ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಕರಾವಳಿಯಲ್ಲಿ ಖರೀದಿ, ವಿತರಣೆಗೆ ತಾಂತ್ರಿಕ ಸವಾಲು

Team Udayavani, Nov 30, 2021, 7:10 AM IST

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಉಡುಪಿ: ಪಡಿತರ ವ್ಯವಸ್ಥೆಯಡಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಸ್ಥಳೀಯ ಕುಚ್ಚಲು ಅಕ್ಕಿ ವಿತರಣೆಗೆ ಕೇಂದ್ರ ಸರಕಾರ ಅವಕಾಶ ನೀಡಿದರೂ ಪೂರೈಕೆಯಲ್ಲಿ ಕೊರತೆ, ವಿತರಣೆಗೆ ತಾಂತ್ರಿಕ ಸಮಸ್ಯೆ ಎದುರಾಗಲಿದೆ. ಹೀಗಾಗಿ ಸದ್ಯಕ್ಕಂತೂ ಪಡಿತರದಲ್ಲಿ ಸ್ಥಳೀಯ ಕುಚ್ಚಲಕ್ಕಿ ಸಿಗದು.

ಪಡಿತರದಡಿ ವಿತರಿಸಲು ಪ್ರತೀ ತಿಂಗಳು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ತಲಾ 40 ಸಾವಿರ ಕ್ವಿಂಟಾಲ್‌ ಅಕ್ಕಿ ಬೇಕು. ಸದ್ಯ ಆಂಧ್ರ ಪ್ರದೇಶದಿಂದ ಬರುವ ಕುಚ್ಚಲಕ್ಕಿಯನ್ನು ವಿತರಿಸ ಲಾಗುತ್ತಿದೆ. ಸ್ಥಳೀಯ ವಾಗಿ ಭತ್ತ ಖರೀದಿಸಿ, ಕುಚ್ಚಲು ಅಕ್ಕಿ ವಿತರಣೆಗೆ ಅವಕಾಶ ಕೊಡುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಪರಿಶೀಲನೆಯ ಹಂತ ದಲ್ಲಿದೆ. ಕೇಂದ್ರ ಅನುಮತಿ ನೀಡಿದ ಮೇಲೆ ಸ್ಥಳೀಯ ಅಕ್ಕಿ ವಿತರಣೆ ಆರಂಭವಾಗಲಿದೆ.

ತಾಂತ್ರಿಕ ಸಮಸ್ಯೆಗಳು
ಪಡಿತರದಡಿ ನೀಡುವ ಅಕ್ಕಿ ಯಾ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಅಡಿ ಖರೀದಿಸಬೇಕು. ರೈತರು ಭತ್ತವನ್ನು ನಿರ್ದಿಷ್ಟ ಖರೀದಿ ಕೇಂದ್ರದ ಮೂಲಕವೇ ನೀಡಬೇಕಾಗುತ್ತದೆ. ಉಭಯ ಜಿಲ್ಲೆಗೆ ತಿಂಗಳಿಗೆ 80 ಸಾವಿರ ಕ್ವಿಂ.ಗೂ ಅಧಿಕ ಅಕ್ಕಿ ಬೇಕಿದ್ದು, ಅಷ್ಟು ಎಂಎಸ್‌ಪಿ ಅಡಿ ಖರೀದಿಗೆ ಸಿಗದು. ಮಿಲ್‌ಗ‌ಳಿಗೆ ಭತ್ತವನ್ನು ಇಷ್ಟೇ ಒಣಗಿಸಿ ನೀಡಬೇಕು ಎಂಬ ನಿಯಮ ಇಲ್ಲ. ಆದರೆ ಪಡಿತರ ವಿತರಣೆಗೆ ನೀಡುವ ಭತ್ತಕ್ಕೆ ಈ ನಿಯಮವಿದೆ. ಸ್ಥಳೀಯ ಕುಚ್ಚಲಕ್ಕಿ ಈ ಎರಡು ಜಿಲ್ಲೆಗಳಿಗೆ ಸೀಮಿತವಾಗಿದ್ದು, ಕೊರತೆಯಾದರೆ ಬೇರೆಡೆಯಿಂದ ತರಿಸಲಾಗದು. ಕೇಂದ್ರದ ಅನು ಮತಿ, ಸಬ್ಸಿಡಿ, ಬೆಂಬಲ ಬೆಲೆ ಹೀಗೆ ಹಲವು ತಾಂತ್ರಿಕ ತೊಡಕುಗಳಿವೆ.

