ಉಡುಪಿ: ಎಪಿಎಲ್‌ ಕಾರ್ಡ್‌ದಾರರಿಗೆ ಈ ತಿಂಗಳೂ ಅಕ್ಕಿ ಮೋಸ!

Team Udayavani, Jan 19, 2023, 7:00 AM IST

ಉಡುಪಿ: ಎಪಿಎಲ್‌ ಕಾರ್ಡ್‌ದಾರರಿಗೆ ಈ ತಿಂಗಳೂ ಅಕ್ಕಿ ಮೋಸ!

ಉಡುಪಿ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಎಪಿಎಲ್‌ ಕಾರ್ಡ್‌ದಾರರಿಗೆ ಕಳೆದ ಕೆಲವು ತಿಂಗಳಿಂದ ಅಕ್ಕಿ (ರೇಷನ್‌) ಸಿಗುತ್ತಿಲ್ಲ. ಈ ಬಗ್ಗೆ ಉಭಯ ಜಿಲ್ಲೆಯ ಅಧಿಕಾರಿಗಳಿಂದಲೂ ರಾಜ್ಯಕ್ಕೆ ಮನವಿ ಸಲ್ಲಿಸಿದ್ದರೂ ಸರಿಯಾದ ಉತ್ತರ ಮಾತ್ರ ಬಂದಿಲ್ಲ.

ಏಕವ್ಯಕ್ತಿ ಎಪಿಎಲ್‌ ಕಾರ್ಡ್‌ಗೆ ತಿಂಗಳಿಗೆ 5 ಕೆ.ಜಿ. ಹಾಗೂ ಎರಡು ಅಥವಾ ಅದಕ್ಕಿಂತ ಹೆಚ್ಚು ಸದಸ್ಯರಿರುವ ಕಾರ್ಡ್‌ಗೆ ಪ್ರತೀ ತಿಂಗಳಿಗೆ ಗರಿಷ್ಠ 10 ಕೆ.ಜಿ. ಅಕ್ಕಿಯನ್ನು ಕೆ.ಜಿ.ಗೆ 15 ರೂ.ಗಳಂತೆ ನೀಡಲಾಗುತ್ತದೆ. ಎಷ್ಟೇ ಸದಸ್ಯರಿದ್ದರೂ ಎಪಿಎಲ್‌ ಕಾರ್ಡ್‌ಗೆ ತಿಂಗಳಿಗೆ 10 ಕೆ.ಜಿ.ಗಿಂತ ಜಾಸ್ತಿ ಅಕ್ಕಿ ನೀಡುವುದಿಲ್ಲ. ಅಕ್ಕಿ ಬೇಕು ಎಂದು ಮನವಿ ಸಲ್ಲಿಸಿದವರಿಗೆ ಮಾತ್ರ ಎಪಿಎಲ್‌ ಕಾರ್ಡ್‌ನಲ್ಲಿ ಅಕ್ಕಿ ವಿತರಣೆ ಮಾಡಲಾಗುತ್ತದೆ. ಆದರೆ ಮೂರ್‍ನಾಲ್ಕು ತಿಂಗಳಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಎಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಸಿಗುತ್ತಿಲ್ಲ.

ಉಡುಪಿಯಲ್ಲಿ 1,12,931 ಹಾಗೂ ದ.ಕ.ದಲ್ಲಿ 1,71,699 ಎಪಿಎಲ್‌ ಕಾರ್ಡ್‌ದಾರರಿದ್ದಾರೆ. ಇದರಲ್ಲಿ ಸರಿ ಸುಮಾರು ಶೇ. 40ರಿಂದ ಶೇ. 60ರಷ್ಟು ಕಾರ್ಡ್‌ದಾರರು ನಿರ್ದಿಷ್ಟ ಮನವಿ ಸಲ್ಲಿಸಿ ತಿಂಗಳ ರೇಷನ್‌ ಪಡೆಯುತ್ತಿದ್ದಾರೆ. ಎಪಿಎಲ್‌ ಕಾರ್ಡ್‌ ದಾರರಿಗೆ ಅಕ್ಕಿ ಪೂರೈಕೆ ಆಗದೇ ಇರುವ ಬಗ್ಗೆ ಈಗಾಗಲೇ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆಯ ಉಭಯ ಜಿಲ್ಲೆಗಳ ಅಧಿಕಾರಿಗಳು ರಾಜ್ಯಕ್ಕೆ ಪತ್ರ ಬರೆದು, ಎಪಿಎಲ್‌ ಕಾರ್ಡ್‌ದಾರರಿಗೂ ಅಕ್ಕಿ ಒದಗಿಸುವಂತೆ ಕೋರಿಕೊಂಡಿದ್ದಾರೆ.

