ನಗರಸಭೆ ವ್ಯಾಪ್ತಿಯ ಜನರಿಗೆ ನಿತ್ಯವೂ ನರಕ ದರ್ಶನ

ಪ್ರತಿದಿನವೂ ಉಕ್ಕುವ ಮ್ಯಾನ್‌ಹೋಲ್‌ಗ‌ಳು

Team Udayavani, Dec 11, 2019, 4:17 AM IST

ಉಡುಪಿ: ಮ್ಯಾನ್‌ ಹೋಲ್‌ಗ‌ಳ್ಳೋ ಅಥವಾ ಮರಣಶ್ಯೆ ದಿಬ್ಬಗಳ್ಳೋ! ಇವುಗಳನ್ನು ಏನೆಂದು ಹೆಸರಿಸಿದರೆ ಸೂಕ್ತ ಎನ್ನುವ ಜಿಜ್ಞಾಸೆ ನಗರವಾಸಿಗಳನ್ನು ಕಾಡುತ್ತಿದೆ. ನೆಲದೊಳಗೆ “ಗುಪ್ತಗಾಮಿನಿ’ಯಂತೆ ಹರಿಯುವ ಒಳಚರಂಡಿ ನೀರು ಆಗಾಗ ಯುಜಿಡಿ ಕೊಳವೆ ಮಾರ್ಗ ಎಲ್ಲೋ ಒಂದು ಕಡೆ ಬಂದಾಗಿ, ಮ್ಯಾನ್‌ ಹೋಲ್‌ಗ‌ಳ ಮೂಲಕ ಕೊಳಚೆ ನೀರು ರಸ್ತೆ ಮೇಲೆ ಉಕ್ಕಿ ಹರಿಯುತ್ತದೆ.

ಉಡುಪಿ ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಸುಮಾರು 2,000 ಅಧಿಕ ಮ್ಯಾನ್‌ ಹೋಲ್‌ಗ‌ಳಿವೆ. ಪ್ರತಿ ವಾರ್ಡ್‌ಗೆ ಸುಮಾರು 100 ಮ್ಯಾನ್‌ಹೋಲ್‌ಗ‌ಳಿದ್ದು, ನಿತ್ಯ ಒಂದಲ್ಲೊಂದು ಮ್ಯಾನ್‌ಹೋಲ್‌ಗ‌ಳಿಂದ ಕೊಳಚೆ ನೀರು ಉಕ್ಕಿ ಹರಿಯುತ್ತಿದೆ.

ಮ್ಯಾನ್‌ಹೋಲ್‌ಗ‌ಳಿಂದ ಕೊಳಚೆ ನೀರು ಉಕ್ಕಿ ಹರಿಯುತ್ತಿರುವ ಕುರಿತು ಅಧಿಕಾರಿಹಾಗೂ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದರೂ ಮ್ಯಾನ್‌ಹೋಲ್‌ ದುರಸ್ತಿಗೆ 8ರಿಂದ 10 ದಿನ ತೆಗೆದುಕೊಳ್ಳುತ್ತಿದ್ದಾರೆ. ಕೆಲವೊಮ್ಮೆ ತಿಂಗಳಾದರೂ ದುರಸ್ತಿ ಮಾಡದ ನಿದರ್ಶನಗಳೂ ಇದೆ. ಇದರಿಂದಾಗಿ ಇಡೀ ಪ್ರದೇಶ ದುರ್ವಾಸನೆ ಬೀರುತ್ತಿದ್ದು, ಕೊಳಚೆ ನೀರಿನಿಂದ ಪಾದಚಾರಿಗಳಿಗೆ ನಡೆದಾಡಲು ತೊಂದರೆಯಾಗುತ್ತಿದೆ.