ಶೇ. 50ರಷ್ಟು ಬೇಡಿಕೆ
ಈಗ ನೀಡುತ್ತಿರುವ ಕುಚ್ಚಲು ಅಕ್ಕಿ ಊಟಕ್ಕೆ ಹಿಡಿಸುವುದಿಲ್ಲ. ಮನೆಗಳಲ್ಲಿ ತಿಂಡಿಗೆ ಬೆಳ್ತಿಗೆ ಅಕ್ಕಿಯ ಅಗತ್ಯವಿರುವುದರಿಂದ ಸದ್ಯ ಬಹುತೇಕರು ಅದನ್ನೇ ಕೇಳಿ ಪಡೆಯುತ್ತಿದ್ದಾರೆ. ಸದ್ಯ ಕುಚ್ಚಲು ಮತ್ತು ಬೆಳ್ತಿಗೆ ಅಕ್ಕಿಗೆ ತಲಾ ಶೇ. 50ರಷ್ಟು ಬೇಡಿಕೆಯಿದೆ. ಸ್ಥಳೀಯ ಕುಚ್ಚಲು ಅಕ್ಕಿ ಖರೀದಿಗೆ ಅವಕಾಶ ಸಿಕ್ಕ ಅನಂತರ ಬೇಡಿಕೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಬಾಲಿವುಡ್‌ ಹಾಡಿನ ಮೂಲಕ ಮನ ಗೆದ್ದ ಆಫ್ರಿಕನ್‌ ಅಣ್ಣ-ತಂಗಿ

ಸ್ಥಳೀಯ ಕುಚ್ಚಲಕ್ಕಿ ವಿತರಣೆಗೆ ಕೇಂದ್ರ ಸರಕಾರ ಅನುಮತಿ ನೀಡಿದ ಅನಂತರ ನಿರ್ದಿಷ್ಟ ಮಾರ್ಗಸೂಚಿಯಂತೆ ಭತ್ತ ಖರೀದಿ ಸಲಾಗುವುದು. ರೈತರಿಗೂ ಈ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕೆಲವು ತಾಂತ್ರಿಕ ಸಮಸ್ಯೆ ಎದು ರಾಗುವ ಸಾಧ್ಯತೆಯಿದ್ದು, ಅದನ್ನು ನಿವಾ ರಿಸಲು ಕ್ರಮ ತೆಗೆದುಕೊಳ್ಳಲಿದ್ದೇವೆ.
– ಮೊಹಮ್ಮದ್‌ ಇಸಾಕ್‌,
ಉಡುಪಿ ಜಿಲ್ಲಾ ಉಪನಿರ್ದೇಶಕ, ಆಹಾರ, ನಾಗರಿಕ ಸರಬರಾಜು- ಗ್ರಾ.ವ್ಯ. ಇಲಾಖೆ

ಸ್ಥಳೀಯ ಕುಚ್ಚಲಕ್ಕಿ
ವಿತರಣೆಗೆ ಈಗಾಗಲೇ
ಜಂಟಿ ಸಮೀಕ್ಷೆ ಮಾಡಿ, ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ. ಸ್ಥಳೀಯ ಬೇಡಿಕೆಯಷ್ಟು ಕುಚ್ಚಲು ಅಕ್ಕಿ ಪೂರೈಕೆ ಆಗುವುದೂ ಅಷ್ಟೇ ಮುಖ್ಯ.
-ಕೆ.ಪಿ. ಮಧುಸೂದನ್‌,
ದ.ಕ. ಜಿಲ್ಲಾ ಉಪನಿರ್ದೇಶಕ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ

ಟಾಪ್ ನ್ಯೂಸ್

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಂದು ವರ್ಷದಿಂದ ಪೂರ್ಣಕಾಲಿಕ ಪಿಡಿಒ ಇಲ್ಲ

ಒಂದು ವರ್ಷದಿಂದ ಪೂರ್ಣಕಾಲಿಕ ಪಿಡಿಒ ಇಲ್ಲ

ನಗರ ಪೊಲೀಸ್‌ ಬೀಟ್‌ ಮತ್ತಷ್ಟು ಚುರುಕು; ಸಿಟಿ, ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ವಿಕೃತರ ಕಾಟ

ನಗರ ಪೊಲೀಸ್‌ ಬೀಟ್‌ ಮತ್ತಷ್ಟು ಚುರುಕು; ಸಿಟಿ, ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ವಿಕೃತರ ಕಾಟ

ಕ್ರೀಡಾ ಹಾಸ್ಟೆಲ್‌ಗೆ ಸ್ಥಳೀಯ ಅಭ್ಯರ್ಥಿಗಳ ನಿರಾಸಕ್ತಿ

ಕ್ರೀಡಾ ಹಾಸ್ಟೆಲ್‌ಗೆ ಸ್ಥಳೀಯ ಅಭ್ಯರ್ಥಿಗಳ ನಿರಾಸಕ್ತಿ

ಕಾರ್ಕಳ: ಕೊರಗಜ್ಜನಿಗೆ ಅವಮಾನ; ಪ್ರಕರಣ ದಾಖಲು

ಕಾರ್ಕಳ: ಕೊರಗಜ್ಜನಿಗೆ ಅವಮಾನ; ಪ್ರಕರಣ ದಾಖಲು

ಸ್ಥಳೀಯ ಅಕ್ಕಿ ವಿತರಣೆಗೆ ಭತ್ತದ ಬಿತ್ತನೆ ಹೆಚ್ಚಬೇಕು

ಸ್ಥಳೀಯ ಅಕ್ಕಿ ವಿತರಣೆಗೆ ಭತ್ತದ ಬಿತ್ತನೆ ಹೆಚ್ಚಬೇಕು

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.