ಸ್ಥಳೀಯವಾಗಿ ಹೊಂದಾಣಿಕೆ
ಸ್ಥಳೀಯವಾಗಿ ಮುಟ್ಟುಗೋಲು ಹಾಕಿಕೊಂಡಿರುವ ಅಕ್ಕಿಯನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಕೆಲವೊಂದು ತಾಲೂಕುಗಳಲ್ಲಿ ಎಪಿಎಲ್‌ ಕಾರ್ಡ್‌ದಾರರಿಗೆ ವಿತರಣೆ ಮಾಡುತ್ತಿದ್ದಾರೆ. ಅದು ಕೂಡ ತೀರಾ ಕಡಿಮೆ ಇರುವುದರಿಂದ ಆ ನಿರ್ದಿಷ್ಟ ತಾಲೂಕಿನ ಅರ್ಹ ಕಾರ್ಡ್‌ದಾರರೆಲ್ಲರಿಗೂ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಆಂಧ್ರ ಅಥವಾ ಮಹಾರಾಷ್ಟ್ರದಿಂದ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಿ ನೀಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜನವರಿ ಅಂತ್ಯದೊಳಗೆ ಜಿಲ್ಲೆಗೆ ಅಕ್ಕಿ ಬರಬಹುದು. ಅಕ್ಕಿ ಬಂದ ಅನಂತರದಲ್ಲಿ ಹಂಚಿಕೆ ಪ್ರಕ್ರಿಯೆ ಮಾಡಲಿದ್ದೇವೆ. ಈ ಹಿಂದಿನ ತಿಂಗಳಿನ ಅಕ್ಕಿ ಸೇರಿಸಿ ನೀಡಬೇಕೋ ಅಥವಾ ಪ್ರಸ್ತುತ ತಿಂಗಳಿಗೆ ಮಾತ್ರ ನೀಡಬೇಕೋ ಎಂಬುದನ್ನು ಸರಕಾರದ ಆದೇಶದಂತೆ ಮುಂದುವರಿಯಲಿದ್ದೇವೆ. ಕೇಂದ್ರ ಸರಕಾರದಿಂದ ಎಪಿಎಲ್‌ ಕಾರ್ಡ್‌ಗೆ ಎಷ್ಟು ಅಕ್ಕಿ ನೀಡಲಾಗುತ್ತಿದೆಯೋ ಅಷ್ಟನ್ನು ಮಾತ್ರ ಒದಗಿಸಲಾಗುತ್ತಿದೆ. ಎಪಿಎಲ್‌ ಕಾರ್ಡ್‌ದಾರರಿಗೆ ರಾಜ್ಯ ಸರಕಾರ ಪ್ರತ್ಯೇಕವಾಗಿ ಖರೀದಿಸಬೇಕಾಗಿದೆ. ಹೀಗಾಗಿ ಪೂರೈಕೆಯಲ್ಲಿ ವ್ಯತ್ಯಾಸವಾಗಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ಗ್ರಾಹಕರ ಅಸಮಾಧಾನ
ಹಣ ಪಾವತಿ ಮಾಡಿದರೂ ಸರಕಾರ ಸರಿಯಾದ ಸಮಯದಲ್ಲಿ ಅಕ್ಕಿ ನೀಡದೆ ಇರುವುದು ಸರಿಯಲ್ಲ. ಅಕ್ಕಿ ನೀಡುವುದಿಲ್ಲ ಎಂದಾದರೂ ಮುಂಚಿತವಾಗಿ ಹೇಳಬೇಕು ಅಥವಾ ನಿರ್ದಿಷ್ಟ ಕಾರಣದಿಂದ ಅಕ್ಕಿ ಬಂದಿಲ್ಲ ಎಂದಾದರೂ ತಿಳಿಸಬೇಕು. ಯಾವುದನ್ನೂ ಸರಿಯಾಗಿ ಹೇಳುತ್ತಿಲ್ಲ. ಪ್ರತೀ ತಿಂಗಳು ನ್ಯಾಯಬೆಲೆ ಅಂಗಡಿಗೆ ಹೋಗಿ ವಾಪಸ್‌ ಬರುವುದೇ ಆಗಿದೆ. ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದರೂ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಗ್ರಾಹಕರು ಅಸಮಾಧಾನ ಹೊರಹಾಕಿದ್ದಾರೆ.

ಎಪಿಎಲ್‌ ಕಾರ್ಡ್‌ ದಾರರಿಗೆ ಅಕ್ಕಿ ಸಿಗದೇ ಇರುವುದು ಗಮನಕ್ಕೆ ಬಂದಿದೆ. ಅದರಂತೆ ಮೇಲಾಧಿಕಾರಿಗಳಿಗೆ ಪತ್ರವನ್ನು ರವಾನೆ ಮಾಡಿದ್ದೇವೆ. ಶೀಘ್ರವೇ ಅಕ್ಕಿ ಬರುವ ಸಾಧ್ಯತೆಯೂ ಇದೆ.
– ಮೊಹಮ್ಮದ್‌ ಇಸಾಕ್‌ / ಎನ್‌.ಮಾಣಿಕ್ಯ, ಉಪ ನಿರ್ದೇಶಕರು, ಆಹಾರ ಇಲಾಖೆ ಉಡುಪಿ, ದ.ಕ. ಜಿಲ್ಲೆ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.