ಒಂದು ಯಂತ್ರ -35 ವಾರ್ಡ್‌
ಉಡುಪಿ ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳ ಸುಮಾರು 2,000 ಮ್ಯಾನ್‌ಹೋಲ್‌ಗ‌ಳನ್ನು ದುರಸ್ತಿಗೊಳಿಸಲು ಇರುವುದು ಕೇವಲ ಒಂದು ಜೆಟ್ಟಿಂಗ್‌ ಯಂತ್ರ. ಪ್ರಸ್ತುತ ನಗರಸಭೆಯ ಜೆಟ್ಟಿಂಗ್‌ ಯಂತ್ರ ಹಳೆಯದಾಗಿದೆ. ಈ ಯಂತ್ರ ಒಂದು ಬ್ಲಾಕೇಜ್‌ ಸರಿಪಡಿಸಲು ಸುಮಾರು ಒಂದು ತಾಸು ತೆಗೆದುಕೊಳ್ಳುತ್ತಿದೆ. ಈ ಯಂತ್ರ ಆಗಿಂದಾಗ್ಗೆ ಹಾಳಾಗುತ್ತಿರುವುದರಿಂದ ಮ್ಯಾನ್‌ಹೋಲ್‌ಗ‌ಳ ಬ್ಲಾಕೇಜ್‌ ಸರಿ ಪಡಿಸಲು ವಿಳಂಬವಾಗುತ್ತಿದೆ ಎನ್ನುವ ಆರೋಪಗಳಿವೆ.

ಸಾವಿನ ಗುಂಡಿ
ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಉತ್ತಮ ರಸ್ತೆಗಳನ್ನು ಈಗಿನ ಪರಿಸ್ಥಿತಿಯಲ್ಲಿ ಬ್ಯಾಟರಿ ಬೆಳಕಿನಲ್ಲಿ ಹುಡುಕುವ ಪರಿಸ್ಥಿತಿ ಇದೆ. ಇಂತಹ ರಸ್ತೆಗಳಲ್ಲಿ ಅಲ್ಲಲ್ಲಿ ತಲೆಎತ್ತಿರುವ ಮ್ಯಾನ್‌ಹೋಲ್‌ಗ‌ಳು ರಸ್ತೆ ಮಟ್ಟಕ್ಕಿಂತ 3 ಇಂಚಿನಿಂದ ಅರ್ಧ ಅಡಿ, ಕೆಲವು ಕಡೆ ಒಂದು ಅಡಿವರೆಗೂ ಮೇಲ್ಮಟ್ಟದಲ್ಲಿವೆ. ಇನ್ನು ಕೆಲವು ಕಡೆ ರಸ್ತೆ ಮಟ್ಟಕ್ಕಿಂತ ಅರ್ಧ ಅಡಿ ಆಳಕ್ಕೆ “ಸಾವಿನ ಗುಂಡಿ’ಯಂತೆ ಇವೆ. ಬೇಸಗೆ ಮತ್ತು ಹಗಲು ವೇಳೆ ಇಂತಹ ಗುಂಡಿಗಳನ್ನು ನೋಡಿಕೊಂಡು ಎಚ್ಚರದಿಂದ ವಾಹನ ಚಲಾಯಿಸಬಹುದು. ರಾತ್ರಿ ವೇಳೆ ಮತ್ತು ಮಳೆ ಸುರಿಯುತ್ತಿದ್ದಾಗ ಮ್ಯಾನ್‌ಹೋಲ್‌ಗ‌ಳ ಗುಂಡಿಗಳಿಂದ ಬೈಕ್‌ ಸವಾರರು, ವಾಹನ ಚಾಲಕರು ಹಾಗೂ ಪಾದಚಾರಿಗಳನ್ನು ದೇವರೇ ಕಾಪಾಡಬೇಕು.

ಸಾರ್ವಜನಿಕರ ಜವಾಬ್ದಾರಿ ಮುಖ್ಯ
ಸಾರ್ವಜನಿಕರ ಮನೆಯಿಂದ ಡ್ರೈನೇಜ್‌ ಪೈಪ್‌ ಲೈನ್‌ಗೆ ಸಂಪರ್ಕ ಪಡೆಯುವಾಗ ಜಾಲಿಗಳನ್ನು ಅಳವಡಿಸಬೇಕು. ಇದರಿಂದಾಗಿ ಘನ ವಸ್ತುಗಳು ನೇರವಾಗಿ ಡ್ರೈನೇಜ್‌ ಪೈಪ್‌ಲೈನ್‌ ಸೇರುವುದು ತಪ್ಪುತ್ತದೆ. ಪ್ರಸ್ತುತ ಸಾರ್ವಜನಿಕರು ಘನ ತ್ಯಾಜ್ಯಗಳನ್ನು ಡ್ರೈನೇಜ್‌ಗೆ ಬಿಡುತ್ತಿರು ವುದರಿಂದ ಮ್ಯಾನ್‌ಹೋಲ್‌ಗ‌ಳು ಉಕ್ಕಿ ಹರಿಯುತ್ತಿವೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಎಚ್ಚರ ವಹಿಸಬೇಕು. ಇಲ್ಲವಾದರೆ ಮುಂದೊಂದು ದಿನದ ಡ್ರೈನೇಜ್‌ ಪೈಪ್‌ಗ್ಳಲ್ಲಿ ಕೊಳಚೆ ನೀರು ಬದಲಾಗಿ ಮನೆ ಘನ ತ್ಯಾಜ್ಯಗಳ ರಾಶಿ ಇರಲಿದೆ.

