Udupi ಅತೀ ವೇಗಕ್ಕಿಲ್ಲ ನಿಯಂತ್ರಣ: ಹೆಚ್ಚುತ್ತಿರುವ ನಿರ್ಲಕ್ಷ್ಯದ ವಾಹನ ಚಾಲನೆ

ಪಾದಚಾರಿಗಳಿಗೆ ಕಂಟಕ

Team Udayavani, Nov 14, 2023, 4:52 PM IST

Udupi ಅತೀ ವೇಗಕ್ಕಿಲ್ಲ ನಿಯಂತ್ರಣ: ಹೆಚ್ಚುತ್ತಿರುವ ನಿರ್ಲಕ್ಷ್ಯದ ವಾಹನ ಚಾಲನೆ

ಉಡುಪಿ: ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ನಿರ್ಲಕ್ಷ್ಯದ ವಾಹನ ಚಾಲನೆ ಹೆಚ್ಚುತ್ತಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುವ ಪಾದಚಾರಿಗಳು ಜೀವ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ಉಡುಪಿ ನಗರ ಬೆಳೆಯುತ್ತಿದ್ದಂತೆ ವಾಹನಗಳ ಓಡಾಟ ಸಂಖ್ಯೆಯೂ ಹೆಚ್ಚುತ್ತಿದೆ. ಕಳೆದ 10 ವರ್ಷಗಳಲ್ಲಿ ಉಡುಪಿ ನಗರ ಅಗಾಧ ಪ್ರಮಾಣದಲ್ಲಿ ಬೆಳೆದಿದೆ. ಅಷ್ಟೇ ಪ್ರಮಾಣದಲ್ಲಿ ಟ್ರಾಫಿಕ್‌ ದಟ್ಟಣೆ,

ರಸ್ತೆ ಅಪಘಾತ ಸಂಭವಿಸುತ್ತಿದೆ. ಕೆಲವಡೆ ರಸ್ತೆಗಳು ವ್ಯವಸ್ಥಿತವಾಗಿದ್ದರೆ, ಕೆಲವು ಕಡೆಗಳಲ್ಲಿ ಅವೈಜ್ಞಾನಿಕ ಕಟ್ಟಡ ನಿರ್ಮಾಣ ರಸ್ತೆಗಳು ನಗರದಲ್ಲಿ ಟ್ರಾಫಿಕ್‌ ಜಾಮ್‌ ಮತ್ತು ಅಪಘಾತ ಸಂಖ್ಯೆ ಹೆಚ್ಚಳವಾಗಲು ಕಾರಣವಾಗುತ್ತಿದೆ. ಎಲ್ಲಕ್ಕಿಂತ ಹೆಚ್ಚಾಗಿ ವಾಹನ ಸವಾರರ ನಿರ್ಲಕ್ಷ್ಯದಿಂದಾಗಿಯೇ ಸಾಕಷ್ಟು ಅಪಘಾತ ಸಂಭವಿಸುತ್ತಿದೆ ಎಂಬುದು ಕಳವಳಕಾರಿಯಾಗಿದೆ.

ಒಂದೇ ದಿನ ಎರಡು ಸಾವು
ನಗರದ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲಿ ವೇಗದ, ನಿರ್ಲಕ್ಷ್ಯದ ಚಾಲನೆ ಹೆಚ್ಚುತ್ತಿದೆ. ಶುಕ್ರವಾರ ಒಂದೇ ದಿನ ಇಬ್ಬರು ಪಾದಚಾರಿಗಳು ಅಪಘಾತಕ್ಕೆ ಬಲಿಯಾಗಿದ್ದಾರೆ. ಗುಂಡಿಬೈಲು, ನಿಟ್ಟೂರು ಬಾಳಿಗ ಜಂಕ್ಷನ್‌ ಬಳಿ ರಸ್ತೆ ದಾಟುತ್ತಿದ್ದ ವೇಳೆ ವಾಹನಗಳಿಗೆ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸಂತೆಕಟ್ಟೆ-ಅಂಬಾಗಿಲು-ಅಂಬಲಪಾಡಿ, ಮಲ್ಪೆ-ಕಲ್ಮಾಡಿ, ಪೆರಂಪಳ್ಳಿ-ಅಂಬಾಗಿಲು, ಡಿಸಿ ಕಚೇರಿ -ಸಿಂಡಿಕೇಟ್‌ ಸರ್ಕಲ್‌, ಗುಂಡಿಬೈಲು-ಕಲ್ಸಂಕ ರಸ್ತೆ, ಕಡಿಯಾಳಿ, ಕುಂಜಿಬೆಟ್ಟು, ಎಂಜಿಎಂ, ಮಣಿಪಾಲ-ಅಲೆವೂರು ರಸ್ತೆ, ಶಿರಿಬೀಡು, ಬನ್ನಂಜೆ ಈ ರಸ್ತೆಗಳಲ್ಲಿ ಸಣ್ಣಪುಟ್ಟ ಮತ್ತು ಗಂಭೀರ ಅಪಘಾತ ಸಂಖ್ಯೆ ನಿರಂತರವಾಗಿದೆ. ಅನಧಿಕೃತ ಪಾರ್ಕಿಂಗ್‌, ವೇಗದ ಚಾಲನೆ, ಅವೈಜ್ಞಾನಿಕ ರಸ್ತೆ ಡಿವೈಡರ್‌ನ ತಿರುವು ಅಪಘಾತ ಹೆಚ್ಚಲು ಕಾರಣ ಎನ್ನುತ್ತಾರೆ ಸ್ಥಳೀಯರು.

