ದುರ್ಬಲ ಶಾಲಾ ಕಟ್ಟಡ ತೆರವುಗೊಳಿಸಲು ಆಗ್ರಹ

ನಿಟ್ಟೆ ಗ್ರಾ.ಪಂ. ಕೆಡಿಪಿ ಸಭೆ

Team Udayavani, Aug 2, 2019, 5:14 AM IST

ಪಳ್ಳಿ: ನಿಟ್ಟೆ ಗ್ರಾಮ ಪಂಚಾಯತ್‌ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ ಸಭೆಯು ಪಂಚಾಯತ್‌ ಅಧ್ಯಕ್ಷೆ ಸಬಿತಾ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್‌ ಸಭಾಭವನದಲ್ಲಿ ಆ. 1ರಂದು ಜರಗಿತು. ಕಲ್ಲಂಬಾಡಿ ಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 96 ಮಕ್ಕಳಿದ್ದು ಈ ಶಾಲೆಯ ಕಟ್ಟಡವು ಮಣ್ಣಿನ ಗೋಡೆಯನ್ನು ಹೊಂದಿದೆ.

ಈ ಕಟ್ಟಡವು ಹಳೆಯದಾಗಿದ್ದು ಶಿಕ್ಷಕರು ಮಕ್ಕಳಿಗೆ ಭಯಭೀತರಾಗಿಯೇ ವಿದ್ಯಾರ್ಜನೆ ನೀಡುವಂತಾಗಿದೆ.ಮಳೆಗಾಲದಲ್ಲಿ ಮಣ್ಣಿನ ಗೋಡೆಯು ನೀರನ್ನು ಹೀರಿಕೊಳ್ಳುತ್ತಿದ್ದು ಗೋಡೆ ಕುಸಿಯುವ ಭೀತಿ ಎದುರಾಗಿದೆ.ಈ ನಿಟ್ಟಿನಲ್ಲಿ ಹೊಸ ಕಟ್ಟಡ ನಿರ್ಮಿಸಿ ಕೊಡುವಂತೆ ಶಾಲಾ ಮುಖ್ಯೋ ಪಾಧ್ಯಾಯರು ಆಗ್ರಹಿಸಿದರು.

ದೂಪದಕಟ್ಟೆ ಯು.ಬಿ.ಎಂ.ಸಿ ಶಾಲೆಯಲ್ಲಿ 2 ಮಕ್ಕಳು ಏಳನೇ ತರಗತಿ ಪೂರೈಸಿ ಎಂಟನೇ ತರಗತಿಗೆ ಸೇರ್ಪಡೆಯಾಗಿಲ್ಲ ಎಂದು ಶಿಕ್ಷಕರು ಸಭೆಯ ಗಮನ ಸೆಳೆದರು. ಈ ಕುರಿತು ಗ್ರಾಮ ಪಂಚಾಯತ್‌ನಿಂದ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕೆಮ್ಮಣ್ಣು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿ ದಿಶಾ ಆಚಾರ್ಯ ಕಳೆದ ಒಂದುವರೆ ವರ್ಷಗಳಿಂದ ಶಾಲೆಗೆ ಗೈರು ಹಾಜರಾಗುತ್ತಿದ್ದ ಬಗ್ಗೆ ಶಾಲಾ ಶಿಕ್ಷಕಿ ಗ್ರೇಟಾ ಸಭೆಯ ಗಮನ ಸೆಳೆದರು. ಈ ಬಗ್ಗೆ ಮನೆಗೆ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಕೈಗೊಳ್ಳುವುದಾಗಿ ಹೇಳಿದರು.

