ಅ. 2: ಉಡುಪಿ ಜಿಲ್ಲೆ ಒಡಿಎಫ್ ಪ್ಲಸ್‌ -1 ಘೋಷಣೆ


Team Udayavani, Aug 19, 2021, 6:53 AM IST

ಅ. 2: ಉಡುಪಿ ಜಿಲ್ಲೆ ಒಡಿಎಫ್ ಪ್ಲಸ್‌ -1 ಘೋಷಣೆ

ಉಡುಪಿ: ಜಿಲ್ಲೆಯು ಈಗಾಗಲೇ ವೈಯಕ್ತಿಕ ಗೃಹ ಶೌಚಾಲಯ ನಿರ್ಮಾಣದಲ್ಲಿ ಬಯಲು ಶೌಚ ಮುಕ್ತ ಜಿಲ್ಲೆಯಾಗಿದ್ದು, ಸಂಪೂರ್ಣ ಜಿಲ್ಲೆಯನ್ನು ಒಡಿಎಫ್ ಪ್ಲಸ್‌ -1 ಎಂದು ಘೋಷಣೆ ಮಾಡುವ ನಿಟ್ಟಿನಲ್ಲಿ  ಹಲವು ಕಾರ್ಯ ಕ್ರಮಗಳನ್ನು  ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯನ್ನು  ಸಂಪೂರ್ಣ ಒಡಿಎಫ್ ಪ್ಲಸ್‌ -1 ಎಂದು ಘೋಷಣೆ ಮಾಡಲು, ಜಿಲ್ಲೆಯ ಎಲ್ಲ  ಗ್ರಾಮಗಳಲ್ಲಿ  ಶೌಚಾಲಯ ಗಳ ನಿರ್ಮಾಣ, ಬಳಕೆ ಹಾಗೂ ನಿರ್ವಹಣೆ, ಘನತ್ಯಾಜ್ಯ ನಿರ್ವಹಣೆ, ಅಗತ್ಯ ವಿರುವ ಕಡೆ ಸಮುದಾಯ ಶೌಚಾಲಯ ನಿರ್ಮಾಣ ಮತ್ತು ಬಳಕೆ ಈ ಎಲ್ಲ ಅಂಶಗಳು ಅನುಷ್ಠಾನವಾಗಿರುವುದನ್ನು  ಪರಿಶೀಲಿಸಲಾಗುತ್ತದೆ.

ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ  2020-21ನೇ ಸಾಲಿನಲ್ಲಿ ಒಟ್ಟು 1,369 ವೈಯಕ್ತಿಕ ಗೃಹ ಶೌಚಾಲಯಗಳ ಗುರಿ ಹೊಂದಿದ್ದು, ಈಗಾಗಲೇ ಈ ಎಲ್ಲ ಶೌಚಾಲಯಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. ತ್ಯಾಜ್ಯ ನಿರ್ವಹಣೆಯಲ್ಲಿ  ಜಿಲ್ಲೆಯ 131 ಗ್ರಾ.ಪಂ.ಗಳಲ್ಲಿ ಘನ ತ್ಯಾಜ್ಯವನ್ನು ಕುಟುಂಬದ ಹಂತದಲ್ಲಿಯೇ ಬೇರ್ಪಡಿಸಿ ಸ್ವಸಹಾಯ ಸಂಘಗಳ ಮೂಲಕ ಸಂಗ್ರಹಿಸಿ ವೈಜ್ಞಾನಿಕವಾಗಿ ನಿರ್ವಹಿಸಲಾಗುತ್ತಿದೆ.

ಜಿಲ್ಲೆಯಲ್ಲಿ  ಒಣ ತ್ಯಾಜ್ಯ ಸಂಗ್ರಹಣೆ ಸಂಗ್ರಹಣೆ ಹಾಗೂ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಹಸಿ ತ್ಯಾಜ್ಯ ವನ್ನು ಮನೆ ಹಂತದಲ್ಲಿಯೇ ನಿರ್ವಹಣೆ ಮಾಡುವಂತೆ ಜಾಗೃತಿ ಮೂಡಿಸಲಾಗುತ್ತಿದೆ.  ಒಣ ತ್ಯಾಜ್ಯ ಸಂಗ್ರ ಹಣೆಗೆ ಮನೆ ಮನೆಗೆ ನೀಲಿ ಬಣ್ಣದ ಬ್ಯಾಗ್‌ ನೀಡಲಾಗುತ್ತಿದ್ದು,  ಈಗಾಗಲೇ ಜಿಲ್ಲೆಯ 92 ಗ್ರಾ.ಪಂ.ಗಳಿಗೆ ಒಣ ತ್ಯಾಜ್ಯ ಸಂಗ್ರಹಣೆ ಮಾಡಲು ಸ್ವಚ್ಛ ವಾಹಿನಿ ವಾಹನವನ್ನು ವಿತರಿಸಲಾಗಿದೆ.

