ಕೊನೆಗೂ ಕಾಂಗ್ರೆಸ್‌ ಚಿಹ್ನೆ ಕಂಡ ಪ್ರಮೋದ್‌ ಮಧ್ವರಾಜ್‌ ಪ್ರಚಾರ ರಥ


Team Udayavani, Mar 27, 2018, 6:25 AM IST

260318Astro01.jpg

ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರ ಸಾಧನೆ  ಪ್ರಚುರಪಡಿಸಲು ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಪ್ರಚಾರ ರಥ (2 ಹೈಟೆಕ್‌ ವಾಹನಗಳು)ದಲ್ಲಿ ಕಾಂಗ್ರೆಸ್‌ ಚಿಹ್ನೆಗಳು ಕಾಣಿಸಿಕೊಂಡಿದೆ.

ಕಳೆದ 15 ದಿನಗಳಿಂದ ವಾಹನದಲ್ಲಿ ಪ್ರಚಾರ ಕಾರ್ಯ ಬಿರುಸಿನಿಂದ ನಡೆಯುತ್ತಿತ್ತು. ಆದರೆ ಈ ಎರಡೂ ವಾಹನಗಳಲ್ಲಿ ಸಚಿವ  ಮಧ್ವರಾಜ್‌ ಅವರ ಭಾವಚಿತ್ರ ಬಿಟ್ಟರೆ ಕಾಂಗ್ರೆಸ್‌ನ ಹಿರಿಯ ನಾಯಕರು, ಪಕ್ಷದ ಚಿಹ್ನೆ ಇದ್ದಿರಲಿಲ್ಲ. ಎಲ್‌ಇಡಿ ಪರದೆಯಲ್ಲಿ ಸಚಿವರ ಸಾಧನೆಗಳನ್ನು ಬಿಂಬಿಸುವ ಚಿತ್ರಗಳು, ಹಿನ್ನೆಲೆ ಸ್ವರದೊಂದಿಗೆ ಇದ್ದು, ಇದರಲ್ಲಿ ಕಾಂಗ್ರೆಸ್‌ ನಾಯಕರ ಚಿತ್ರಗಳು ಬರುತ್ತಲಿದ್ದವಷ್ಟೆ. ಇನ್ನೊಂದು ವಾಹನದಲ್ಲಿ ವೃತ್ತಿಪರ ಸಂಗೀತಗಾರರು ಪ್ರಮೋದ್‌ ಅವರ ಸಾಧನೆಗಳನ್ನು ಸಂಗೀತ ರೂಪದಲ್ಲಿ ಹಾಡುತ್ತಿದ್ದರು. ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳಿ ಪ್ರಚಾರ ಕಾರ್ಯವನ್ನು ದಿನಂಪ್ರತಿ ಮಾಡುತ್ತಿತ್ತು.

ಕಾರ್ಯಕರ್ತರ ಒತ್ತಡ?
ಕಾಂಗ್ರೆಸ್‌ ಶಾಸಕರಾದರೂ, ಪ್ರಚಾರ ವಾಹನದಲ್ಲಿ ಎಲ್ಲಿಯೂ ಕಾಂಗ್ರೆಸ್‌ನ ಇತರೆ ನಾಯಕರು, ಪಕ್ಷದ ಅಧಿಕೃತ ಚಿಹ್ನೆ ಬಳಕೆ ಯಾಗಿಲ್ಲ ಎನ್ನುವುದ ಕುರಿತು ಈ ಹಿಂದೆ ಮಾತನಾಡಿದ್ದ ಪ್ರಮೋದ್‌ ಮಧ್ವರಾಜ್‌ ಅಭಿಮಾನಿಗಳ ಸಮಾಜ ಸೇವಾ ಸಂಘ ಬೆಂಗಳೂರು ಇದರ ಅಧ್ಯಕ್ಷ ಎಲ್‌. ರಾಹುಲ್‌ ಅವರು, ಇದು ಪಕ್ಷದ ಪ್ರಚಾರವಲ್ಲ. ಪ್ರಮೋದ್‌ ಮಧ್ವರಾಜ್‌ ಅವರ ಅಭಿಮಾನಿ ಗಳಾದ ನಾವು ಮಾಡುತ್ತಿರುವುದು. ಈ ಕಾರಣದಿಂದ ಚಿಹ್ನೆ ಬಳಸಿಕೊಂಡಿಲ್ಲ ಎಂದಿದ್ದರು. ಚಿಹ್ನೆಯನ್ನು ಬಳಸಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಹಾಕಿರುವ ಒತ್ತಡದಿಂದ ಇದೀಗ ಚಿಹ್ನೆ ಬಳಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ವಾಹನದಲ್ಲಿ ಕಾಂಗ್ರೆಸ್‌ನ ರಾಜ್ಯ, ರಾಷ್ಟ್ರೀಯ ನಾಯಕರ‌ ಭಾವಚಿತ್ರವನ್ನೂ ಬಳಸಬೇಕು ಎನ್ನುವುದು ಕಾರ್ಯಕರ್ತರ ಆಗ್ರಹವಾಗಿದೆ.

ಅಂದು-ಇಂದು: ನಿರ್ಧಾರ ನಮ್ಮದೆ
ಅಭಿವೃದ್ಧಿ ಪರ ಕೆಲಸಗಳನ್ನು ಜನರಿಗೆ ತಿಳಿಸುವ ದೃಷ್ಟಿಯಿಂದ ಪ್ರಮೋದ್‌ ಮಧ್ವರಾಜ್‌ ಅಭಿಮಾನಿಗಳ ಸಮಾಜ ಸೇವಾ ಸಂಘದ ವತಿಯಿಂದ ಪ್ರಚಾರ ಕಾರ್ಯ ಶುರು ಮಾಡಲಾಗಿತ್ತು. ಹಾಗಾಗಿ ಚಿಹ್ನೆಯನ್ನು ಬಳಸಿಕೊಂಡಿರಲಿಲ್ಲ. ಇದೇ ಕಾರಣಕ್ಕೆ ಸ್ವಲ್ಪ ಗೊಂದಲ ಉಂಟಾಗಿದ್ದ ಕಾರಣ, ಅದನ್ನು ನಿವಾರಿಸುವ ನಿಟ್ಟಿನಲ್ಲಿ ಸಂಘದ ಸದಸ್ಯರಲ್ಲಿ ಚರ್ಚಿಸಿಕೊಂಡು ಕಾಂಗ್ರೆಸ್‌ ಪಕ್ಷದ ಚಿಹ್ನೆ ಬಳಸಲು ನಿರ್ಧರಿಸಿದಂತೆ ಇದೀಗ  ವಾಹನದಲ್ಲಿ ಅಧಿಕೃತವಾಗಿ ಚಿಹ್ನೆ ಬಳಸಿಕೊಳ್ಳಲಾಗಿದೆ. ಇಲ್ಲಿ ಯಾರ ಒತ್ತಡವೂ ಇಲ್ಲ. ಅಂದಿನ, ಇಂದಿನ ನಿರ್ಧಾರ ನಮ್ಮದೇ ಆಗಿದೆ.
– ಎಲ್‌. ರಾಹುಲ್‌, ಪ್ರಮೋದ್‌ ಮಧ್ವರಾಜ್‌ ಅಭಿಮಾನಿಗಳ ಸ. ಸೇವಾ ಸಂಘದ ರಾಜ್ಯಾಧ್ಯಕ್ಷ  

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.