ಪಂ. ಉಪಾಧ್ಯಕ್ಷ ಗೋಪಾಲ್‌ ಶೆಟ್ಟಿ, ಕೃಷಿ ಇಲಾಖೆಯ ರಾಧಕೃಷ್ಣ ಶೆಟ್ಟಿ, ತೋಟಗಾರಿಕಾ ಇಲಾಖೆಯ ನಿಂಗಪ್ಪ, ಸಮಾಜ ಕಲ್ಯಾಣ ಇಲಾಖೆ ವಿನಾಯಕ, ಶಿಕ್ಷಣ ಇಲಾಖೆಯ ಪ್ರದೀಪ್‌ ನಾಯಕ್‌, ಪಂಚಾಯತ್‌ ರಾಜ್‌ ಎಂಜಿನಿಯರ್‌ ಸುಧಾಕರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಜೇಶ್ವರೀ, ಮೆಸ್ಕಾಂ ಇಲಾಖೆ ಸುಧೀಂದ್ರ, ಕಂದಾಯ ಇಲಾಖೆ ಆನಂದ್‌, ಪಶು ಸಂಗೋಪನೆ ಶೋಭಾ, ಅರಣ್ಯ ಇಲಾಖೆ ವಿದ್ಯಾಲಕ್ಷ್ಮೀ ಸಾಮಾಜಿಕ ನ್ಯಾಯ ಸಂಹಿತೆ ಅಧ್ಯಕ್ಷೆ ಪ್ರತಿಮಾ ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದರು.ಪಿಡಿಒ ಎಸ್‌. ಸುಧಾಕರ್‌ ಶೆಟ್ಟಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಪಂಚಾಯತ್‌ ಸಿಬಂದಿ ಸಹಕರಿಸಿದರು.


	
									

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬಿಸಿಲಿನಿಂದ ರಕ್ಷಣೆ ಪಡೆಯಲಷ್ಟೇ ಸನ್‌ಗ್ಲಾಸಸ್‌ ಧರಿಸುವ ಕಾಲ ಇದಲ್ಲ. ನೀವು ಧರಿಸುವ ಕೂಲಿಂಗ್‌ ಗ್ಲಾಸ್‌ ಕಣ್ಣನ್ನಷ್ಟೇ ಅಲ್ಲ, ನಿಮ್ಮ ಸ್ಟೈಲ್‌ ಅನ್ನೂ "ಕೂಲ್‌'...

  • ಮಹಾನಗರ: ರಾಜ್ಯ ಸರಕಾರವು ನೂತನವಾಗಿ ಜಾರಿಗೆ ತಂದ ನಂಬರ್‌ ಪ್ಲೇಟ್‌ ಮಾದರಿ ನಗರದಲ್ಲಿ ಇನ್ನೂ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ವಾಹನಗಳ ನಂಬರ್‌ ಪ್ಲೇಟ್‌ನಲ್ಲಿ...

  • ತಾವು ಯಾವುದರಲ್ಲಿ ಡಿಗ್ರಿ ಮಾಡಿದ್ದೇವೋ ಅದಕ್ಕೆ ತಕ್ಕಂತೆ ಕೆಲಸ ಸಿಗಬೇಕೆಂದು ಕಾದು ಕುಳಿತುಕೊಳ್ಳುವ ಕಾಲ ಅಲ್ಲ ಇದು. ಇವತ್ತು ಪದವಿ, ಸ್ನಾತಕೋತ್ತರ ಪದವಿಗಳು...

  • ಆಗೆಲ್ಲಾ ಈಗಿನಂತೆ ನಿಶ್ಚಿತಾರ್ಥಕ್ಕೆ ನೂರಾರು ಜನರು ಬರುತ್ತಿರಲಿಲ್ಲ. ಮುಖ್ಯವಾದ ಏಳೆಂಟು ಜನರು ಬಂದು, ಹುಡುಗಿಗೆ ಉಂಗುರ ತೊಡಿಸಿ, ಹರಿವಾಣ ವಿನಿಮಯ ಮಾಡುತ್ತಿದ್ದರು....

  • ಮಂಗಳೂರು: ರಾಜ್ಯದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಸಾಲ ಪಡೆದು 2020 ಜ. 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಹಾಗೂ ಕೃಷಿ ಸಂಬಂಧಿತ ಸಾಲಗಳ ಮೇಲಿನ...