ಭೂಮಿಯ ದಾಹ; ತಣಿಸುವ ಮೋಹ

ಬಂಟಕಲ್ಲು ಎಂಜಿನಿಯರಿಂಗ್‌ ಕಾಲೇಜಿನ ಚಾಲಕನ ಪರಿಸರ ಪ್ರೇಮ

Team Udayavani, Mar 29, 2019, 6:05 AM IST

Water-Suuply

ಕೊಳವೆಬಾವಿ ಅಂತರ್ಜಲ ಮರುಪೂರಣ ಘಟಕ.

ವಿಶೇಷ ವರದಿ – ಉಡುಪಿ: ಬೇಸಗೆ ಬಂದಾಗ ನೀರಿನ ಸಮಸ್ಯೆ ಕಾಡುವುದು ಇಂದು ನಿನ್ನೆಯ ಸಂಗತಿಯಲ್ಲ. ಆ ಕ್ಷಣಕ್ಕೆ ಹೀಗೆ ಮಾಡಬಹುದಿತ್ತಲ್ಲ ಅನ್ನುವ ಯೋಚನೆ ಬಂದರೂ ಅದು ಆ ಯೋಚನೆ ಯೋಜನೆಯಾಗುವ ಹೊತ್ತಿಗೆ ಮಳೆರಾಯ ಸುರಿದು ನೀರೊದಗಿಸುತ್ತಾನೆ. ಬಳಿಕ ನೀರಿನ ನೆನಪಾಗುವುದು ಮುಂದಿನ ಬೇಸಗೆಗೆ! ಇದು ಬಹುತೇಕ ಕಡೆ ಇರುವಂತಹ ನೈಜ ಸತ್ಯ.

ಈ ಸಾಲಿನಲ್ಲಿ ಕಲ್ಯಾಣಪುರದ ಜೋಸೆಫ್ ಜಿ.ಎಂ. ರೆಬೆಲ್ಲೊ ತುಸು ಭಿನ್ನವಾಗಿ ನಿಲ್ಲುತ್ತಾರೆ. ಬಂಟಕಲ್ಲು ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಚಾಲಕರಾಗಿರುವ ಇವರು ಬಿಡುವಿನ ಸಂದರ್ಭದಲ್ಲಿ ಭೂಮಿ ದಾಹ ತಣಿಸುವ ಪರಿಸರ ಪ್ರೇಮಿ ಕೆಲಸದಲ್ಲಿ ತೊಡಗಿಕೊಳ್ಳುತ್ತಾರೆ.

ತೆರೆದ ಬಾವಿ ಹಾಗೂ ಕೊಳವೆ ಬಾವಿಗೆ ಮಳೆ ನೀರನ್ನು ಇಂಗಿಸುವ ಕಾಯಕಕ್ಕೆ ಯುವಕರನ್ನು ಪ್ರೇರೇಪಿಸುತ್ತಿದ್ದಾರೆ. ಸಂಘ-ಸಂಸ್ಥೆಗಳು, ಶಾಲಾ- ಕಾಲೇಜುಗಳು, ಜಿ.ಪಂ., ತಾ.ಪಂಗಳಲ್ಲೂ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗ ವಹಿಸಿ ಜಲಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ರಾಜ್ಯಾದ್ಯಂತ ಮಾಹಿತಿ ನೀಡುವ ಕೆಲಸ ಎಂಟು ವರ್ಷಗಳಿಂದ ಅವರು ಈ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಸುಮಾರು 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಈ ಬಗ್ಗೆ ಮಾಹಿತಿ ನೀಡುವ ಕೆಲಸವನ್ನೂ ಇವರು ಮಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 250ಕ್ಕೂ ಅಧಿಕ ಕಡೆ ಜಲ ಮರುಪೂರಣವನ್ನು ಇವರು ನಡೆಸಿದ್ದಾರೆ. ಪವರ್‌ಪಾಯಿಂಟ್‌, ಪೈಂಟಿಂಗ್‌ ಚಿತ್ರಗಳು, ಪ್ರಾತ್ಯಕ್ಷಿಕೆಗಳ ಮೂಲಕ ಇವರು ಜನರಲ್ಲಿ ಜಾಗೃತಿ ಮೂಡಿಸಿ ಜಲಪ್ರೇಮ ಬೆಳೆಸುತ್ತಿದ್ದಾರೆ.

ಜನವರಿಯಿಂದ ಮೇ ಸೂಕ್ತ ಸಮಯ
ಜಲಮರುಪೂರಣ ಆರಂಭಿಸಲು ಜನವರಿಯಿಂದ ಮೇ ತಿಂಗಳವರೆಗೆ ಉತ್ತಮ ಕಾಲ. ಈ ಸಮಯದಲ್ಲೇ ಸಕಲ ಸಿದ್ಧತೆ ಮಾಡಿಕೊಂಡರೆ ಮಳೆಗಾಲಕ್ಕೆ ವ್ಯವಸ್ಥಿತವಾಗಿ ನೀರು ಶೇಖರಿಸಿಡಬಹುದು ಎನ್ನುತ್ತಾರೆ ಅವರು.

