ಉಡುಪಿ ಜಿಲ್ಲೆ: 77,740  ಮಕ್ಕಳಿಗೆ ಪಲ್ಸ್‌ ಪೋಲಿಯೋ

Team Udayavani, Mar 10, 2019, 1:00 AM IST

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಾ. 10ರಂದು ನಡೆಯುವ ಪಲ್ಸ್‌ ಪೋಲಿಯೋ ಲಸಿಕೆ ವಿತರಣಾ ಕಾರ್ಯಕ್ರಮದಲ್ಲಿ 0-5 ವರ್ಷದೊಳಗಿನ ಒಟ್ಟು 77,740 (ಗ್ರಾಮೀಣ ಪ್ರದೇಶ 63,630, ನಗರ ಪ್ರದೇಶ 14,110) ಮಕ್ಕಳಿಗೆ ಲಸಿಕೆ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹೇಳಿದ್ದಾರೆ. 

ಜಿಲ್ಲೆಯಲ್ಲಿ  ಕರ್ತವ್ಯ ನಿರ್ವಹಿಸುವ ಒಟ್ಟು ಲಸಿಕಾ ಕೇಂದ್ರಗಳು 657 (ಗ್ರಾಮೀಣ ಪ್ರದೇಶ 569, ನಗರ ಪ್ರದೇಶ 88). ಇದಲ್ಲದೆ 9 ಮೊಬೈಲ್‌ ಟೀಮ್‌ ಮತ್ತು 32 ಟ್ರಾನ್ಸಿಟ್‌ ಬೂತ್‌ಗಳನ್ನು ತೆರೆದು ಪಲ್ಸ್‌ ಪೋಲಿಯೋ ಲಸಿಕೆ ನೀಡಲಾಗುತ್ತದೆ.  ಈ ಕಾರ್ಯಕ್ರಮಕ್ಕೆ ಲಸಿಕಾ ಸ್ವಯಂಸೇವಕರ ಸಂಖ್ಯೆ 2,774 ಮತ್ತು ಮೇಲ್ವಿಚಾರಕರು 137 ಅಲ್ಲದೆ ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬಂದಿಗಳು ಭಾಗವಹಿಸಿ ಯಶಸ್ವಿಯಾಗಿ ನಡೆಸಲು ಸಹಕರಿಸಲಿದ್ದಾರೆ. 

ಆರೋಗ್ಯ, ಪಂಚಾಯತ್‌ರಾಜ್‌, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಂದಾಯ ಇಲಾಖೆ ಮತ್ತು ಇತರ ಇಲಾಖೆ, ರೋಟರಿ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳ ಸಹಕಾರ, ಜಿಲ್ಲಾಡಳಿತದ ಮಾರ್ಗದರ್ಶನದೊಂದಿಗೆ ಕಾರ್ಯಕ್ರಮ ನಡೆಯಲಿದೆ.  

ಸಾರ್ವಜನಿಕರು, ವಲಸೆ ಕಾರ್ಮಿಕರು, ಕೊಳಚೆ ನಿವಾಸಿಗಳು ತಮ್ಮ 0-5 ವರ್ಷದೊಳಗಿನ  ಎಲ್ಲ  ಮಕ್ಕಳಿಗೂ ಪಲ್ಸ್‌ ಪೋಲಿಯೋವನ್ನು ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿ ಸಹಕರಿಸಬೇಕು. ಉಳಿದವರಿಗೆ ಗ್ರಾಮಾಂತರ ಪ್ರದೇಶದಲ್ಲಿ ಮಾ. 11 ಮತ್ತು 12ರಂದು ಹಾಗೂ ನಗರ ಪ್ರದೇಶದಲ್ಲಿ ಮಾ. 11ರಿಂದ 13ರ ತನಕ ಸ್ವಯಂಸೇವಕರು ಮನೆ ಮನೆ ಭೇಟಿ ನೀಡಿ ಪೋಲಿಯೋ ಹನಿ ಹಾಕಿಸಿದ ಬಗ್ಗೆ ಖಚಿತಪಡಿಸಿಕೊಳ್ಳುತ್ತಾರೆ. ಉದ್ಘಾಟನೆಯು ಮಾ. 10ರ ಬೆಳಗ್ಗೆ 8 ಕ್ಕೆ ಬೀಡಿನಗುಡ್ಡೆಯ ಅಂಗನವಾಡಿ ಕೇಂದ್ರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನನ್ನನ್ನು ಬಂಧಿಸಿರುವುದು ರಾಜಕೀಯ ಪಿತೂರಿ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ದೆಹಲಿ ಹೈಕೋರ್ಟ್‌ನಲ್ಲಿ ತಮ್ಮ...

  • ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ರೂಪಿಸಿರುವ "ಸಹಾಯ ಆ್ಯಪ್‌'ನಲ್ಲಿ ದಾಖಲಾಗುವ ದೂರುಗಳನ್ನು ಕಾಲಮಿತಿಯೊಳಗೆ ಬಗೆಹರಿಸುವುದಕ್ಕೆ...

  • ಬೆಂಗಳೂರು: ವೇತನ ಪರಿಷ್ಕರಣೆಗಾಗಿ ಎಚ್‌ಎಎಲ್‌ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನ ತಾರಕ್ಕೇರಿದ್ದು, ನೌಕರರ ಸಂಘಟನೆ ಮತ್ತು ಆಡಳಿತ...

  • ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನ ಪಡೆಯುವ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಮೇಲುಗೈ ಆಗಿರುವುದರಿಂದ, ಜೆಡಿಎಸ್‌ಗೆ...

  • ಬೆಂಗಳೂರು/ಮೈಸೂರು: ಮೈಸೂರು ಜಿಲ್ಲೆಯನ್ನು ವಿಭಜಿಸುವ ಜೆಡಿಎಸ್‌ ಅನರ್ಹ ಶಾಸಕ ಎಚ್‌.ವಿಶ್ವನಾಥ್‌ ಪ್ರಸ್ತಾವಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ...