ಕಸ ಉತ್ಪತ್ತಿ ಮಾಡುವ ವಸ್ತುಗಳ ಬಳಕೆ ಕಡಿಮೆ ಮಾಡಿ


Team Udayavani, Aug 12, 2017, 7:40 AM IST

1108shirva2.jpg

ಶಿರ್ವ: ಉಡುಪಿ ಬಯಲು ಶೌಚ ಮುಕ್ತ ಜಿಲ್ಲೆಯಾಗಿದೆ.ತ್ಯಾಜ್ಯ ಮುಕ್ತ ಜಿಲ್ಲೆಯಾಗಿಸುವ ಸಲುವಾಗಿ ಕಸ ಉತ್ಪತ್ತಿ ಮಾಡುವ ವಸ್ತುಗಳ ಬಳಕೆ ಕಡಿಮೆ ಮಾಡಬೇಕು. ಈ ಕಾರ್ಯ ಪ್ರತಿ ಮನೆಯಿಂದಲೇ ಪ್ರಾರಂಭವಾಗಿ ಪರಿಸರದ ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳು ಕೈಜೋಡಿಸಿ ಸಾರ್ವಜನಿಕರಲ್ಲಿ ತ್ಯಾಜ್ಯ ವಿಲೇವಾರಿಯ ಬಗ್ಗೆ ಜಾಗೃತಿ ಮೂಡಿಸಿ ಉಡುಪಿ ತ್ಯಾಜ್ಯ ಮುಕ್ತ ಜಿಲ್ಲೆಯಾಗಲು ಪ್ರಯತ್ನಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಹೇಳಿದರು.

ಅವರು ಶುಕ್ರವಾರ ಸಂತ ಮೇರಿ ಕಾಲೇಜಿನ ಸಭಾಂಗಣದಲ್ಲಿ ಲಯನ್ಸ್‌ ಕ್ಲಬ್‌ ಶಿರ್ವ, ಗ್ರಾ.ಪಂ. ಶಿರ್ವ ಮತ್ತು ಸಂತ ಮೇರಿ ಕಾಲೇಜು, ಶಿರ್ವ ಇವರ ಆಶ್ರಯದಲ್ಲಿ ನಡೆದ ಘನ ಮತ್ತು ದ್ರವ ಸಂಪನ್ಮೂಲ (ತ್ಯಾಜ್ಯ) ನಿರ್ವಹಣೆ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮನೆಯಲ್ಲಿ ಉತ್ಪತ್ತಿಯಾಗುವ ಬೇಡದ ವಸ್ತುಗಳನ್ನು ವಿಂಗಡಿಸಿ ಹಸಿ ತ್ಯಾಜ್ಯಗಳನ್ನು ದನಗಳಿಗೆ ನೀಡಿ ಕೊಳೆಯುವ ವಸ್ತುಗಳನ್ನು ಸಾವಯವ ಗೊಬ್ಬರ ತಯಾರಿಸಲು ಬಳಕೆ ಮಾಡಬೇಕು. ಪ್ಲಾಸ್ಟಿಕ್‌ ಇನ್ನಿತರ ವಸ್ತುಗಳ ಬಳಕೆಯನ್ನು ಮಿತಿಗೊಳಿಸಿ ಮರುಬಳಕೆ ಮಾಡುವ ವಸ್ತುಗಳನ್ನು ಬಳಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕ ರೆ|ಫಾ| ಸ್ಟಾನಿ ತಾವೋÅ ಮಾತನಾಡಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಶಿರ್ವ ಪರಿಸರದ ವಿದ್ಯಾರ್ಥಿಗಳು, ಸಾರ್ವಜನಿಜಕರು, ಸಂಘ ಸಂಸ್ಥೆಗಳು ಜಿಲ್ಲಾಧಿಕಾರಿಗಳ ತ್ಯಾಜ್ಯಮುಕ್ತ ಉಡುಪಿ ಜಿಲ್ಲೆಯನ್ನಾಗಿಸುವ ಪರಿಕಲ್ಪನೆಗೆ ಕೈಜೋಡಿಸಬೇಕು ಎಂದು ಹೇಳಿದರು.

ಚರ್ಚ್‌ ಪಾಲನಾ ಮಂಡಳಿಯ ಉಪಾಧ್ಯಕ್ಷ ವಿಲ್ಸನ್‌ ಡಿ’ಸೋಜಾ, ತಾ.ಪಂ.ಸದಸ್ಯೆ ಗೀತಾ ವಾಗೆÛ, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಪದ್ಮನಾಭ ಭಟ್‌,ಶಿರ್ವ ಲಯನ್ಸ್‌ ಕ್ಲಬ್‌ನ ಕಾರ್ಯದರ್ಶಿ ಮೆಲ್ವಿನ್‌ ಅರಾನ್ಹ, ಕೋಶಾಧಿಕಾರಿ ಸೇrನಿ ಡಿಸೋಜಾ,ನೋಡಲ್‌ ಅಧಿಕಾರಿ ಶ್ರೀನಿವಾಸ ರಾವ್‌, ಪಿಡಿಒ ಮಾಲತಿ, ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಂಜಿತ್‌ ಶೆಣೈ, ಗೀÅನ್‌ ವಿಮೆನ್‌ ಫೋರಂನ ಸಂಗೀತಾ ಪೂಜಾರಿ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಶಿರ್ವ ಗ್ರಾ.ಪಂ.ಸದಸ್ಯರು,ಲಯನ್ಸ್‌ ಸದಸ್ಯರು , ಕಾಲೇಜಿನ ಉಪನ್ಯಾಸಕ ವೃಂದ, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.ಶಿರ್ವ ಜಿ.ಪಂ.ಸದಸ್ಯ ವಿಲ್ಸನ್‌ ರೊಡ್ರಿಗಸ್‌ ಪ್ರಾಸ್ತಾವಿಕವಾಗಿ ಮಾಸತನಾಡಿದರು. ಲಯನ್ಸ್‌ ಕ್ಲಬ್‌ನ ಅಧ್ಯಕ್ಷ ಜೂಲಿಯಾನ್‌ ರೊಡ್ರಿಗಸ್‌ ಸ್ವಾಗತಿಸಿದರು.ಉಪನ್ಯಾಸಕಿ ಪ್ರೊ| ರೆಬೆಕಾ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ| ಗೋಪಾಲಕೃಷ್ಣ ಸಾಮಗ ವಂದಿಸಿದರು.

ಶಿರ್ವ ಪರಿಸರದಲ್ಲಿ ತ್ಯಾಜ್ಯದೊಂದಿಗೆ ಬೀದಿನಾಯಿಗಳ ಕಾಟ ಬಹುದೊಡ್ಡ ಸಮಸ್ಯೆಯಾಗಿದ್ದು ಭೇಟಿಯ ವೇಳೆ ವೀಕ್ಷಿಸಿದೇªನೆ. ಬಂಗ್ಲೆಗುಡ್ಡೆ ಪ್ರದೇಶದ ಪಶುವೈದ್ಯ ಆಸ್ಪತ್ರೆಯ ಬಳಿ ಬೇಲಿ ಹಾಕಿ ಶೆಡ್‌ ನಿರ್ಮಿಸಿ ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಿ ಆಶ್ರಯ ನೀಡಬೇಕು. ಗ್ರಾ.ಪಂ.ಮನೆ , ಹೊಟೇಲ್‌,ಕೋಳಿ, ಮಾಂಸದಂಗಡಿಗಳಿಂದ ಸಂಗ್ರಹಿಸಿದ ಮಾಂಸ ತ್ಯಾಜ್ಯಗಳನ್ನು ನಾಯಿಗಳಿಗೆ ಹಾಕಿದಾಗ ಆಹಾರವೂ ಆಗುತ್ತದೆ,ತ್ಯಾಜ್ಯ ವಿಲೇವಾರಿಯೂ ಆಗುತ್ತದೆ. ಗ್ರಾ.ಪಂ. ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರತೀ ವಾರ್ಡ್‌ಗೆ ತ್ರಿಚಕ್ರ ವಾಹನ ಒದಗಿಸಿ ಮಾನವ ಸಂಪನ್ಮೂಲವನ್ನು ಬಳಸಿಕೊಂಡು ಸೂಕ್ತ ತರಬೇತಿ ನೀಡಿ ಪ್ರತಿ 12 ಗಂಟೆಗಳಿಗೊಮ್ಮೆ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡಬಹುದು. ಈ ಬಗ್ಗೆ ಗ್ರಾ.ಪಂ.ಗೆ ಸೂಚಿಸಿದ್ದೇನೆ ಗ್ರಾ.ಪಂ.ಆಸಕ್ತಿ ವಹಿಸಿ ಕಾರ್ಯ ನಿರ್ವಹಿಸಬೇಕಿದೆ.
-ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಉಡುಪಿ ಜಿಲ್ಲಾಧಿಕಾರಿ

ಉದಯವಾಣಿ ಸಚಿತ್ರ ವರದಿ
ಶಿರ್ವ ಪರಿಸರದ ಕಸ ತ್ಯಾಜ್ಯ ವಿಲೇ ಸಮಸ್ಯೆ,ಮಟ್ಟಾರು ಡಂಪಿಂಗ್‌ ಯಾರ್ಡ್‌, ಬೀದಿ ನಾಯಿಗಳ ಸಮಸ್ಯೆ ಮತ್ತು ಪಾಳು ಬಿದ್ದ ಕಟ್ಟಡದ ಬಗ್ಗೆ ಉದಯವಾಣಿ ಸಚಿತ್ರ ವರದಿ ಪ್ರಕಟಿಸಿತ್ತು. ಈ ಬಗ್ಗೆ ಜಿಲ್ಲಾದಿಕಾರಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.