ಶೇ. 10 ಮೀಸಲಾತಿಯಿಂದ ಬ್ರಾಹ್ಮಣ ಸಮಾಜಕ್ಕೆ ಲಾಭ :  ಮಾಲಿನಿ

Team Udayavani, Jan 21, 2019, 12:50 AM IST

malini.jpg

ಕೋಟ: ಮುಂದುವರಿದ ಸಮಾಜಗಳು ಇದುವರೆಗೆ ಸಾಮಾಜಿಕವಾಗಿ ತುಳಿತಕ್ಕೆ ಒಳಗಾಗಿದ್ದವು.  ಆದರೆ ಇದೀಗ ನಮ್ಮ ಸಂಘಟಿತ ಹೋರಾಟದ ಫಲವಾಗಿ ಕೇಂದ್ರ ಸರಕಾರ ಈ ಸಮಾಜಕ್ಕೆ ಶೇ. 10 ಮೀಸಲಾತಿ ನೀಡಿದೆ. ಇದರಿಂದ ನಮ್ಮ ಮಕ್ಕಳ ಶಿಕ್ಷಣ, ಉದ್ಯೋಗಕ್ಕೆ ಸಾಕಷ್ಟು ಅನುಕೂಲವಾಗಲಿದೆ ಎಂದು ಎಂದು  ಬೆಂಗಳೂರಿನ ಅಖೀಲ ಭಾರತ ಬ್ರಾಹ್ಮಣ ಫೆಡರೇಶನ್‌ ಮಹಿಳಾ ವೇದಿಕೆಯ ಅಧ್ಯಕ್ಷೆ ಮಾಲಿನಿ ಹೇಳಿದರು.

ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಬಯಲು ರಂಗ ಮಂದಿರದಲ್ಲಿ ರವಿವಾರ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಮತ್ತು ಮಹಿಳಾ ವೇದಿಕೆಯ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ  ಪ್ರಥಮ ವಿಪ್ರ ಮಹಿಳಾ ಸಮ್ಮೇಳನವನ್ನು ಉದ್ಘಾಟಿಸಿ ಅವರು  ಮಾತನಾಡಿದರು. 

ಬ್ರಾಹ್ಮಣ ಸಮಾಜದ ಮಹಿಳೆಯರು  ಭಾರತೀಯ ಸಂಸ್ಕೃತಿಯನ್ನು ಅತ್ಯಂತ ಆಪ್ತವಾಗಿ ಪಾಲಿಸಿದ್ದಾರೆ. ಇಂದು ನಮ್ಮ ಸಂಸ್ಕಾರ, ಸಂಸ್ಕೃತಿಗಳು  ನಶಿಸುತ್ತಿದೆ. ಹೀಗಾಗಿ ಈ ಸಂಸ್ಕೃತಿಯನ್ನು ಉಳಿಸಿ, ಬೆಳೆಸಲು ಬ್ರಾಹ್ಮಣ ಸಮಾಜದವರು ಕೊಡುಗೆ ನೀಡಬೇಕಿದೆ. ಇಂದು ನಮ್ಮ  ಮಕ್ಕಳು ಸಂಸ್ಕೃತಿ-ಸಂಪ್ರದಾಯದಿಂದ ದೂರವಾಗುತ್ತಿದ್ದು, ಅವರಿಗೆ ಬುದ್ಧಿ ಹೇಳಬೇಕಾದ ಅಗತ್ಯವಿದೆ.  ಇದೇ ರೀತಿ ಮುಂದುವರಿದರೆ 2040-45ರ ವೇಳೆ ದೇಶದಲ್ಲಿ ಹಿಂದೂ ಜನಾಂಗ ಶೇ.50ಕ್ಕೆ ಇಳಿಯುವ ಆತಂಕಕಾರಿ ಮಾಹಿತಿ ಸಮೀಕ್ಷೆಗಳಿಂದ ಬಹಿರಂಗಗೊಂಡಿದೆ ಎಂದರು. 

