ಪೇಜಾವರ ಶ್ರೀ ಅನಾರೋಗ್ಯ: ತುರ್ತು ನೆರವು ಅಗತ್ಯವಿದ್ದಲ್ಲಿ ತಿಳಿಸಿ ಎಂದ ಸಚಿವೆ ನಿರ್ಮಲಾ

Team Udayavani, Dec 21, 2019, 9:45 AM IST

ಸಂಗ್ರಹ ಚಿತ್ರ

ಮಣಿಪಾಲ: ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಅನಾರೋಗ್ಯ ನಿಮಿತ್ತ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಶನಿವಾರ ಬೆಳಿಗ್ಗೆ ಕರೆ ಮಾಡಿ ಶ್ರೀಗಳ ಆರೋಗ್ಯ ವಿಚಾರಿಸಿದರು. ಪೇಜಾವರ ಶ್ರೀಗಳಂತವರು ಲಕ್ಷಕ್ಕೊಬ್ಬರು ಮಾತ್ರ ಈ ಭೂಮಿಯಲ್ಲಿ ಹುಟ್ಟಿ ಬರುತ್ತಾರೆ. ಅವರ ಕ್ಷೇಮಕ್ಕಾಗಿ ಪ್ರಾರ್ಥಿಸುವುದು ಇಡೀ ಸಮಾಜದ ಕರ್ತವ್ಯ ಎಂದು ನಿರ್ಮಲಾ ಸೀತರಾಮನ್ ಹೇಳಿದ್ದಾರೆ.

ಪೇಜಾವರ ಶ್ರೀಗಳ ಆರೋಗ್ಯ ಸಂಬಂಧಿಸಿದಂತೆ ಯಾವುದೇ ತುರ್ತು ನೆರವು ಅಗತ್ಯವಿದ್ದಲ್ಲಿ ತಿಳಿಸುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ವಿಹಿಂಪ ರಾಷ್ಟ್ರೀಯ ಪ್ರಧಾನ‌ ಕಾರ್ಯದರ್ಶಿ ಚಂಪತ್ ರಾಯ್ ಕೂಡಾ ಆರೋಗ್ಯ ವಿಚಾರಿಸಿದ್ದು, ಪೇಜಾವರ ಶ್ರೀಗಳು ಈ ದೇಶದ ಮಹಾನ್ ಸಂತ ಶಕ್ತಿ. ಅವರ ಆರೋಗ್ಯ ಸಮಗ್ರ ಹಿಂದೂ ಸಮಾಜಕ್ಕಾಗಿ ಅತೀ ಮುಖ್ಯ. ಆದ್ದರಿಂದ ಸಮಸ್ತ ಹಿಂದೂಗಳೂ ಅವರು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸೋಣ ಎಂದು ಪ್ರಾರ್ಥಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