ಮಲ್ಪೆ ಬಂದರಲ್ಲಿ ಲಂಗರು ಹಾಕಿದ 2 ಸಾವಿರ ಬೋಟ್‌ಗಳು

Team Udayavani, Jun 1, 2018, 2:00 AM IST

boats-port-31-5.jpg

ಮಲ್ಪೆ: ಮುಂಗಾರು ಸಂದರ್ಭ ಆಳ ಸಮುದ್ರದಲ್ಲಿ ಮೀನುಗಾರಿಕೆ ಅಪಾಯಕಾರಿ. ಈ ಹಿನ್ನೆಲೆಯಲ್ಲಿ ಸರಕಾರವು ಸಾರ್ವತ್ರಿಕವಾಗಿ ಎರಡು ತಿಂಗಳು (ಜೂ.1 ರಿಂದ ಜು.31) ಯಾಂತ್ರಿಕ ಮೀನುಗಾರಿಕೆಗೆ ರಜೆ ಘೋಷಿಸಲಾಗುತ್ತದೆ. ಮೀನುಗಳ ಸಂತಾನ ಅಭಿವೃದ್ದಿಗೂ ಇದು ಪ್ರಸಕ್ತವಾಗಿದ್ದು ಈ ನಿಟ್ಟಿನಲ್ಲಿ ಮಲ್ಪೆ ಬಂದರಿನಲ್ಲಿ ಎಲ್ಲ ಸ್ತರದ ದೋಣಿಗಳು ಲಂಗರು ಹಾಕಿ ನಿಂತಿವೆ.

ಊರಿಗೆ ಮರಳಿದ ಕಾರ್ಮಿಕರು
ಮೀನುಗಾರಿಕಾ ಋತು ಆರಂಭದಲ್ಲಿ ಹೊರ ಜಿಲ್ಲೆಯ ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ಹುಬ್ಬಳ್ಳಿ, ವಿಜಯಪುರ ಮುಂತಾದ ಕಡೆಗಳಿಂದ ಪುರುಷ, ಮಹಿಳಾ ಕಾರ್ಮಿಕರು ಮೀನು ಹೋರುವ, ಲೋಡ್‌, ಅನ್‌ ಲೋಡ್‌ ಮಾಡುವ ಕಾಯಕಕ್ಕೆ ಮಲ್ಪೆ ಬಂದರಿಗೆ ಬರುತ್ತಾರೆ. ಮೀನುಗಾರಿಕೆ ಸೀಸನ್‌ ಮುಗಿಯುತ್ತಿದ್ದಂತೆ ಮತ್ತೆ ತಮ್ಮ ಊರಿಗೆ ಮರುಳುವುದು ವಾಡಿಕೆ. ಇನ್ನು ಎರಡು ತಿಂಗಳು ಬಿಡುವಿನ ಕಾರಣ ಬಹುತೇಕ ಮಂದಿ ಈಗಾಗಲೇ ಊರಿಗೆ ತೆರಳಿದ್ದಾರೆ, ಹೊರರಾಜ್ಯವಾದ ಒರಿಸ್ಸಾ, ಆಂಧ್ರಪ್ರದೇಶ, ಜಾರ್ಖಂಡ್‌ ಗಳಿಂದಲೂ ಕಾರ್ಮಿಕರು ಇಲ್ಲಿಗೆ ಆಗಮಿಸುತ್ತಿದ್ದು, ನಿಷೇಧ ಕಾರಣ ಊರಿಗೆ ಮರಳಲು ಸಿದ್ಧರಾಗಿದ್ದಾರೆ.  

