ಮಂಗಳೂರು ವೈದ್ಯ ಪದ್ಮನಾಭ್ ಕಾಮತ್ ಜನಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ…!   

Team Udayavani, Mar 7, 2021, 9:04 PM IST

Modi

ಮಣಿಪಾಲ: ಹಳ್ಳಿಗಳ ‘ಮನೆ ಬಾಗಿಲಿಗೆ  ಹೃದ್ರೋಗ ಚಿಕಿತ್ಸೆ’ ರೂವಾರಿ ಮಂಗಳೂರಿನ ಖ್ಯಾತ ವೈದ್ಯ ಡಾ. ಪದ್ಮನಾಭ ಕಾಮತ್ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.

ಜನೌಷಧ ದಿನಾಚರಣೆ ಪ್ರಯುಕ್ತ ಇಂದು (ಮಾರ್ಚ್ 7) ದೇಶದ ನಾಲ್ಕು ಭಾಗಗಳ ಜನೌಷಧ ಕೇಂದ್ರದ ಮಾಲೀಕರು ಮತ್ತು ಫಲಾನುಭವಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಂವಾದದಲ್ಲಿ ವೈದ್ಯ ಡಾ. ಪದ್ಮನಾಭ ಕಾಮತ್ ಭಾಗವಹಿಸಿದರು.

ಈ ವೇಳೆ ಮಾತನಾಡಿದ ಅವರು, ಮೂರು ವರ್ಷದಿಂದ ಜನೌಷಧಿ ಅಭಿಯಾನದಲ್ಲಿ ಭಾಗಿಯಾಗಿದ್ದೇನೆ. ಗ್ರಾಮೀಣ ಭಾಗದ ಬಡಜನರಿಗೆ ಹೃದಯಾಘಾತ ಆಗುತ್ತಿತ್ತು. ಅವರಿಗೆ ತಕ್ಷಣದ ಚಿಕಿತ್ಸೆ ನೀಡುವುದು ಕಷ್ಟ ಆಗುತ್ತಿತ್ತು. ಹಾಗಾಗಿ ಜನೌಷಧಿ ಕೇಂದ್ರದಲ್ಲಿ ಇಸಿಜಿ ಯಂತ್ರ ಹಾಕಿದೆ. ಆರಂಭದಲ್ಲಿ ಜನರು ನನಗೆ ಹುಚ್ಚು ಅಂದರು. ಆದರೆ ನನಗೆ ಜನರ ಕಷ್ಟಗಳಿಗೆ ಸ್ಪಂದಿಸುವುದು ಮುಖ್ಯವಾಗಿತ್ತು. ಆರು ಕಡೆ ಜನೌಷಧಿ‌ ಕೇಂದ್ರದಲ್ಲಿ ಇಸಿಜಿ ಯಂತ್ರ ಅಳವಡಿಸಿದೆ. ಇದರ ಫಲಾನುಭವಿಗಳ ಸಂತೋಷ ಕಂಡರೆ ಸಾರ್ಥಕ ಅನುಭವ ಆಗುತ್ತದೆ. ಈ ಮೂಲಕ ನೂರು ಹೃದಯಾಘಾತವಾಗುವ ಪ್ರಕರಣ ಪತ್ತೆ ಮಾಡಿದ್ದೇವೆ. ರೋಗಿಗಳ ಜೀವ ಉಳಿಸಿದ್ದೇವೆ. ಜನೌಷಧಿ, ಸೇವೆ ಮತ್ತು ಉದ್ಯೋಗದ ಉತ್ತಮ ಸಂದೇಶ ನೀಡಿದೆ. ಓರ್ವ ನಿರುದ್ಯೋಗಿ ಯುವಕನಿಗೆ ಹಣ ಕೊಟ್ಟು ಜನೌಷಧ ಆರಂಭಿಸಲು ಪ್ರೇರಣೆ ನೀಡಿದೆ. ಈಗ ಆ ಕೇಂದ್ರ ಅಗ್ರಪಂಕ್ತಿಯಲ್ಲಿದೆ ಎಂದರು.

ಕಾಮತ್ ಅವರ ಮಾತುಗಳನ್ನು ಆಲಿಸಿದ ಪ್ರಧಾನಿ ಮೋದಿ, ಮೊದಲಿಗೆ ನಿಮ್ಮ ಸೇವಾ ಮನೋಭಾವಕ್ಕೆ ಶುಭಾಶಯ ತಿಳಿಸುತ್ತೇನೆ ಎಂದರು. ಜತೆಗೆ ‘ಜನೌಷಧಿ ಜನ ಉಪಯೋಗಿ’ ಎನ್ನುವ ಘೋಷವಾಕ್ಯ ಸೂಚಿಸಿದರು. ನಿಮ್ಮನ್ನು ನೋಡಿದರೆ ‘ಸೇವೆ’ ಮಾಡುವುದು ನಿಮ್ಮ ಸಂಸ್ಕಾರ ಎಂದೆನ್ನಿಸುತ್ತದೆ. ನಿಜವಾದ ವೈದ್ಯರ ಪ್ರತಿರೂಪ ನೀವು, ನಿಮ್ಮನ್ನು ಭೇಟಿ ಮಾಡಿರುವುದು ಖುಷಿ ನೀಡಿತು ಎಂದರು.

