ಹಕ್ಕುಪತ್ರಕ್ಕೆ  ಪ್ರತಿಭಟನೆ ನಡೆಸಿದ್ದು ಹಾಸ್ಯಾಸ್ಪದ: ಪ್ರಮೋದ್‌


Team Udayavani, Aug 22, 2017, 7:35 AM IST

pramod.jpg

ಕೋಟ:  94ಸಿ ಮತ್ತು  94ಸಿ.ಸಿಯಲ್ಲಿ  ಹಕ್ಕು ಪತ್ರಕ್ಕಾಗಿ ಅರ್ಜಿಸಲ್ಲಿಸಲು ಸೆ.12ರ ವರೆಗೆ  ಅವಕಾಶವಿದ್ದು, ಅರ್ಜಿ ಸಲ್ಲಿಸುವ ಅವಧಿ ಮುಗಿಯುವ ಮೊದಲೇ ಕುಂದಾಪುರ ಭಾಗದ ಕೆಲವು ರಾಜಕೀಯ ನಾಯಕರು ಪಾದಯಾತ್ರೆ ಮಾಡಿ ಪ್ರತಿಭಟನೆ ನಡೆಸಿದ್ದು ಹಾಸ್ಯಾಸ್ಪದ ಸಂಗತಿ ಎಂದು ಮೀನುಗಾರಿಕೆ, ಯುವ ಸಬಲೀಕರಣ, ಕ್ರೀಡಾ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಅವರು  ಶುಕ್ರವಾರ ಮಂದಾರ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕೋಟ ಹೋಬಳಿ ಮಟ್ಟದ ಜನಸಂಪರ್ಕ ಸಭೆ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್‌ ಸರಕಾರ ಆಡಳಿತಕ್ಕೆ ಬಂದ ಮೇಲೆ ಉಡುಪಿ ಜಿಲ್ಲೆಯಲ್ಲಿ 60ಸಾವಿರ ಕುಟುಂಬಕ್ಕೆ ಪಡಿತರ ಚೀಟಿ ವಿತರಿಸಿದೆ. ಇಂದು ಬಿ.ಪಿ.ಎಲ್‌.ಕಾರ್ಡ್‌ ಕೇವಲ ಪಡಿತರ ಪಡೆಯಲು ಸೀಮಿತವಾಗಿಲ್ಲ, ಆರೋಗ್ಯ ಯೋಜನೆ, ಭಾಗ್ಯಲಕ್ಷ್ಮೀ, ವಿದ್ಯುತ್‌ ಹೀಗೆ ಅನೇಕ ಸೌಲಭ್ಯಗಳಿಗೆ ಉಪಯೋಗವಾಗುತ್ತಿದೆ. ಹೀಗಾಗಿ ಹೆಚ್ಚಿನ ಷರತ್ತುಗಳನ್ನು ವಿಧಿಸದೆ ಬಿ.ಪಿ.ಎಲ್‌.ಕಾರ್ಡ್‌ಗಳನ್ನು ನೀಡಲಾಗುತ್ತಿದೆ.ರಾಜ್ಯ ಸರಕಾರ ರೈತರ ಕುರಿತು ಕಾಳಜಿಯನ್ನು ಸಾಲ ಮನ್ನಾ ಮಾಡುವುದರ ಮೂಲಕ ತೋರಿಸಿದೆ. ಅದೇ ರೀತಿ ಕೇಂದ್ರ ಸರಕಾರ ಕೂಡ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಮಾತನಾಡಿ, ಜಿಲ್ಲಾಡಳಿತ ಹಾಗೂ ಜಿ.ಪಂ. ಆಶ್ರಯದಲ್ಲಿ ಉಡುಪಿ ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಜಿಲ್ಲೆ ಮಾಡುವ ಸಂಕಲ್ಪ ಹೊಂದಿದ್ದು ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದರು.
ಈ ಸಂದರ್ಭ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು ಹಾಗೂ ಜನರ ಸಮಸ್ಯೆಯ ಕುರಿತು ಇಲಾಖೆಯ ಅಧಿಕಾರಿಗಳ ಜತೆ  ಚರ್ಚಿಸಲಾಯಿತು.

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ, ಬ್ರಹ್ಮಾವರ ವಿಶೇಷ ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌, ಉಡುಪಿ ಜಿ.ಪಂ. ಮಾಜಿ ಸದಸ್ಯ ಶಂಕರ್‌ ಕುಂದರ್‌, ಬಿಲ್ಲಾಡಿ ಗ್ರಾ.ಪಂ. ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ, ವಡ್ಡರ್ಸೆ ಗ್ರಾ.ಪಂ. ಅಧ್ಯಕ್ಷೆ ಹೇಮಾ, ಹೆಗ್ಗುಂಜೆ ಗ್ರಾ.ಪಂ. ಅಧ್ಯಕ್ಷ ಗಣೇಶ್‌ ಶೆಟ್ಟಿ, ಆವರ್ಸೆ ಗ್ರಾ.ಪಂ. ಅಧ್ಯಕ್ಷ  ಚಿತ್ತರಂಜನ್‌ ಶೆಟ್ಟಿ ಉಪಸ್ಥಿತರಿದ್ದರು. ಕಾಡೂರು ಗ್ರಾ.ಪಂ. ಪಿ.ಡಿ.ಒ. ಮಹೇಶ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Kundapura ಭಾಗದ ಅಪರಾಧ ಸುದ್ದಿಗಳು

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.