ಶೀಘ್ರವಾಗಿ ದುರಸ್ತಿಗೊಳಿಸಿ
ವಾರ ಕಳೆದರೂ ಮ್ಯಾನ್‌ಹೋಲ್‌ಗ‌ಳ ದುರಸ್ತಿ ಕಾರ್ಯಕ್ಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಮನಸ್ಸು ಮಾಡುತ್ತಿಲ್ಲ. ಜನರ ಸಮಸ್ಯೆಗೆ ಶೀಘ್ರದಲ್ಲಿ ಸ್ಪಂದಿಸುವ ಮನೋಭಾವವನ್ನು ಬೆಳೆಸಿಕೊಂಡರೆ ಉತ್ತಮ. ಶೀಘ್ರವಾಗಿ ಮ್ಯಾನ್‌ಹೋಲ್‌ಗ‌ಳ ಅವ್ಯವಸ್ಥೆಗೆ ಮುಕ್ತಿ ನೀಡಿ.
-ರಾಮಕೃಷ್ಣ , ಬನ್ನಂಜೆ.

ಕೊಳಚೆ ನೀರು ನೇರವಾಗಿ ನದಿಗೆ
ಕಲ್ಸಂಕ ಗುಂಡಿಬೈಲು ಮಾರ್ಗವಾಗಿ 10ಕ್ಕೂ ಅಧಿಕ ಮ್ಯಾನ್‌ಹೋಲ್‌ಗ‌ಳಿವೆ. ತಿಂಗಳಿಗೊಮ್ಮೆ ಒಂದಲ್ಲೊಂದು ಮ್ಯಾನ್‌ಹೋಲ್‌ ಬ್ಲಾಕ್‌ ಆಗುತ್ತಿದೆ. ಕೊಳಚೆ ನೀರು ರಸ್ತೆಯಲ್ಲಿ ನಿಲ್ಲುತ್ತಿರುವುದರಿಂದ ದ್ವಿಚಕ್ರ ವಾಹನಗಳು ಸ್ಕಿಡ್‌ ಆಗುತ್ತಿವೆ.
-ನವೀನ, ವಾಹನ ಸವಾರ

ಶೀಘ್ರ ಪರಿಹಾರಕ್ಕೆ‌ ಪ್ರಯತ್ನ
ಸಾರ್ವಜನಿಕರು ಮನೆಯಿಂದ ಘನ ತ್ಯಾಜ್ಯಗಳನ್ನು ಡ್ರೈನೇಜ್‌ಗೆ ಹಾಕುತ್ತಿರು ವುದರಿಂದ ಮ್ಯಾನ್‌ಹೋಲ್‌ಗ‌ಳು ಬ್ಲಾಕ್‌ ಆಗುತ್ತಿವೆೆ. ಈ ಬಗ್ಗೆ ಜನತೆಯೂ ಜವಾಬ್ದಾರಿಯುತವಾಗಿ ವರ್ತಿಸಬೇಕು. ಸಮಸ್ಯೆಯನ್ನು ಸಾಧ್ಯವಾದಷ್ಟು ಶೀಘ್ರದಲ್ಲಿ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ.
-ಪ್ರಭಾಕರ್‌, ನಗರಸಭೆ ಸದಸ್ಯ

ಸಾಂಕ್ರಾಮಿಕ ರೋಗದ ಭೀತಿ
ಕೆಲವೊಂದು ಮ್ಯಾನ್‌ಹೋಲ್‌ ಸಮೀಪದಲ್ಲಿ ಮನೆಗಳಿಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದ್ದು, ಮ್ಯಾನ್‌ಹೋಲ್‌ಗ‌ಳು ಸೊಳ್ಳೆ ಉತ್ಪಾದಕ ಕೇಂದ್ರವಾಗಿ ಪರಿಣಮಿಸಿದೆ.

ನಾಗರಿಕ ಸಮಸ್ಯೆ ಇದ್ದರೆ ನಮಗೆ ತಿಳಿಸಿ 9148594259

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