ಇನ್ನು ವೈದ್ಯ ಕಾಮತ್ ಜತೆ ನಡೆಸಿದ ಸಂಭಾಷಣೆಯ ಕುರಿತು ಟ್ವೀಟ್ ಮಾಡಿರುವ ಮೋದಿ, ಮಂಗಳೂರಿನ ವೈದ್ಯ ಡಾ. ಕಾಮತ್ ಅವರು ತಮ್ಮ ಸ್ವಇಚ್ಛೆಯಿಂದ ಹೃದಯ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಜತೆಗೆ ಜನೌಷಧಿ ಯೋಜನೆ ಅತೀ ಕಡಿಮೆ ಅವಧಿಯಲ್ಲಿ ಜನ ಉಪಯೋಗಿಯಾಗಿ ಅನೇಕ ಜನರ ಆರೋಗ್ಯಯುತ ಜೀವನಕ್ಕೆ ಸಹಾಯಕವಾಗಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮನೆ ಬಾಗಿಲಿಗೆ ಸೇವೆ :

ಇನ್ನು ವೈದ್ಯ ಕಾಮತ್ ಅವರು ವಾಟ್ಸ್‌ಆ್ಯಪ್‌ ಗ್ರೂಪ್‌ ರಚಿಸಿದ್ದಾರೆ. ಈ ಗ್ರೂಪಿನಲ್ಲಿ ವೈದ್ಯರು ಹಾಗೂ ಆ್ಯಂಬ್ಯುಲೆನ್ಸ್‌ ಚಾಲಕರೂ ಇದ್ದಾರೆ. ಸರ್ಕಾರಿ, ಖಾಸಗಿ ಆಸ್ಪತ್ರೆ ಮಾತ್ರವಲ್ಲ ಕ್ಲಿನಿಕಲ್‌ ವೈದ್ಯರೂ ಈ ಗುಂಪಿನಲ್ಲಿದ್ದಾರೆ. ತಮ್ಮಲ್ಲಿಗೆ ಬರುವ ಹೃದ್ರೋಗಿಯ ತಪಾಸಣೆ ನಡೆಸಿ ಇಸಿಜಿ ವರದಿಯನ್ನು ಫೋಟೋ ತೆಗೆದು ಈ ಗ್ರೂಪ್‌ಗೆ ಅಪ್‌ಲೋಡ್‌ ಮಾಡಿದರೆ ಸಾಕು. ಕ್ಷಣಮಾತ್ರದಲ್ಲಿ ಡಾ.ಪದ್ಮನಾಭ ಕಾಮತ್‌ ಅವರು ವರದಿಯನ್ನು ಪರಿಶೀಲಿಸಿ ಸಲಹೆ ನೀಡುತ್ತಾರೆ. ಇದರಿಂದಾಗಿ ನೂರಾರು ಹೃದ್ರೋಗಿಗಳ ಪ್ರಾಣ ಉಳಿಯುವಂತಾಗಿದೆ. ಪ್ರಸ್ತುತ ಡಾ.ಪದ್ಮನಾಭ ಕಾಮತ್‌ ಅವರ ಬಳಿ ನಾಲ್ಕು ವಾಟ್ಸ್‌ಆ್ಯಪ್‌ ಗ್ರೂಪ್‌ ಇದ್ದು, ಮೂರು ಗ್ರೂಪ್‌ಗಳಲ್ಲಿ ರಾಜ್ಯಾವ್ಯಾಪಿ ವೈದ್ಯರಿದ್ದರೆ. ನಾಲ್ಕನೆಯದರಲ್ಲಿ ದೇಶಾದ್ಯಂತದ ವೈದ್ಯರಿದ್ದಾರೆ.

ಡಾ.ಪದ್ಮನಾಭ ಕಾಮತ್‌ ಅವರು ಕಾರ್ಡಿಯಾಲಜಿ ಎಟ್‌ ಡೋರ್‌ ಸ್ಟೆಪ್‌(ಸಿಎಡಿ)ಹೆಸರಿನಲ್ಲಿ ಇಸಿಜಿ ಯಂತ್ರಗಳನ್ನು ವಿತರಿಸುತ್ತಿದ್ದಾರೆ. ಈ ಮೂಲಕ ಹಳ್ಳಿಗಳಿಗೆ ಮನೆ ಬಾಗಿಲಿಗೆ ಹೃದ್ರೋಗ ಚಿಕಿತ್ಸೆ ನೀಡುತ್ತಿದ್ದಾರೆ. ಇವರು ರಚಿಸಿರುವ ವೈದ್ಯರ ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಖಾಸಗಿ ವ್ಯಕ್ತಿಗಳೂ ತುರ್ತು ಸಂದೇಶ ಕಳುಹಿಸಿ ವೈದ್ಯಕೀಯ ಸಲಹೆ ಪಡೆಯಬಹುದು. ವೈದ್ಯರ ವಾಟ್ಸ್‌ಆ್ಯಪ್‌ ಗುಂಪಿನ ಸಂಖ್ಯೆ ಹೆಲ್ಪ್ ಲೈನ್‌ (9743287599) ಕಾರ್ಯ ನಿರ್ವಹಿಸುತ್ತಿದೆ. ಈ ಸಂಖ್ಯೆಗೆ ಕರೆ ಹೋಗುವುದಿಲ್ಲ. ಆದರೆ ಹೃದ್ರೋಗಕ್ಕೆ ಸಂಬಂಧಿಸಿ ಯಾವುದೇ ವೈದ್ಯಕೀಯ ಸಲಹೆಗಳನ್ನು ಇವರು ನೀಡುತ್ತಾರೆ. ಯಾವುದೇ ಹೊತ್ತಿನಲ್ಲಿ ಸಮಸ್ಯೆ ಬಂದಲ್ಲಿ ಅದಕ್ಕೆ ತಕ್ಷಣ ಸ್ಪಂದಿಸುವುದು ಇವರ ಹೆಚ್ಚುಗಾರಿಕೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.