“ಸಿಎಎ ವಿರುದ್ಧ ಜನರ ಹೋರಾಟ’: ದಿನೇಶ್‌ ಗುಂಡೂ ರಾವ್‌

Team Udayavani, Jan 20, 2020, 5:43 AM IST

ಉಡುಪಿ: ಸಿಎಎ ವಿರುದ್ಧ ನಡೆಯುತ್ತಿ ರುವ ಹೋರಾಟ ಕಾಂಗ್ರೆಸ್‌ನದಲ್ಲ, ಜನರು ಸ್ವಯಂ ಪ್ರೇರಣೆಯಿಂದ ಹೋರಾಟ ಕೈಗೆತ್ತಿಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂ ರಾವ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಎ ಕೇಂದ್ರದ್ದು. ಅನೇಕ ರಾಜ್ಯಗಳು ತಿರಸ್ಕರಿಸಿವೆ. ಸುಪ್ರೀಂ ಕೋರ್ಟ್‌ ಮುಂದೆಯೂ ಆ ವಿಚಾರ ಇದೆ. ಅದು ಜನಪರ ನಿರ್ಧಾರ ಕೈಗೊಳ್ಳುವ ಭರವಸೆ ಇದೆ ಎಂದರು.

ಅಮಿತ್‌ ಶಾ ಭಾಷಣದ ಮೂಲಕ ರಾಜ್ಯದ ಜನತೆಯ ದಾರಿ ತಪ್ಪಿಸಿದ್ದಾರೆ. ಧರ್ಮದ ಆಧಾರದಲ್ಲಿ ವಿಭಜನೆ ಮಾಡಬೇಡಿ, ಒಂದು ಸಮುದಾಯವನ್ನು ದ್ವೇಷ ಮಾಡುವುದ‌ು ಸಂವಿಧಾನ ವಿರೋಧಿ ಎಂದು ಮಾತ್ರ ನಾವು ಹೇಳಿದ್ದೇವೆ. ಕಾಯಿದೆ ಜಾರಿಗೊಳ್ಳುವುದರಿಂದ ಸಮಾಜದಲ್ಲಿ ಸಮಸ್ಯೆ ಉಂಟಾಗಬಾರದು ಎಂಬುದು ನಮ್ಮ ಉದ್ದೇಶ ಎಂದರು.

ಗುಹಾ ಹೇಳಿಕೆಗೆ ಪ್ರತಿಕ್ರಿಯೆ
ಕೇರಳದ ಜನರು ರಾಹುಲ್‌ ಆಯ್ಕೆ ಮಾಡಿರುವುದು ದೊಡ್ಡ ದುರಂತ ಎಂಬ ಇತಿಹಾಸ ತಜ್ಞ ರಾಮಚಂದ್ರ ಗುಹಾ ಹೇಳಿಕೆಗೆ ಪ್ರತಿಕ್ರಿಯಿಸಿದ ದಿನೇಶ್‌ ಗುಂಡೂರಾವ್‌, ಇದು ಅವರ ವೈಯಕ್ತಿಕ ಅಭಿಪ್ರಾಯ. ಗಾಂಧಿ ಕುಟುಂಬ ಮತ್ತು ರಾಹುಲ್‌ ಗಾಂಧಿ ದೇಶಕ್ಕೆ ಬಹಳ ದೊಡ್ಡ ಸೇವೆ ಕೊಟ್ಟಿದ್ದಾರೆ. ಕಾಂಗ್ರೆಸ್‌ಗೆ ರಾಹುಲ್‌ ಗಾಂಧಿ ನಾಯಕತ್ವದ ಅಗತ್ಯ ಇದೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