ತಿಂಗಳಾದರೂ ಕಡಲಿಗಿಳಿಯದ ನಾಡದೋಣಿಗಳು
ಚುರುಕಾಗದ ಮುಂಗಾರು, ಸಮುದ್ರದಲ್ಲೇಳದ ತೂಫಾನ್
Team Udayavani, Jun 30, 2019, 5:09 AM IST
ಮಲ್ಪೆ: ನಾಡದೋಣಿ ಮೀನುಗಾರಿಕೆ ಆರಂಭವಾಗಿ ತಿಂಗಳು ಕಳೆದರೂ ಇನ್ನೂ ಸಂಪೂರ್ಣವಾಗಿ ದೋಣಿಗಳು ಸಮುದ್ರಕ್ಕೆ ಇಳಿದಿಲ್ಲ. ಕರಾವಳಿಯಾದ್ಯಂತ ಸಮುದ್ರದಲ್ಲಿ ಮೀನುಗಾರಿಕೆಗೆ ಪೂರಕವಾದ ವಾತಾವರಣ ಇಲ್ಲದೆ ಮೀನುಗಾರರು ಕೈ ಚೆಲ್ಲಿ ಕುಳಿತಿದ್ದಾರೆ.
ಕಡಲಾಳದಲ್ಲಿ ತೂಫಾನ್ ಎದ್ದು ನೀರಿನ ಬದಲಾವಣೆಯಿಂದಾಗಿ ವಿವಿಧ ಜಾತಿಯ ಮೀನುಗಳು ಕಡಲತೀರದತ್ತ ಧಾವಿಸುವುದು ವಾಡಿಕೆ. ಈ ಬಾರಿ ವಾಯು ಚಂಡಮಾರುತದ ಪ್ರಭಾವ ದಿಂದ ಉಂಟಾದ ತೂಫಾನ್ ಆಗಿದ್ದು ಬಿಟ್ಟರೆ ಮಳೆಗಾಲದಲ್ಲಿ ಉಂಟಾಗುವ ಸಾಮಾನ್ಯ ತೂಫಾನ್ ಏಳದಿರುವುದು ಮೀನುಗಾರರಲ್ಲಿ ನಿರಾಶೆ ಮೂಡಿಸಿದೆ.
ಒಂದು ದಿನ ಅಲ್ಪಸ್ವಲ್ಪ ಬೂತಾಯಿ
ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಬುಧವಾರ ದಂದು ಸುಮಾರು 20ರಷ್ಟು ನಾಡದೋಣಿಗಳು ಸಮುದ್ರಕ್ಕೆ ತೆರಳಿದ್ದು, ಅಲ್ಪಸ್ವಲ್ಪ ಬೂತಾಯಿ ಮೀನು ಲಭಿಸಿದೆ. ಅನಂತರದ ದಿನಗಳಲ್ಲಿ ಸಮುದ್ರದಲ್ಲಿ ಮೀನು ಲಭ್ಯತೆ ಲಕ್ಷಣ ಕಂಡು ಬಂದಿಲ್ಲ. ಎರಡು ದಿನದಿಂದ ಒಂದೇ ಸವನೆ ಬೀಸುತ್ತಿರುವ ಗಾಳಿಯಿಂದಾಗಿಯೂ ಮೀನುಗಾರಿಕೆಗೆ ತೆರಳಲು ಸಾಧ್ಯವಾಗಿಲ್ಲ ಎನ್ನಲಾಗಿದೆ.
ಮಳೆ ಚುರುಕುಗೊಂಡಿಲ್ಲ.