ದಂಡ ಬಿಸಿಗೆ ಬಗ್ಗದ ವೇಗಿಗಳು
ಎಷ್ಟೇ ಸಂಚಾರ ನಿಯಮ ಬಿಗು ಇದ್ದರೂ ಟ್ರಾಫಿಕ್‌ ದಟ್ಟಣೆ ನಡುವೆಯೂ ಕೆಲವು ದ್ವಿಚಕ್ರ, ಕಾರು ಚಾಲಕರು ವೇಗ ತಗ್ಗಿಸದೆ ವಾಹನ ಚಾಲನೆ ಮಾಡುವ ಮೂಲಕ ಅಪಘಾತ ಸಂಭವಿಸಲು ಕಾರಣವಾಗುತ್ತಿದ್ದಾರೆ. ವೇಗದ ವಾಹನ ಚಾಲನೆ ಮಾಡುವರನ್ನು ಸಂಚಾರಿ ಪೊಲೀಸರು ಅಲ್ಲಲ್ಲಿ ತಡೆದು ದಂಡ ವಿಧಿಸುತ್ತಿದ್ದಾರೆ. ಪೊಲೀಸರ ದಂಡ ಬಿಸಿಗೂ ಕೆಲವು ವಾಹನ ಸವಾರರು ಬಗ್ಗುತ್ತಿಲ್ಲ. ವೇಗದ ಚಾಲನೆಗೆ ಮದ್ಯ, ಇನ್ನಿತರೆ ಮಾದಕ ದ್ರವ್ಯ ವ್ಯಸನವು ಕಾರಣವಾಗುತ್ತಿದೆ. ರಸ್ತೆ ಸುರಕ್ಷತೆಗೆ ಅಳವಡಿಸಿದ ಬ್ಯಾರಿಕೇಡ್‌ಗೂ
ಸಹ ಢಿಕ್ಕಿ ಹೊಡೆಯುವ ಘಟನೆಗಳು ವರದಿಯಾಗಿವೆ.

ಇಲಾಖಾ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ
ಸಂಚಾರ ನಿಯಮ ಮೀರುವ ವಾಹನ ಸವಾರರಿಗೆ ದಂಡ ವಿಧಿಸುವ ಕಾರ್ಯ ನಿರಂತರ ನಡೆಯುತ್ತಿದೆ. ನಗರ ವ್ಯಾಪ್ತಿಯಲ್ಲಿ ನಿರ್ಲಕ್ಷ್ಯ, ಅತೀವೇಗದ ವಾಹನ ಚಾಲನೆ ಬಗ್ಗೆ ನಿಗಾ ವಹಿಸಲಾಗಿದೆ. ಅತೀವೇಗ, ನಿರ್ಲಕ್ಷ್ಯದ ವಾಹನ ಚಾಲನೆ ಮಾಡದಂತೆ ಸಂಚಾರ ನಿಯಮಕ್ಕೆ ಸಂಬಂಧಿಸಿ ಇಲಾಖೆ ವತಿಯಿಂದ ಜಾಗೃತಿಯನ್ನೂ ಮೂಡಿಸುತ್ತಿದ್ದೇವೆ.
-ಶೇಖರ್‌, ಪಿಎಸ್‌ಐ, ಸಂಚಾರ ಪೊಲೀಸ್‌ ಠಾಣೆ, ಉಡುಪಿ.

– ಅವಿನ್‌ ಶೆಟ್ಟಿ

ಟಾಪ್ ನ್ಯೂಸ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.