕೊಂಡ ಕಂಪೆನಿ ಕಾಮಗಾರಿಯನ್ನು ವರ್ಷಗಟ್ಟಲೆ ಸ್ಥಗಿತಗೊಳಿಸಿತ್ತು. ಜತೆಗೆ ಸಿ.ಆರ್‌.ಝಡ್‌ ಸಮಸ್ಯೆ ಕೂಡ ಕಾಮಗಾರಿಗೆ ಹಿನ್ನಡೆಯಾಗಿತ್ತು. ಹೀಗಾಗಿ ಈ ಕಾಮಗಾರಿ ಮತ್ತೆ ಆರಂಭಿಸಬೇಕು ಎನ್ನುವುದು ಮೀನುಗಾರರ ಬೇಡಿಕೆಯಾಗಿದೆ ಮತ್ತು ಕೋಡಿ-ಸಾಸ್ತಾನ ಸಂಪರ್ಕ ರಸ್ತೆಯ ಬಳಿ ಇರುವ ಸರಕಾರಿ ಜಾಗವನ್ನು ಮೀನುಗಾರಿಕೆ ಇಲಾಖೆಗೆ ಹಸ್ತಾಂತರ ಮಾಡಬೇಕು. ಜಟ್ಟಿಯನ್ನು 300ಮೀಟರ್‌ ವಿಸ್ತರಣೆ ಮತ್ತು ಈಗಾಗಲೇ ಮಂಜೂರಾಗಿರುವ 60ಮೀಟರ್‌ ವಿಸ್ತರಣೆ ಕಾಮಗಾರಿಯನ್ನು ಬಲಭಾಗದಲ್ಲಿ ನಡೆಸಬೇಕು ಎನ್ನುವುದು ಇಲ್ಲಿನ ಮೀನುಗಾರರ ಬೇಡಿಕೆಯಾಗಿದೆ.

ಕೋಡಿಬೆಂಗ್ರೆಯ ಮೀನುಗಾರರ ಮನವಿ
ಜೆಟ್ಟಿ ಅಭಿವೃದ್ಧಿ ಹಾಗೂ ಅಗತ್ಯ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮೂಲಕ ಕೋಡಿಬೆಂಗ್ರೆಯಲ್ಲಿ ಮೀನುಗಾರಿಕೆ ಚಟುವಟಿಕೆಗೆ ಅನುಕೂಲ ಮಾಡಿಕೊಡಬೇಕು ಎನ್ನುವುದು ಇಲ್ಲಿನ ಮೀನುಗಾರರ ಬೇಡಿಕೆಯಾಗಿದೆ.

ಸಚಿವರು, ಅಧಿಕಾರಿಗಳ ಭರವಸೆ
ಇತ್ತೀಚೆಗೆ ಕೋಡಿಕನ್ಯಾಣ ಜೆಟ್ಟಿಗೆ ಭೇಟಿ ನೀಡಿದ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮೀನುಗಾರರ ಮನವಿ ಸ್ವೀಕರಿಸಿ ಎಲ್ಲಾ ಕಾಮಗಾರಿಗಳನ್ನು ಆರಂಭಿಸಲು ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ. ಕಾನೂನಾತ್ಮಕ ತೊಡಕಿನಿಂದಾಗಿ ಸ್ಥಗಿತಗೊಂಡ ಹೂಳೆತ್ತುವ ಕಾಮಗಾರಿಯನ್ನು ಸಿ.ಆರ್‌.ಝಡ್‌. ಅನುಮತಿ ಪಡೆದು ಪುನರಾರಂಭಿಸುವುದಾಗಿ ಹಾಗೂ ಡಿಸೆಂಬರ್‌ ಅಂತ್ಯದಲ್ಲಿ ಬ್ರೇಕ್‌ ವಾಟರ್‌ ಕಾಮಗಾರಿಗೆ ಅಂದಾಜುಪಟ್ಟಿ ಸಿದ್ಧಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಸೂಕ್ತ ಕ್ರಮಕೈಗೊಳ್ಳಲಾಗುವುದು
ಹಂಗಾರಕಟ್ಟೆ ಬ್ರೇಕ್‌ ವಾಟರ್‌ ಕಾಮಗಾರಿಗೆ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಹೂಳೆತ್ತುವ ಕಾಮಗಾರಿಯ ಕಾನೂನು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಾಗುತ್ತಿದೆ. ಜೆಟ್ಟಿ ಬಳಿ ಇರುವ ಸರಕಾರಿ ಜಾಗವನ್ನು ಮೀನುಗಾರಿಕೆ ಇಲಾಖೆಗೆ ಹಸ್ತಾಂತರಿಸುವ ಕಡತ ಪರಿಶೀಲನೆ ಹಂತದಲ್ಲಿದ್ದು ಈ ಕುರಿತು ಕ್ರಮಕೈಗೊಳ್ಳಲಾಗುವುದು, ಮಂಜೂರಾಗಿರುವ 60ಮೀಟರ್‌ ವಿಸ್ತರಣೆಗೆ ಈಗಾಗಲೇ ಸೂಚನೆ ನೀಡಲಾಗಿದೆ.
-ಕೋಟ ಶ್ರೀನಿವಾಸ ಪೂಜಾರಿ,
ಮೀನುಗಾರಿಕೆ ಸಚಿವರು

-ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.