ಎಂಆರ್ಎಫ್ ಘಟಕ :

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ 2.50 ಕೋಟಿ ರೂ ಮೊತ್ತದಲ್ಲಿ, ರಾಜ್ಯದ ಗ್ರಾಮೀಣ ಪ್ರದೇಶದ ಮೊದಲ ಎಂಆರ್‌ಎಫ್ ಘಟಕವು (ಮೆಟೀರಿಯಲ್‌ ರಿಕವರಿ ಫೆಸಿಲಿಟಿ- ಕೇಂದ್ರೀಕೃತ ಘನ ತ್ಯಾಜ್ಯ ಸಂಸ್ಕರಣ ಘಟಕ) ಕಾರ್ಯಾರಂಭ ಮಾಡುವ ಹಂತದಲ್ಲಿದೆ. ಸುಮಾರು 73 ಸಾವಿರ ಮನೆ ಹಾಗೂ 7,000 ವಾಣಿಜ್ಯ ಘಟಕಗಳ ಘನ ತ್ಯಾಜ್ಯ ಸಂಸ್ಕರಣೆಯನ್ನು ಇಲ್ಲಿ ಮಾಡಲು ಯೋಜನೆ ಸಿದ್ಧಗೊಂಡಿದೆ. ಘಟಕವು ಪ್ರತಿ ನಿತ್ಯ 10 ಟನ್‌ ತ್ಯಾಜ್ಯ ವಿಲೇವಾರಿಯ ಸಾಮರ್ಥ್ಯವನ್ನು ಹೊಂದಿದೆ.

ಎಫ್ಎಸ್ಎಂ ಪ್ಲಾಂಟ್‌ :

ಪ್ರಾಯೋಗಿಕವಾಗಿ ಉಡುಪಿ ಜಿಲ್ಲೆಯಲ್ಲಿ 80 ಬಡಗಬೆಟ್ಟು ಹಾಗೂ ಕಾರ್ಕಳ ತಾ|ನ ಕುಕ್ಕುಂದೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಲ ತ್ಯಾಜ್ಯ ನಿರ್ವಹಣೆ ಘಟಕ ಆರಂಭ ವಾಗುತ್ತಿದೆ. ಇದರಿಂದಾಗಿ ಸುತ್ತಮುತ್ತಲಿನ ಗ್ರಾ.ಪಂ.ಗಳ ಕುಟುಂಬಗಳಿಗೆ ಅನುಕೂಲವಾಗಲಿದೆ.

ಜಿಲ್ಲೆಯಲ್ಲಿ ಈಗಾಗಲೇ 132ಕ್ಕೂ ಹೆಚ್ಚು ಗ್ರಾ.ಪಂ.ಗಳು ಒಡಿಎಫ್ ಪ್ಲಸ್‌-1 ಎಂದು ಘೋಷಣೆಯಾಗಿದ್ದು, ಎಲ್ಲ 155 ಗ್ರಾ.ಪಂ.ಗಳನ್ನು ಅ.2ರ ಗಾಂಧೀ ಜಯಂತಿಯಂದು ಒಡಿಎಫ್ ಪ್ಲಸ್‌ -1 ಎಂದು ಘೋಷಣೆ ಮಾಡುವ ಗುರಿ ಹೊಂದಲಾಗಿದೆ. ಈ ಬಗ್ಗೆ ಈಗಾಗಲೇ ಸಂಬಂಧಪಟ್ಟ ಎಲ್ಲ ಗ್ರಾ.ಪಂ.ಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದ್ದು, ಅವಧಿಯೊಳಗೆ ಗುರಿ ಸಾಧಿಸುವಂತೆ ಸೂಚನೆ ನೀಡಲಾಗಿದೆ.ಡಾ| ನವೀನ್ ಭಟ್,  ಜಿ.ಪಂ. ಸಿಇಒ, ಉಡುಪಿ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.