ಪ್ರಾಕೃತಿಕ ವಿಕೋಪಕ್ಕೆ ಸ್ಪಂದಿಸಿ: ಶೋಭಾ
Team Udayavani, Aug 10, 2019, 5:47 AM IST
ಉಡುಪಿ: ಮಳೆಯಿಂದ ಜೀವ ಹಾನಿ ಮತ್ತು ಆಸ್ತಿ ಪಾಸ್ತಿ ನಷ್ಟಕ್ಕೊಳಗಾದವರಿಗೆ ತತ್ಕ್ಷಣ ಸ್ಪಂದಿಸಬೇಕು. ಸಂತ್ರಸ್ತರಿಗೆ ಗರಿಷ್ಠ ಪರಿಹಾರ ಒದಗಿಸುವಂತೆ ಸಂಸದೆ ಶೋಭಾ ಕರಂದ್ಲಾಜೆ ಸೂಚಿಸಿದರು. ಶುಕ್ರವಾರ ನೆರೆ ಹಾವಳಿ ಮತ್ತು ಪ್ರಾಕೃತಿಕ ವಿಕೋಪ ಪ್ರಗತಿ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿದರು.
ಗರಿಷ್ಠ ಪರಿಹಾರ ಒದಗಿಸಿ
ಸಂತ್ರಸ್ತರಿಗೆ ಮಾನವೀಯ ನೆಲೆಯಲ್ಲಿ ಗರಿಷ್ಠ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
568 ಮನೆಗಳಿಗೆ ಹಾನಿ
ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಾಹಿತಿ ನೀಡಿ, ಜಿಲ್ಲೆಯಲ್ಲಿ 568 ಮನೆಗಳು ಹಾನಿಗೊಳಗಾಗಿವೆ. 303 ಮನೆಗಳಿಗೆ 32.65 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ; ಉಳಿದವುಗಳಿಗೆ ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದರು.
3 ಸಾವು
ಮಳೆಯಿಂದಾಗಿ ಜಿಲ್ಲೆಯಲ್ಲಿ ಮೂವರು ಪ್ರಾಣ ಕಳೆದು ಕೊಂಡಿದ್ದಾರೆ. ಓರ್ವನ ಕುಟುಂಬಕ್ಕೆ 4 ಲ.ರೂ. ಪರಿಹಾರವನ್ನು ಈಗಾಗಲೇ ನೀಡಲಾಗಿದೆ. ಉಳಿದವರಿಗೆ ವಿತರಣೆ ನಡೆಯಲಿದೆ. ಮತ್ತೂಬ್ಬರ ಮರಣ ಪ್ರಮಾಣ ಪತ್ರ ಸಿಕ್ಕಿದ ಕೂಡಲೆ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದರು.
ರಕ್ಷಣೆ ಬಗ್ಗೆ ತರಬೇತಿ
ರಕ್ಷಣಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದ ಎಸ್ಪಿ ನಿಶಾ ಜೇಮ್ಸ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ಜಿಲ್ಲೆಯ ಪೊಲೀಸ್ ಸಿಬಂದಿಗೆ ರಕ್ಷಣಾ ಕಾರ್ಯದ ಬಗ್ಗೆ ತರಬೇತಿ ನೀಡಿದೆ. ಇಲಾಖೆಯು ಎರಡು ತಂಡಗಳನ್ನು ನೇಮಿಸಿ ಅಗತ್ಯ ಬಿದ್ದಲ್ಲಿ ಈ ತಂಡಗಳನ್ನು ಕಳುಹಿಸಿ ಕೊಡಲು ಸನ್ನದ್ದವಾಗಿದೆ. ರಕ್ಷಣಾ ಕಾರ್ಯಕ್ಕೆ ಬೇಕಾದ ಎಲ್ಲ ಸಲಕರಣೆಗಳನ್ನು ಸಂಗ್ರಹ ಮಾಡಲಾಗಿದ್ದು, ಅಗತ್ಯವಿದ್ದೆಡೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