ಸಂಶೋಧನೆಗೆ ಹೆಚ್ಚಿನ ಒತ್ತು ಅಗತ್ಯ: ಪ್ರೊ| ಕರಣಂ

Team Udayavani, Aug 13, 2017, 7:45 AM IST

13-REP-7.jpg

ಕಾರ್ಕಳ: ಪ್ರತಿಯೊಂದು ವಿದ್ಯಾಸಂಸ್ಥೆಗಳಲ್ಲೂ ಸಂಶೋಧನೆ ಹಾಗೂ ಆವಿಷ್ಕಾರಕ್ಕೆ ಹೆಚ್ಚಿನ ಒತ್ತು ನೀಡುವುದು ಅಗತ್ಯ. ತಂತ್ರಜ್ಞಾನಕ್ಕೆ ಸಿಗುತ್ತಿರುವ ಪ್ರಾಮುಖ್ಯ ಅದರ ಮೂಲ ವಾದ ವಿಜ್ಞಾನಕ್ಕೂ ದೊರೆಯಬೇಕು ಎಂದು ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಸುರತ್ಕಲ್‌ನ ನಿರ್ದೇಶಕ ಪ್ರೊ| ಕರಣಂ ಉಮಾ ಮಹೇಶ್ವರ್‌ ರಾವ್‌ ಹೇಳಿದರು.

ಅವರು ಶುಕ್ರವಾರ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಯು ಜಂಟಿಯಾಗಿ ನಿಟ್ಟೆಯಲ್ಲಿ ಆಯೋಜಿಸಿದ ಕೆಎಸ್‌ಸಿಎಸ್‌ ಟಿಯ 40ನೇ ಸರಣಿ – ಎಂಜಿನಿಯರಿಂಗ್‌ ವಿದ್ಯಾರ್ಥಿ ಯೋಜನೆಗಳ “ಸೆಮಿನಾರ್‌ ಮತ್ತು ಪ್ರದರ್ಶನ’ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್‌ (ಕೆಸಿಟಿಯು), ಕೈಗಾರಿಕೆ ಮತ್ತು ವಾಣಿಜ್ಯ
ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ಅನಿಲ್‌ ಉಪ್ಪಿನ್‌ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸರಕಾರದಿಂದ ಸಂಶೋಧನೆಗೆ ಹೆಚ್ಚಿನ ಪ್ರಾಶಸ್ತ ಸಿಗುತ್ತಿದೆ. ಮಹಿಳಾ ಸಶಕ್ತೀಕರಣದ ಅಂಗವಾಗಿ ಮಹಿಳಾ ವಾಣಿಜ್ಯೋದ್ಯಮಕ್ಕೆ ಉತ್ತಮ ಪುಷ್ಟಿ ಸಿಗುತ್ತಿದೆ ಎಂದರು.

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಯ ಕಾರ್ಯದರ್ಶಿ ಪ್ರೊ| ಎಸ್‌. ಸುಬ್ರಮಣಿಯನ್‌ ಮಾತನಾಡಿದರು. 40ನೇ ಸರಣಿಯ ಎಂಜಿನಿಯರಿಂಗ್‌ ವಿದ್ಯಾರ್ಥಿ ಯೋಜನೆಗಳ ಸೆಮಿನಾರ್‌ ಮತ್ತು ಪ್ರದರ್ಶನದ ಜೈವಿಕ ಇಂಧನ ವಿದ್ಯಾರ್ಥಿ ಯೋಜನೆ ಕಾರ್ಯಕ್ರಮದ ಟೆಕ್ನಿಕಲ್‌ ಕಾಂಪೆಂಡಿಯಮ್‌ ಅನ್ನು ಅನಿಲ್‌ ಉಪ್ಪಿನ್‌ ಬಿಡುಗಡೆ ಮಾಡಿದರು. ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ನಿರಂಜನ್‌ ಎನ್‌. ಚಿಪೂರ್‌ ಸ್ವಾಗತಿಸಿದರು. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ| ಎಸ್‌.ಜಿ. ಶ್ರೀಕಂಠೇಶ್ವರ ಸ್ವಾಮಿ ಪ್ರಸ್ತಾವನೆಗೈದರು. ಕಾರ್ಯಕ್ರಮದ ಮುಖ್ಯ ಸಂಯೋಜಕ ಡಾ| ರಾಧಾಕೃಷ್ಣನ್‌ ಕಾರ್ಯಕ್ರಮದ ರೂಪು ರೇಖೆಯ ಬಗ್ಗೆ ಮಾಹಿತಿ ನೀಡಿದರು. ಸಹಪ್ರಾಧ್ಯಾಪಕ ವಿಶ್ವನಾಥ್‌ ಕಾರ್ಯಕ್ರಮ ನಿರೂಪಿಸಿ ದರು. ಬಯೋಫುಯೆಲ್‌ ಸೆಲ್‌ನ ಪ್ರಧಾನ ವೈಜ್ಞಾನಿಕ ಅಧಿಕಾರಿ ಹಾಗೂ ಸಂಯೋಜಕ ಎಸ್‌.ಎನ್‌. ಸೊಂಡೂರ್‌ ವಂದಿಸಿದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿ ಯೋಜನೆಗಳು ಪ್ರದರ್ಶನಗೊಂಡವು.

ಪೇಟೆಂಟ್‌ ಲಭಿಸಲಿ: ವಿನಯ ಹೆಗ್ಡೆ
ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಹಾಗೂ ನಿಟ್ಟೆ ವಿದ್ಯಾಮಂಡಳಿಯ ಅಧ್ಯಕ್ಷ ಎನ್‌. ವಿನಯ ಹೆಗ್ಡೆ ಮಾತನಾಡಿ, ವಿದ್ಯಾರ್ಥಿಗಳು ಪದವಿ ದೊರೆಯಬೇಕು ಎನ್ನುವ ಕಾರಣಕ್ಕಾಗಿ ಪ್ರಾಜೆಕ್ಟ್ ಮಾಡುವುದು ಎನ್ನುವ ಧೋರಣೆಯನ್ನು ಬಿಡಬೇಕು. ವಿದ್ಯಾರ್ಥಿಗಳು ಮಾಡಿದ ಮಾದರಿಗಳು ಪೇಟೆಂಟ್‌ ಆಗಿ ಪರಿವರ್ತಿತವಾಗಲು ಶಿಕ್ಷಕರು ಮಾರ್ಗದರ್ಶನ ಮಾಡಬೇಕಿದೆ ಎಂದರು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.