ಇಷ್ಟು ಮಂದಿಗೆ ರೆಸ್ಟ್‌
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿರುವ ಸುಮಾರು 1200 ಬೋಟ್‌ ಗಳಲ್ಲಿ 10,800 ಮಂದಿ,150 ಪರ್ಸಿನ್‌ ಬೋಟ್‌ ಗಳಲ್ಲಿ 5200 ಮಂದಿ, 600 ತ್ರಿಸೆವೆಂಟಿ ಬೋಟ್‌ಗಳಲ್ಲಿ 3600 ಮಂದಿ, ಗಿಲ್‌ ನೆಟ್‌,  ಸಣ್ಣಟ್ರಾಲ್‌ ಬೋಟ್‌, ಸೇರಿದಂತೆ 30 ಸಾವಿರ ಮಂದಿ ಮೀನುಗಾರಿಕೆ ನಡೆಸುತ್ತಾರೆ. ಇನ್ನು ಬೋಟಿನಿಂದ ಮೀನು ಖಾಲಿ ಮಾಡುವವರು, ಹೊತ್ತೂಯ್ಯುವವರು ಮೀನು ಲೋಡ್‌ ಮಾಡುವವರು ಸೇರಿದಂತೆ ಸುಮಾರು 12 ಸಾವಿರ ಮಂದಿ ಮೀನುಗಾರಿಕೆಗೆ ಸಂಬಂಧಿಸಿದಂತೆ ಇತರ ಕೆಲಸ ಮಾಡುತ್ತಿದ್ದಾರೆ. ಸುಮಾರು 40 ಐಸ್‌ ಪ್ಲಾಂಟ್‌, 10 ಮೀನು ಕಟ್ಟಿಂಗ್‌ ಶೆಡ್‌ಗಳು, 4 ಫಿಶ್‌ ಮೀಲ್‌ ಗ‌ಳು ಈ ಅವಧಿಯಲ್ಲಿ ಮುಚ್ಚುತ್ತವೆ. ಇವಲ್ಲದೆ ಮೀನುಗಾರಿಕೆಗೆ ಸಂಬಂಧಿಸಿದಂತೆ ಲಾರಿಗಳು ಟೆಂಪೋ, ರಿಕ್ಷಾಗಳು ಸೇರಿದಂತೆ ಸುಮಾರು 8 ಸಾವಿರಕ್ಕೂ ಅಧಿಕ ಮೀನು ಸಾಗಾಟದ ವಾಹನಗಳಿವೆ.

ರಜೆಯಲ್ಲೂ ಕೆಲಸ
ಮೀನುಗಾರಿಕೆಗೆ ರಜೆ ಇದ್ದರೂ  ಬೋಟ್‌ ಮಾಲಕರು, ಮೀನುಗಾರರಿಗೆ ರಜೆ ಇರುವುದಿಲ್ಲ. ಬೋಟ್‌ ಕಟ್ಟುವುದು, ಬೋಟಿನ ರಿಪೇರಿ, ನಿರ್ವಹಣೆ, ಬಲೆ ಹೊಂದಿಸಿಕೊಳ್ಳುವ ಕೆಲಸದಲ್ಲಿ ಮೀನುಗಾರರು ತೊಡಗಿಸಿಕೊಳ್ಳುತ್ತಾರೆ. ಆ ಮೂಲಕ ನಿಷೇಧ ಬಳಿಕ ಮತ್ತೆ ಮೀನುಗಾರಿಕೆಗೆ ತೆರಳಲು ಸಿದ್ಧತೆ ನಡೆಸುತ್ತಾರೆ.

ಮಳೆಗಾಲದಲ್ಲಿ ನಾಡದೋಣಿ
ಆಳಸಮುದ್ರ ಮೀನುಗಾರಿಕೆಗೆ ನಿಷೇಧವಿರುವ ಈ ಸಂದರ್ಭದಲ್ಲಿ ನಾಡದೋಣಿ ಮೀನುಗಾರಿಕೆಗೆ ಅವಕಾಶವಿದೆ. ಶ್ರಮಜೀವಿ ಮೀನುಗಾರರು ಈ ಸಂದರ್ಭದಲ್ಲಿ ನಾಡದೋಣಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. 12 ನಾಟಿಕಲ್‌ ಮೈಲುನೊಳಗೆ 10 ಅಶ್ವಶಕ್ತಿಯ ಎಂಜಿನ್‌ ಬಳಸಿದ ದೋಣಿಗಳಲ್ಲಿ ಸಮುದ್ರತೀರದಲ್ಲಿ ಮೀನುಗಾರಿಕೆ ನಡೆಸುತ್ತಾರೆ.

ಜೂ. 3ರವರೆಗೆ ಅವಕಾಶ
ಸರಕಾರದ ಆದೇಶದ ಪ್ರಕಾರ ಮೇ 31ರ ರಾತ್ರಿ 12 ಗಂಟೆ ಒಳಗೆ ಮಾತ್ರ ಮೀನುಗಾರಿಕೆ ಚಟುವಟಿಕೆಗೆ ಅವಕಾಶವಿದೆ. ಸಮುದ್ರದಲ್ಲಿ ಈಗಾಗಲೇ ಉಳಿದಿರುವ ಬೋಟ್‌ ಗಳೆಲ್ಲ ಒಮ್ಮೆಲೆ ಬಂದರು ಸೇರುವುದರಿಂದ ಮೀನುಗಾರ ಸಂಘಟನೆಯ ಒಳ ಒಪ್ಪಂದದಂತೆ ಮೀನು ಖಾಲಿ ಮಾಡಲು ಜೂ.3ರವರೆಗೆ ಅವಕಾಶ ನೀಡಲಾಗುತ್ತದೆ.
– ಸತೀಶ್‌ ಕುಂದರ್‌, ಅಧ್ಯಕ್ಷರು, ಮಲ್ಪೆ ಮೀನುಗಾರರ ಸಂಘ 

— ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.