ಬಾಲ್ಯದಿಂದಲೇ ಪರಿಸರ ಪ್ರೀತಿ
ಬಾಲ್ಯದಿಂದಲೇ ಪರಿಸರ ಪ್ರೇಮ ಇವರಿಗೆ ರಕ್ತಗತವಾಗಿತ್ತು. ಸ್ವತ್ಛತೆ, ಅರಣ್ಯೀಕರಣ, ಗ್ರಾಮೀಣಾಭಿವೃದ್ಧಿ, ಜಲಮರುಪೂರಣದ ಬಗ್ಗೆ ಇವರು ನಿರರ್ಗಳವಾಗಿ ಮಾಹಿತಿ ನೀಡುತ್ತಾರೆ. ಇಲ್ಲಿಯವರೆಗೆ 1 ಲಕ್ಷಕ್ಕೂ ಅಧಿಕ ಮಂದಿಗೆ ತರಬೇತಿ ನೀಡಿದ ಕೀರ್ತಿ ಇವರದ್ದಾಗಿದೆ.

ನೀರಿನ ಪ್ರಾಮುಖ್ಯ
ಒಂದಿಷ್ಟು ನೀರನ್ನು ಮುಖಕ್ಕೆ ಚಿಮುಕಿಸಿದಾಗ ಚೇತರಿಸಿಕೊಳ್ಳುತ್ತೇವೆ. ಇಷ್ಟೊಂದು ಮಹತ್ವ ಪೂರ್ಣವಾದ ಶಕ್ತಿ ನೀರಿಗಿದೆ. ಆಕಸ್ಮಿಕವಾಗಿ ಎಲ್ಲಿಯಾದರೂ ಬೆಂಕಿ ಅವಗಢ ಸಂಭವಿಸಿದ ಸಂದರ್ಭಗಳಲ್ಲಿ ಬೆಂಕಿ ನಂದಿಸಲು ನೀರೇ ಪ್ರಮುಖವಾಗಿರುತ್ತದೆ. ಇಷ್ಟೇ ಅಲ್ಲದೆ ನಾವು ದಿನ ನಿತ್ಯ ಬಳಸುವ ವಸ್ತುಗಳು ಸಹಿತ ವಿದ್ಯುತ್‌ಗೂ ನೀರೇ ಮೂಲವಾಗಿದೆ. ಡ್ಯಾಂಗಳಲ್ಲಿ ಸಂಗ್ರಹಿಸಿಟ್ಟ ಈ ಮಳೆ ನೀರಿನಿಂದಲೇ ವಿದ್ಯುತ್‌ ಉತ್ಪಾದನೆಯಾಗುತ್ತಿದೆ.

ಮಳೆ ನೀರು ಇಂಗಿಸುವಿಕೆಯ ಲಾಭಗಳು
ಇದು ಪರಿಸರ ಸ್ನೇಹಿ ತಂತ್ರಜ್ಞಾನವಾಗಿದ್ದು ಕಡಿಮೆ ಖರ್ಚಿನಲ್ಲಿ ನಿರ್ವಹಿಸಬಹುದು. ಭೂಮಿಯ ತಾಪಮಾನ ಕಾಪಾಡಲು ಇದು ಸಹಕಾರಿ. ಭೂಮಿಯ ಮೇಲ್ಮಟ್ಟದಲ್ಲೇ ಸದಾ ನೀರು ದೊರಕುತ್ತದೆ. ಭೂಗರ್ಭದಲ್ಲಿ ಉತ್ತಮ ಗುಣಮಟ್ಟದ ನೀರು ಸಂಗ್ರಹಣೆಯಾಗಿ ನೀರಿನ ಸಮಸ್ಯೆ ನಿವಾರಿಸಲು ಇದು ಸಹಕಾರಿಯಾಗುತ್ತದೆ.

ಹೀಗೆ ಶೇಖರಿಸಿ
1. ಬೆಳಕು, ಗಾಳಿ ಹೋಗದಂತೆ ಸೀಲ್‌ ಮಾಡಿ ಮಳೆನೀರನ್ನು ಶೇಖರಿಸಿ ಇಡಬೇಕು.
2. ತೆರೆದ ಬಾವಿಗೂ ಮಳೆನೀರು ಹರಿಸಬಹುದು.
3.ಮಳೆನೀರಿನ ಸಂಪರ್ಕವನ್ನೂ ಬೋರ್‌ವೆಲ್‌ಗೆ ಕೊಡುವ ಕೆಲಸವನ್ನೂ ಮಾಡಬಹುದು.
4.2000ರೂ.ನಿಂದ 24ಸಾವಿರ ರೂ. ವಿನಿಯೋಗಿಸಿದರೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬಹುದು.

ಜಾಗೃತಿ ಅಗತ್ಯ
ಪ್ರತಿಯೊಬ್ಬರೂ ಹಿತಮಿತವಾಗಿ ನೀರು ಬಳಸಿ ಇತರರಿಗೂ ಸಿಗುವಂತೆ ಮಾಡಬೇಕು. ಕಲುಷಿತ ನೀರನ್ನು ಪುನರ್‌ಬಳಕೆ ಮಾಡಿದರೆ ಸಾಕಷ್ಟು ಉಪಯೋಗವಾಗಬಹುದು. ನೀರಿನ ಮರುಬಳಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಪರಿಸರನಾಶ, ಪರಿಸರ ಮಾಲಿನ್ಯ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದ್ದು ಇದನ್ನು ಅಚ್ಚುಕಟ್ಟಾಗಿ ಪಾಲಿಸಿದರೆ ಮಾತ್ರ ಪರಿಸರ ಉಳಿಯಲು ಸಾಧ್ಯ.
– ಜೋಸೆಫ್ ಜಿ.ಎಂ.ರೆಬೆಲ್ಲೊ,

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.