ಜೂನ್ ತಿಂಗಳಿನಿಂದ ನಾಡದೋಣಿ ಮೀನುಗಾರಿಕೆಗೆ ಅವಕಾಶವಿದ್ದರೂ ಇದೀಗ ಒಂದು ತಿಂಗಳು ಪೂರ್ಣ ಕೈ ತಪ್ಪಿದೆ. ಆ. 1ರಿಂದ ಯಾಂತ್ರಿಕ ಬೋಟ್‌ಗಳು ಸಮುದ್ರಕ್ಕೆ ಇಳಿಯಲಿವೆ. ಕಡಲು ಪ್ರಕ್ಷುಬ್ಧವಾಗಿದ್ದರಿಂದ ಕಳೆದ ವರ್ಷವೂ ಕೂಡ ಈ ಹೊತ್ತಲ್ಲಿ ನಾಡದೋಣಿಗಳಿಗೆ ಕಡಲಿಗಿಳಿಯಲು ಸಾಧ್ಯವಾಗಿರಲಿಲ್ಲ. ಎರಡು ತಿಂಗಳ ಅವಧಿಯ ಕೊನೆಯ 10 ದಿವಸದಲ್ಲಿ ಮೀನು ದೊರಕಿತ್ತು. ಸಾಂಪ್ರದಾಯಿಕ ಮೀನುಗಾರಿಕೆಯಲ್ಲಿ ಮಳೆಗೆ ಹೆಚ್ಚು ಪ್ರಾಧಾನ್ಯ. ಜೋರಾದ ಮಳೆಗೆ ನೆರೆ ನೀರು ಬಂದು ಸಮುದ್ರ ಸೇರಬೇಕು. ಸಿಹಿ ನೀರು ಸಮುದ್ರ ಸೇರಿದಾಗ ತಮಗೆ ಆಹಾರ ಸಿಗಬಹುದು ಎಂದು ಮೀನುಗಳು ಸಮುದ್ರ ತೀರ ಪ್ರದೇಶಕ್ಕೆ ಬರುತ್ತವೆ. ಇದರಿಂದ ನಾಡದೋಣಿ ಮೀನುಗಾರರಿಗೆ ಅನುಕೂಲ. ಈ ಬಾರಿಯ ಮಳೆ ತೀರ ಕಡಿಮೆಯಾದ್ದರಿಂದ ಇದುವರೆಗೂ ಅಂತಹ ವಾತಾವರಣವೇ ಸೃಷ್ಟಿಯಾಗಿಲ್ಲ ಎನ್ನುತ್ತಾರೆ ಮೀನುಗಾರರು.
ಬ್ಯಾಂಕ್ ಸಾಲ ಸಿಗುತ್ತಿಲ್ಲ
ಮಳೆಗಾಲದ ಅಲ್ಪಾವಧಿಯ ನಾಡ ದೋಣಿಗೆ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಸಾಲ ಯೋಜನೆ ಸಿಗುವುದಿಲ್ಲ. ಹಾಗಾಗಿ ಬಹುತೇಕ ದೋಣಿಯವರು ಇನ್ನಿತರ ಮೂಲಗಳಿಂದ ಸಾಲ ಪಡೆದೇ ಮೀನುಗಾರಿಕೆ ನಡೆಸುತ್ತಾರೆ. ನಿಗದಿತ ದಿನದಂದು ವಾಪಸ್ ಕೊಡುವುದು ಕಷ್ಟವಾಗುತ್ತದೆ ಎನ್ನುತ್ತಾರೆ ಮೀನುಗಾರರು.
– ನಟರಾಜ್ ಮಲ್ಪೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ
ಯುಜಿಡಿ ಪೈಪ್ ಲೈನ್ ಗೆ ಖಾಸಗಿ ಲೇಔಟ್ ನ ಪೈಪ್ ಲೈನ್ ಜೋಡಣೆ : ಅಧಿಕಾರಿಗಳಿಂದ ತಡೆ
ಜಿಲ್ಲೆಯಲ್ಲಿ ಆತ್ಮಹತ್ಯೆ ಹೆಚ್ಚಳ
ಕೋವಿಡ್ 19: ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದ ಸೌದಿ ಅರೇಬಿಯಾ
ರೋಹಿತ್ ಶರ್ಮಾಗೆ ಬ್ರೇಕ್ ಕೊಟ್ಟಿದ್ಯಾಕೆ? ಇದು ಅನಗತ್ಯ: ರವಿ ಶಾಸ್ತ್ರಿ