ರಾಜ್ಯದ ಸರಕಾರಿ ಪ್ರೌಢಶಾಲೆಗಳಲ್ಲಿ ಎನ್ನೆಸ್ಸೆಸ್‌ ಪ್ರಾರಂಭ


Team Udayavani, Jan 2, 2019, 7:42 AM IST

1-january-10.jpg

ಉಡುಪಿ : ಈ ತನಕ ರಾಜ್ಯದ ಪ.ಪೂ. ಮತ್ತು ಪದವಿ ಕಾಲೇಜುಗಳಲ್ಲಿ ಮಾತ್ರ ಅನುಷ್ಠಾನದಲ್ಲಿದ್ದ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು (ಎನ್‌ ಎಸ್‌ಎಸ್‌) ಈ ಶೈಕ್ಷಣಿಕ ಸಾಲಿನಿಂದ ಪ್ರೌಢಶಾಲೆಗಳಿಗೂ ವಿಸ್ತರಿಸಲಾಗಿದ್ದು ಅದರಂತೆ ಪ್ರಾರಂಭಿಕವಾಗಿ ರಾಜ್ಯದ ಆಯ್ದ 340 ಪ್ರೌಢಶಾಲೆಗಳಲ್ಲಿ ಈ ಸಾಲಿನಿಂದಲೇ ಎನ್‌ಎಸ್‌ಎಸ್‌ ಘಟಕವನ್ನು ಪ್ರಾರಂಭಿಸಲಾಗಿದೆ.

ಅನುದಾನವನ್ನು ಬಿಡುಗಡೆ
8 ಮತ್ತು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆಸಕ್ತ 50ರಿಂದ 100 ವಿದ್ಯಾರ್ಥಿಗಳ ಘಟಕವನ್ನು ಪ್ರಾರಂಭಿಸಿ ಕಾರ್ಯ ಪ್ರವೃತ್ತರಾಗುವುದಂತೆ ರಾಜ್ಯದ ವಿವಿಧ ಜಿಲ್ಲೆಯಿಂದ ಆಯ್ಕೆಯಾಗಿರುವ ಪ್ರತಿ ಜಿಲ್ಲೆಯ 10 ಸರಕಾರಿ ಪ್ರೌಢಶಾಲಾ ಮುಖ್ಯಸ್ಥರಿಗೆ ಇಲಾಖೆ ಸೂಚಿಸಿ ಬೇಕಾದ ಅನುದಾನವನ್ನು ಬಿಡುಗಡೆ ಮಾಡಿದೆ. ಇದಕ್ಕೆ ಬೇಕಾದ ಹಣಕಾಸಿನ ಸಹಾಯವನ್ನು ಯುವ ಸಶಕ್ತೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಎನ್‌ ಎಸ್‌ಎಸ್‌ ಕೋಶವು ಭರಿಸಲಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕವೇ ಈ ಕಾರ್ಯಕ್ರಮವು ಜಾರಿಯಾಗಲಿದ್ದು, ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳ ಮೂಲಕ ವ್ಯಕ್ತಿತ್ವ ವಿಕಸನವನ್ನು ಸಾಧಿಸುವುದು ಹಾಗೂ ಸಮಾಜ ಸೇವೆಯ ಅರಿವನ್ನು ಪ್ರೌಢ ಹಂತದಲ್ಲೆ ವಿದ್ಯಾರ್ಥಿಗಳಿಗೆ ನೀಡುವುದು ಇಲಾಖೆಯ ಮುಖ್ಯ ಉದ್ದೇಶವಾಗಿರುತ್ತದೆ. ಪ್ರೌಢ ಹಂತದಲ್ಲೇ ಎನ್‌ಎಸ್‌ಎಸ್‌ ಬಗ್ಗೆ ಅರಿವು ಮೂಡಿಸಿದರೆ ಪ.ಪೂ. ಹಾಗೂ ಪದವಿ ಕಾಲೇಜುಗಳಲ್ಲಿ ಇದನ್ನು ಮುಂದುವರಿಸಲು ಅನುಕೂಲವಾಗಲಿದೆ ಎಂಬ ಆಶಯ ಇಲಾಖೆಯದ್ದಾಗಿದೆ.

ಉಡುಪಿ ಜಿಲ್ಲೆಗೆ ಸಂಬಂಧಪಟ್ಟಂತೆ ಉಡುಪಿ ಬಾಲಕಿಯರ ಸರಕಾರಿ ಪ.ಪೂ ಕಾಲೇಜು, ಒಳಕಾಡು ಪ್ರೌಢಶಾಲೆ, ಬ್ರಹ್ಮಾವರ, ಕುಂದಾಪುರ, ಬಿದ್ಕಲ್‌ ಕಟ್ಟೆ, ಬೈಲೂರು, ಹೆಬ್ರಿ, ಮಣೂರು, ನಾವುಂದ, ಕಂಬದಕೋಣೆ ಸರಕಾರಿ ಪ.ಪೂ. ಕಾಲೇಜುಗಳ ಪ್ರೌಢಶಾಲೆಗಳಲ್ಲಿ ಈ ಸಾಲಿನಿಂದಲೇ ಎನ್‌ಎಸ್‌ಎಸ್‌ ಘಟಕವನ್ನು ಪ್ರಾರಂಭಿಸಲು ಇಲಾಖೆ ಕ್ರಮಕೈಗೊಂಡಿದೆ. 

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.