ಆಯುಷ್ಮಾನ್‌ ಗೊಂದಲ ಪರಿಹರಿಸಿ: ದಿನಕರ ಬಾಬು

Team Udayavani, Feb 24, 2021, 7:00 AM IST

ಆಯುಷ್ಮಾನ್‌ ಗೊಂದಲ ಪರಿಹರಿಸಿ: ದಿನಕರ ಬಾಬು

ಉಡುಪಿ: ಆಯುಷ್ಮಾನ್‌ ಕಾರ್ಡ್‌ ಮೂಲಕ ನೆರವು ಪಡೆಯಲು ಇರುವ ಅರ್ಹತೆಗಳ ಕುರಿತಂತೆ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಹಲವು ಗೊಂದಲಗಳಿದ್ದು, ಈ ಕುರಿತು ಜಿಲ್ಲೆಯ ಎಲ್ಲ ಸರಕಾರಿ ಆಸ್ಪತ್ರೆಯ ವೈದ್ಯರಿಗೆ ತರಬೇತಿ ಆಯೋಜಿಸಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿ.ಪಂ. ಅಧ್ಯಕ್ಷ ದಿನಕರ ಬಾಬು ಸೂಚಿಸಿದರು.

ಅವರು ಮಂಗಳವಾರ ಜಿ.ಪಂ. ಸಭಾಂಗಣ ದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೈದ್ಯರಲ್ಲೂ ಗೊಂದಲ
ಆಯುಷ್ಮಾನ್‌ ಕಾರ್ಡ್‌ ಹೊಂದಿರುವ ರೋಗಿಯು ಯಾವ ಸಂದರ್ಭದಲ್ಲಿ ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಬಹುದು? ಯಾವ ಚಿಕಿತ್ಸೆಗೆ ರೆಫ‌ರಲ್‌ ಪತ್ರ ತರಬೇಕು? ವೈದ್ಯರು ಯೋಜನೆಯಲ್ಲಿನ ಯಾವ ಕಾಯಿಲೆಗಳಿಗೆ ರೆಫ‌ರಲ್‌ ಪತ್ರ ನೀಡಬೇಕು? ತುರ್ತು ಸಂದರ್ಭದಲ್ಲಿ ಎಲ್ಲಿ ದಾಖಲಾಗಬೇಕು? ಎಂಬ ಬಗ್ಗೆ ರೋಗಿ ಹಾಗೂ ವೈದ್ಯರಿಗೂ ಸಹ ಹಲವು ಗೊಂದಲಗಳಿದ್ದು, ಇದನ್ನು ಬಗೆಹರಿಸಲು ಜಿಲ್ಲೆಯ ಸರಕಾರಿ ವೈದ್ಯರಿಗೆ ಶೀಘ್ರದಲ್ಲಿ ತರಬೇತಿ ಆಯೋಜಿಸಿ ಎಂದು ದಿನಕರ ಬಾಬು ಸೂಚಿಸಿದರು.

ಜಿಲ್ಲೆಯ ಎಲ್ಲ ಆ್ಯಂಬುಲೆನ್ಸ್‌ ಚಾಲಕರಿಗೂ ಸಹ ತರಬೇತಿ ಆಯೋಜಿಸಿ, ಯೋಜನೆಯ ಸಮಗ್ರ ಮಾಹಿತಿ ನೀಡುವಂತೆ ಜಿ.ಪಂ. ಸಿಇಒ ಡಾ| ನವೀನ್‌ ಭಟ್‌ ತಿಳಿಸಿದರು.

ಹೂಳೆತ್ತುವಿಕೆಗೆ ಆದ್ಯತೆ
ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಇದುವರೆಗೆ ಶೇ. 137ರಷ್ಟು ಸಾಧನೆ ಅಗಿದ್ದು, ಜಿಲ್ಲೆಯ ಎಲ್ಲ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿನ ಕೆರೆ ಮತ್ತು ತೋಡುಗಳ ಹೂಳೆ ತ್ತುವ ಕಾಮಗಾರಿಗಳನ್ನು ಆದ್ಯತೆಯಲ್ಲಿ ತೆಗೆದುಕೊಳ್ಳುವಂತೆ ತಿಳಿಸಿದ ಅಧ್ಯಕ್ಷರು, ಹೂಳೆತ್ತಿದ ಅನಂತರ ಮಣ್ಣಿನಿಂದ ಜೆಡ್ಡುಗಳನ್ನು ನಿರ್ಮಿಸಬೇಕು. ಜಿಲ್ಲೆಯಲ್ಲಿ ಸಮುದಾಯ ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಿ, ಉದ್ಯೋಗ ಖಾತರಿ ಯೋಜನೆಯಿಂದ ಬಾವಿ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಿ ಎಂದರು.

ಜಿಲ್ಲೆಯ ಎಲ್ಲ ಗ್ರಾ.ಪಂ.ಗಳಲ್ಲಿ ಒಣ ತ್ಯಾಜ್ಯ ಸಂಗ್ರಹ ನಡೆಯುತ್ತಿದ್ದು, ಕಾರ್ಕಳದಲ್ಲಿ ಎಂಆರ್‌ಎಫ್ ಕಾಮಗಾರಿ ಪ್ರಗತಿಯಲ್ಲಿದ್ದು, ಮಾರ್ಚ್‌ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌ ಹೇಳಿದರು.

ಶಾಲಾ ಹಾಜರಾತಿ: 3ನೇ ಸ್ಥಾನ
ಜಿಲ್ಲೆಯಲ್ಲಿ 6ನೇ ತರಗತಿಯಿಂದ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ತೆರೆದಿದ್ದು, ಇದುವರೆಗೂ ಯಾವುದೇ ಮಕ್ಕಳಲ್ಲಿ ಕೋವಿಡ್‌ ಕಂಡು ಬಂದಿರುವುದಿಲ್ಲ. ಎಸ್‌ಒಪಿ ಪ್ರಕಾರ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಹಾಜರಾತಿ ಪ್ರಮಾಣದಲ್ಲಿ ಜಿಲ್ಲೆಯು ರಾಜ್ಯದಲ್ಲಿ 3ನೇ ಸ್ಥಾನದಲ್ಲಿದೆ ಎಂದು ಡಿಡಿಪಿಐ ಮಾಹಿತಿ ನೀಡಿದರು.

ಖಾಸಗಿ ಶಾಲೆಗಳಲ್ಲಿ ತರಗತಿಗೆ ಹಾಜರಾಗದೇ ಆನ್‌ಲೈನ್‌ ತರಗತಿಯಲ್ಲಿ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಮತ್ತು ಕೈಗಾರಿಕಾ ಸ್ಥಾಯೀ ಸಮಿತಿ ಅಧ್ಯಕ್ಷ ಸುಮಿತ್‌ ಶೆಟ್ಟಿ ಹೇಳಿದರು.

ಮ್ಯಾನುವೆಲ್‌ ಸ್ಕಾವೆಂಜರ್ ನಿಷೇಧ
ಕುರಿತ ಕರಪತ್ರವನ್ನು ಬಿಡುಗಡೆಗೊಳಿ ಸಲಾಯಿತು. ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ ಪುತ್ರನ್‌, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್‌ ಹೆಗ್ಡೆ ಮಾರಾಳಿ, ಉಪ ಕಾರ್ಯದರ್ಶಿ ಕಿರಣ್‌ ಫ‌ಡೆ°àಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.