
ಕಾಪು: ಬಸ್ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು
Team Udayavani, Dec 9, 2022, 8:53 PM IST

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿಯಲ್ಲಿ ಬಸ್ ಢಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.
ಕಾಪು ಕೊಪ್ಪಲಂಗಡಿ ನಿವಾಸಿ ಸ್ವಪ್ನಾ ರವಿ ಶೆಟ್ಟಿ (55) ಮೃತರು. ಅವರು ತವರುಮನೆ ಕಾಪು ಬೈರುಗುತ್ತುವಿಗೆ ತೆರಳಿ ಅಲ್ಲಿಂದ ಕೊಪ್ಪಲಂಗಡಿಯಲ್ಲಿರುವ ತನ್ನ ಮನೆಗೆ ಮರಳುತ್ತಿದ್ದರು. ಕೊಪ್ಪಲಂಗಡಿ ಮಸೀದಿ ಮುಂಭಾಗದಲ್ಲಿ ರಸ್ತೆ ದಾಟಿ ಡಿವೈಡರ್ ಮೇಲೆ ನಿಂತಿದ್ದ ವೇಳೆಯಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಶಾಲಾ ಬಸ್ ಅವರಿಗೆ ಢಿಕ್ಕಿ ಹೊಡೆದಿದೆ.
ಬಸ್ ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಬಳಿಕ ಅವರ ತಲೆಯ ಮೇಲೆ ಬಸ್‌ನ ಚಕ್ರ ಹರಿದಿದ್ದು, ತಲೆ ಬುರುಡೆ ಒಡೆದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾ.ಹೆ. 66ರ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಹರಡಿದ್ದ ಮಹಿಳೆಯ ಮೃತದೇಹವನ್ನು ಆಸಿಫ್ ಅವರ ಸಹಕಾರದೊಂದಿಗೆ ಎಸ್‌ಡಿಪಿಐ ಆ್ಯಂಬುಲೆನ್ಸ್ ಮೂಲಕ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಅಪಘಾತಕ್ಕೆ ಕಾರಣವಾದ ಬಸ್ ಅನ್ನು ವಶಕ್ಕೆ ಪಡೆದುಕೊಂಡಿರುವ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಹಿಳೆಯ ಪತಿ ರವಿ ಶೆಟ್ಟಿ ಅವರು ಈ ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಪ್ರಸ್ತುತ ಕೊಪ್ಪಲಂಗಡಿಯಲ್ಲಿ ಮನೆ ಮಾಡಿ ಪತ್ನಿ ಮತ್ತು ಮಕ್ಕಳೊಂದಿಗೆ ವಾಸವಿದ್ದರು. ಮೃತ ಸ್ವಪ್ನಾ ಶೆಟ್ಟಿ ಪತಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮೃತ ಸ್ವಪ್ನಾ ಶೆಟ್ಟಿ ಅವರ ನೆರೆಮನೆಯ ಕಿಶೋರ್ ಶೆಟ್ಟಿ ಅವರು ಎರಡೂವರೆ ತಿಂಗಳ ಹಿಂದೇ ಇದೇ ಸ್ಥಳದಲ್ಲಿ ಬೈಕ್ ಢಿಕ್ಕಿ ಹೊಡೆದು ಮೃತಪಟ್ಟಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಹಳೆಯಂಗಡಿ ರೈಲ್ವೇ ಗೇಟ್ನಲ್ಲಿಯೇ ಉಳಿದ ಗೂಡ್ಸ್ ಡಬ್ಬಿಗಳು…!

ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

‘ನಟ ಭಯಂಕರ’ನಿಗೆ ತಲೆಬಿಸಿ ತಂದ ರಾಸಲೀಲೆ ಸಿಡಿ..!

ಪ್ರತಿಭಾವಂತ ಕ್ರಿಕೆಟ್ ಪಟುಗಳ ತವರು ಕರ್ನಾಟಕ: ಕೆ.ವೈ.ವೆಂಕಟೇಶ್