
ಮೇ.25ರಿಂದ ಜೂ.7ರವರೆಗೆ ಉಡುಪಿ ಜಿಲ್ಲೆಯಲ್ಲಿ ಯಾವುದೇ ಮದುವೆ ಕಾರ್ಯಕ್ರಮಕ್ಕೆ ಅವಕಾಶವಿಲ್ಲ
Team Udayavani, May 24, 2021, 1:59 PM IST

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆಯನ್ನು ಇಳಿಕೆ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ನಾಳೆಯಿಂದ (ಮೇ.25) ಜೂನ್ 7ರವರೆಗೆ ಯಾವುದೇ ಮದುವೆ ಸಮಾರಂಭಗಳಿಗೆ ಅವಕಾಶ ನೀಡುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.
ಇಂದು ನಡೆದ ಮಹತ್ವದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರ ಜೊತೆ ಸಭೆ ಮಾಡಿದ್ದೇವೆ. ಮದುವೆ ಸಮಾರಂಭಗಳ ಬಳಿಕ ಕೋವಿಡ್ ಪ್ರಕರಣಗಳು ಕಂಡು ಬರುತ್ತಿದೆ. ಹೀಗಾಗಿ ಮದುವೆಗೆ ಇಂದು ಸಂಜೆಯವರೆಗೆ ನೀಡಲಾದ ಅನುಮತಿ ಮಾತ್ರ ಮಾನ್ಯವಾಗಿರುತ್ತದೆ. ಜೂ.7ರವರೆಗೆ ಮದುವೆ ಸಮಾರಂಭಗಳಿಗೆ ಅನುಮತಿ ಇಲ್ಲ. ನಿಶ್ಚಿತಾರ್ಥ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದರು.
ಇದನ್ನೂ ಓದಿ:ಕುಸ್ತಿಪಟು ಸುಶೀಲ್ ಕುಮಾರ್ ನನ್ನು ಗಲ್ಲಿಗೇರಿಸಿ: ಸಾಗರ್ ರಾಣಾ ಪೋಷಕರ ಆಕ್ರೋಶ
ಮಹೆಂದಿ, ಬೀಗರೂಟ ಮುಂತಾದ ಕಾರ್ಯಕ್ರಮ ಮಾಡಿದರೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಕಾರ್ಯಕ್ರಮದಲ್ಲಿ ಯಾರು ಭಾಗವಹಿಸಿದ್ದಾರೆ ಅವರಿಗೂ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಎಂದರು.
ಗಾಳಿ ಮಳೆಯಿಂದ ಇಲೆಕ್ಟ್ರಿಕಲ್ ವಸ್ತುಗಳು ಹಾಳಾಗಿವೆ, ಹಾಗಾಗಿ ಅನುಮತಿ ನೀಡಬೇಕು ಎಂದು ಹಲವು ಮನವಿ ಮಾಡಿದ್ದಾರೆ. ಹಾಗಾಗಿ ಕೇವಲ ಇಲೆಕ್ಟ್ರಿಕಲ್ ( ಇಲೆಕ್ಟ್ರಾನಿಕ್ ಅಲ್ಲ) ಅಂಗಡಿಗಳಿಗೆ ಬುಧವಾರ 6ರಿಂದ 10 ಗಂಟೆಯವರಿಗೆ ಅವಕಾಶ ನೀಡಿದ್ದೇವೆ. ಮತ್ತೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಜೂ.7ರವರೆಗೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಯಾರಾದರೂ ಹೋದರೆ ಅಂತವರ ವಾಹನಗಳನ್ನು ವಶಕ್ಕೆ ಪಡೆಯುತ್ತೇವೆ. ಅಗತ್ಯ ವಸ್ತುಗಳ ನೆಪದಲ್ಲಿ ಅನಗತ್ಯವಾಗಿ ತಿರುಗಾಡಬೇಡಿ ಎಂದು ಡಿಸಿ ಜಿ. ಜಗದೀಶ್ ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕದಿಂದ ಸಾಮಾಜಿಕ ಮೌನ ಕ್ರಾಂತಿ: ಡಾ| ಆಳ್ವ

ಮಟ್ಟು: ಮನೆಯೊಂದರಲ್ಲಿ ಅಗ್ನಿ ಆಕಸ್ಮಿಕ, 3 ಲಕ್ಷಕ್ಕೂ ಅಧಿಕ ನಷ್ಟ

ಚಿನ್ನದ ಬ್ರೇಸ್ಲೆಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬ್ಲೂ ಫ್ಲ್ಯಾಗ್ ಸಿಬಂದಿ

ಶಿರ್ವ ಆರೋಗ್ಯ ಮಾತಾ ಚರ್ಚ್ ವಾರ್ಷಿಕ ಮಹೋತ್ಸವ ಸಂಪನ್ನ

ತ್ರಿಶಾ ಕ್ಲಾಸಸ್: ಸಿಎ ಫೈನಲ್, ಸಿ.ಎಸ್.ಇ.ಇ.ಟಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದನೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
