ಸಂಚಾರಕ್ಕೆ ಅಯೋಗ್ಯವಾದ ಪಿಲಾರುಖಾನ-ಸೂಡ ರಸ್ತೆ


Team Udayavani, Jul 10, 2018, 6:00 AM IST

0607shirva3.jpg

ಶಿರ್ವ: ಕಟಪಾಡಿ- ಶಿರ್ವ-ಬೆಳ್ಮಣ್‌ ಮುಖ್ಯರಸ್ತೆಯ ಪಿಲಾರುಖಾನದಿಂದ ಸೂಡ-ಪಳ್ಳಿಯನ್ನು ಸಂಪರ್ಕಿಸುವ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸಂಚಾರ ದುಸ್ತರವಾಗಿದೆ. ರಸ್ತೆಯ ಡಾಂಬರು ಕಿತ್ತು ಹೋಗಿ ಹೊಂಡ ಗುಂಡಿಗಳು ಉಂಟಾಗಿ ಅಪಾಯದ ಸ್ಥಿತಿ ನಿರ್ಮಾಣಗೊಂಡಿದೆ.

ಸಂಚಾರಕ್ಕೆ ಅಯೋಗ್ಯ
ಪಿಲಾರುಖಾನದಿಂದ ಸೂಡ ಮಾರ್ಗವಾಗಿ ಪಳ್ಳಿ ನಿಂಜೂರು ಕಡೆಗೆ ಮತ್ತು ನಂದಳಿಕೆ ಮತ್ತು ಹಾಳೆಕಟ್ಟೆ-ಕಲ್ಯಾಕಡೆಗೆ ಸಾಗಲು ಹತ್ತಿರದ ರಸ್ತೆಯಾಗಿದೆ.ಸೂಡದಿಂದ ಶಿರ್ವ ಹಾಗೂ ಬೆಳ್ಮಣ್‌ ಕಡೆಗೆ ಹೋಗುವ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲದೆ ಪ್ರತಿನಿತ್ಯ ನೂರಾರು ವಾಹನಗಳು ಓಡಾಟ ನಡೆಸುತ್ತಿವೆ.
ಅಧಿಕ ಭಾರದ ಲಾರಿ,ಟಿಪ್ಪರ್‌ಗಳ ಓಡಾಟದಿಂದಾಗಿ ರಸ್ತೆ ಮಳೆಗಾಲದಲ್ಲಿ ಸಂಪೂರ್ಣ ಹಾಳಾಗಿದೆ. ಮಳೆಗಾಲದಲ್ಲಿ ಹೊಂಡ ಗುಂಡಿಗಳಲ್ಲಿ ನೀರು ನಿಂತು ದ್ವಿಚಕ್ರವಾಹನ ಸವಾರರು ಮತ್ತು ಪಾದಾಚಾರಿಗಳ ಮೇಲೆ ಕೆಸರಿನ ಸಿಂಚನವಾಗುತ್ತಿದೆ.