ಸಭಾ ಕಾರ್ಯಕ್ರಮಕ್ಕೆ  ಮುಂಚಿತವಾಗಿ ರಥಬೀದಿಯಲ್ಲಿ ಕಾಲ್ನಡಿಗೆ ಜಾಥಾ  ನಡೆಯಿತು. ಬೆಂಗಳೂರಿನ ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಎನ್‌.ವೆಂಕಟನಾರಾಯಣ “ವಿಪ್ರ ಧ್ವನಿ’ ಮಾಸ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಸಂತೆಕಟ್ಟೆ ಕಲ್ಯಾಣಪುರದ ನಿವೃತ್ತ ಉಪನ್ಯಾಸಕಿ ಮಹಾಲಕ್ಷ್ಮೀ ದಿಕ್ಸೂಚಿ ಭಾಷಣ ಮಾಡಿದರು. ಹಿರಿಯ ಮಹಿಳೆಯರನ್ನು  ಸಮ್ಮಾನಿಸಲಾಯಿತು. ರಾಜ್ಯಮಟ್ಟದ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ವಿಶೇಷವಾಗಿ ಗೌರವಿಸಲಾಯತು ಹಾಗೂ ಶಕ್ತಿಯುತ ಬ್ರಾಹ್ಮಣಕ್ಕಾಗಿ ವಿಪ್ರ ಮಹಿಳಾ ಸಮ್ಮಿಲನ ವಿಷ¿åದ ಬಗ್ಗೆ ಕಾರ್ಕಳದ ಸಾವಿತ್ರಿ  ಮನೋಹರ್‌ ಮತ್ತು ಪ್ರಸ್ತುತ ಸಮಾಜದಲ್ಲಿ ವಿಪ್ರ ಮಹಿಳೆಯರ ಪಾತ್ರ ವಿಷಯದ ಬಗ್ಗೆ ಸಾಲಿಗ್ರಾಮದ ಯಶೋದಾ ಸಿ.  ಹೊಳ್ಳ ಉಪನ್ಯಾಸ ನೀಡಿದರು.

ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೃಷ್ಣಾನಂದ ಚಾತ್ರ, ಉಡುಪಿ ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಸಾಲಿಗ್ರಾಮ ಗುರುನರಸಿಂಹ ದೇಗುಲದ  ಧರ್ಮದರ್ಶಿ ಅನಂತಪದ್ಮನಾಭ ಐತಾಳ, ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಂ.ಮಂಜುನಾಥ ಉಪಾಧ್ಯಾಯ, ಸಾಲಿಗ್ರಾಮ ವಲಯ ಬ್ರಾಹ್ಮಣ ಮಹಾಸಭಾದ  ಶಿವರಾಮ ಉಡುಪ, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಮಹಿಳಾ ವೇದಿಕೆಯ ಗೌರವಾಧ್ಯಕ್ಷ ಶೋಭಾ ಉಪಾಧ್ಯಾಯ, ಕುಂದಾಪುರ ತಾ|  ಬ್ರಾಹ್ಮಣ ಪರಿಷತ್‌ ಮಹಿಳಾ ವೇದಿಕೆಯ ಅಧ್ಯಕ್ಷೆ ಪವಿತ್ರಾ ಅಡಿಗ, ಕಾರ್ಕಳ ವೇದಿಕೆಯ ಉಪಾಧ್ಯಕ್ಷೆ ಶೋಭಾ ಕಲ್ಕೂರ, ಉಡುಪಿಯ ಕಾರ್ಯದರ್ಶಿ ಪದ್ಮಲತಾ ಎಸ್‌. , ಸಾಲಿಗ್ರಾಮ ಪ.ಪಂ. ಸದಸ್ಯೆ ಅನುಸೂಯಾ ಆನಂದರಾಮ ಹೇಳೆì ಉಪಸ್ಥಿತರಿದ್ದರು. 

ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಮಹಿಳಾವೇದಿಕೆಯ ಅಧ್ಯಕ್ಷೆ ಶಾಂತಾ ಗಣೇಶ್‌ ರಾವ್‌ ಪ್ರಾಸ್ತಾವಿಕವಾಗಿ ಮಾತನಾಡಿ,  ಪೂರ್ಣಿಮಾ ಜನಾದ‌ìನ ಕೊಡವೂರು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.