ವಾಹನ ಸಂಚಾರಕ್ಕೆ ಹಿಂದೇಟು
ಹಲವಾರು ವರ್ಷಗಳ ಹಿಂದೆ ಈ ರಸ್ತೆಗೆ ಡಾಂಬರು ಹಾಕಲಾಗಿತ್ತು. ಸೂಡ ಹಾಗೂ ಪಳ್ಳಿಯ ಸಮೀಪದ ಪ್ರದೇಶಗಳಲ್ಲಿ ಕಲ್ಲಿನ ಕೋರೆಗಳಿದ್ದು ಅಧಿಕ ಭಾರದ ಕಲ್ಲುಗಳನ್ನು ಹೊತ್ತ ಲಾರಿ,ಟಿಪ್ಪರ್‌ಗಳು ಹೆಚ್ಚಾಗಿ ಈ ರಸ್ತೆಯಲ್ಲೇ ಸಾಗುವುದರಿಂದ ರಸ್ತೆಯ ಡಾಂಬರು ಕಿತ್ತು ಹೋಗಿ ಹೊಂಡ ಗುಂಡಿ ನಿರ್ಮಾಣಗೊಂಡಿದೆ. ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಪಳ್ಳಿಕಡೆ ಹೋಗಲು ನಿಗದಿತ ಅವಧಿಯಲ್ಲಿ ಮಾತ್ರ ಬಸ್‌ಗಳಿದ್ದು ಬೇರೆ ಸಮಯದಲ್ಲಿ ನಾಗರಿಕರು ರಿಕ್ಷಾ ಅಥವಾ ಇತರೆ ಬಾಡಿಗೆ ವಾಹನಗಳನ್ನು ಅವಲಂಬಿಸಬೇಕಾಗಿದೆ. ರಸ್ತೆ ಹೊಂಡ ಗುಂಡಿಗಳಿಂದ ಕೂಡಿರುವುದರಿಂದ ಬಾಡಿಗೆ ವಾಹನಗಳವರು ಈ ರಸ್ತೆಯಲ್ಲಿ ಸಾಗಲು ಹಿಂದೇಟು ಹಾಕುತ್ತಿದ್ದು ಜನರಿಗೆ ತೊಂದರೆಯಾಗಿದೆ.
ಕೆಲವು ವರ್ಷಗಳ ಹಿಂದೆ ಸೂಡದ ಕಲ್ಲಿನ ಕೋರೆಯಿಂದ ಜಲ್ಲಿಕಲ್ಲು ಸಾಗಿಸಿದ್ದರಿಂದಾಗಿ ಡಾಮರೀಕರಣಗೊಂಡಿದ್ದ ರಸ್ತೆಯು ಸಂಪೂರ್ಣ ಹದಗೆಟ್ಟು ವಾಹನ ಸವಾರರು ಚಲಿಸಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.ಬಳಿಕ ನಾಗರಿಕರ ಪ್ರತಿಭಟನೆಯಿಂದ ಮರು ಡಾಮರೀಕರಣಗೊಂಡಿತ್ತು.ಇದೀಗ ಸಂಚಾರಕ್ಕೆ ಅಯೋಗ್ಯವಾದ ರಸ್ತೆಯ ಬಗ್ಗೆ ನಾಗರಿಕರು ಪ್ರತಿಭಟಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಸಂಚಾರಕ್ಕೆ ದುಸ್ತರವಾದ ರಸ್ತೆಯನ್ನು ಜನಪ್ರತಿನಿಧಿಗಳು,ಸಂಬಂಧಪಟ್ಟ ಇಲಾಖೆ ಕೂಡಲೇ ಕ್ರಮ ಕೈಗೊಂಡು ಸರಿಪಡಿಸಬೇಕಾಗಿದೆ.

ರಸ್ತೆಯಲ್ಲಿ ಹೊಂಡ ಗುಂಡಿಗಳಿದ್ದು ವಾಹನದಲ್ಲಿ ಸಂಚಾರ ನಡೆಸುವುದೇ ಕಷ್ಟಕರವಾಗಿದೆ. ಶಾಲಾ ವಿದ್ಯಾರ್ಥಿಗಳು ಕೂಡಾ ಈ ಭಾಗದಿಂದ ಸಂಚರಿಸುತ್ತಿದ್ದು ಹೊಂಡಗಳಲ್ಲಿ ನೀರು ತುಂಬಿರುವುದರಿಂದಾಗಿ ದ್ವಿಚಕ್ರವಾಹನ ಸವಾರರು ಬಿದ್ದು ಕೈಕಾಲು ಮುರಿದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಸೂಡ ಅರ್ಚಕರಾದ ಶ್ರೀಶ ಭಟ್‌ ಅವರು ಹೇಳುತ್ತಾರೆ.

ಟಾಪ್ ನ್ಯೂಸ್

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

Exam

UPSC ಸಿವಿಲ್‌ ಪ್ರಿಲಿಮ್ಸ್‌ ಪರೀಕ್ಷೆ ಇಂದು : 2 ಹಂತ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

ಬಕ್ರೀದ್‌: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

Bakrid: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

ಎಂಇಐಎಲ್‌ “ಇಂಡಿಯ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

Manipal ಎಂಇಐಎಲ್‌ “ಇಂಡಿಯಾ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

4-udupi

ರಾಮ ನಿರ್ಯಾಣದ ಪ್ರವಚನಗೈಯುತ್ತಲೇ ಮೋಕ್ಷಯಾನ ಕೈಗೊಂಡ ದ್ವೈತ ವೇದಾಂತ ವಿಚಕ್ಷಣ

3-application

Udupi: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

1-asdsdasdas-d

South Africa 30 ವರ್ಷದಲ್ಲಿ ಮೊದಲ ಬಾರಿಗೆ ಸಮ್ಮಿಶ್ರ ಸರಕಾರ

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

Exam

UPSC ಸಿವಿಲ್‌ ಪ್ರಿಲಿಮ್ಸ್‌ ಪರೀಕ್ಷೆ ಇಂದು : 2 ಹಂತ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.