ಅಪಘಾತ ವಲಯಗಳಲ್ಲಿಸುರಕ್ಷಾ ಕ್ರಮ ಅಗತ್ಯ

Team Udayavani, Mar 22, 2021, 3:50 AM IST

ಅಪಘಾತ ವಲಯಗಳಲ್ಲಿಸುರಕ್ಷಾ ಕ್ರಮ ಅಗತ್ಯ

ಇತ್ತೀಚೆಗಿನ ಒಂದು ವರದಿಯ ಪ್ರಕಾರ ಕೋವಿಡ್  ಗಿಂತ ಹೆಚ್ಚಿನ ಸಂಖ್ಯೆಯ ಜನರು ರಸ್ತೆ ಅಪಘಾತಗಳಿಂದ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಿರು ವಾಗ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವತ್ತ ಎಲ್ಲರೂ ಗಮನ ಹರಿಸಬೇಕಾಗಿದೆ. ಅದರಲ್ಲಿ ಮಹಾನಗರ ಅಥವಾ ಗ್ರಾಮೀಣ ಪ್ರದೇಶ ಎಂಬುದಿಲ್ಲ. ಎಲ್ಲೆಲ್ಲ ಅಪಘಾತ ವಲಯಗಳಿವೆಯೋ ಅಲ್ಲೆಲ್ಲ ಸುರಕ್ಷಾ ಕ್ರಮಗಳು ತುರ್ತು ಅನಿವಾರ್ಯವಾಗಿದೆ.

ರಸ್ತೆ ಉಬ್ಬುಗಳನ್ನು ಅವೈಜ್ಞಾನಿಕವಾಗಿ ನಿರ್ಮಿಸುವುದು, ವೇಗ ಮಿತಿಯ ಸೂಚನ ಫ‌ಲಕ ಇಲ್ಲದಿರುವುದು, ಸಂಜ್ಞಾ ಫ‌ಲಕಗಳಿಗೆ ರಾತ್ರಿ ಹೊಳೆಯುವ ಪಟ್ಟಿ ಅಂಟಿಸದೆ ಇರುವುದು, ತಪ್ಪಾದ ಲೈನ್‌ ಮಾರ್ಕಿಂಗ್‌, ಜೀಬ್ರಾ ಕ್ರಾಸಿಂಗ್‌ ಗುರುತು ಮಾಡದೆ ಇರುವುದು… ಹೀಗೆ ಪಟ್ಟಿ ಮುಂದುವರಿಯುತ್ತದೆ.

ರಸ್ತೆಗಳು ಕೂಡುವ ಜಂಕ್ಷನ್‌ಗಳು ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಗಮನ ಹರಿಸಬೇಕಾದ ಪ್ರಮುಖ ತಾಣಗಳು. ಕಾರ್ಕಳ ತಾಲೂಕಿನ ನಗರದ ಆಸುಪಾಸಿನಲ್ಲಿಯೇ 10ಕ್ಕೂ ಅಧಿಕ ಅಪಾಯಕಾರಿ ಜಂಕ್ಷನ್‌ಗಳಿವೆ. ಇವು ಹೆಚ್ಚು ಅಪಘಾತ ಸಂಭವಿಸುವ ಕ್ರಾಸಿಂಗ್‌ ಜಂಕ್ಷನ್‌ಗಳಾಗಿವೆ. ಇಲ್ಲೆಲ್ಲ ವಾಹನಗಳ ವೇಗ ತಡೆಗೆ ಅಗತ್ಯ ವ್ಯವಸ್ಥೆಗಳು ಆಗಬೇಕಿವೆ.

ಜಂಕ್ಷನ್‌ಗಳಲ್ಲಿ  ಸೂಕ್ತ ಸುರಕ್ಷಾ  ವ್ಯವಸ್ಥೆಗಳನ್ನು ಕಲ್ಪಿಸುವುದು ವಾಹನ ಸವಾರರ, ಪಾದಚಾರಿಗಳ ಜೀವ  ಸಂರಕ್ಷಣೆಯ ದೃಷ್ಟಿಯಿಂದ ಅತೀ ಆವಶ್ಯಕ. ಅಪಾಯಕಾರಿ ಜಂಕ್ಷನ್‌ಗಳಲ್ಲಿ ಸ್ವಯಂಚಾಲಿತ ಸಿಗ್ನಲ್‌ ವ್ಯವಸ್ಥೆ ಅಳವಡಿಸುವುದು ವಾಹನ ಚಾಲನೆ, ರಸ್ತೆ ದಾಟುವ ಸಂದರ್ಭಗಳಲ್ಲಿ ನೆರವಿಗೆ ಬರುತ್ತದೆ. ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ರಸ್ತೆಗಳನ್ನು ನಿರ್ಮಾಣ ಮಾಡಿದ್ದರೂ ಸೂಕ್ತ ರಸ್ತೆ ಸುರಕ್ಷಾ ಕ್ರಮಗಳನ್ನು ಅಳವಡಿಸಿಕೊಳ್ಳದೇ ಇದ್ದರೆ ನೀರಿನಲ್ಲಿ ಹೋಮ ಮಾಡಿದಂತೆ.

ಕಾರ್ಕಳವನ್ನೇ ತೆಗೆದುಕೊಂಡು ಹೇಳುವುದಾದರೆ, ನಗರದ ಹೊರ ವಲಯದ ಹೆಚ್ಚಿನ ಜಂಕ್ಷನ್‌ಗಳಲ್ಲಿ ರಾತ್ರಿ ಹೊತ್ತು ಸೂಕ್ತ ಬೆಳಕಿನ ವ್ಯವಸ್ಥೆ ಇಲ್ಲ. ಪಾದಚಾರಿಗಳು ಮಂದ ಬೆಳಕಿನಲ್ಲಿ ರಸ್ತೆ ಅಡ್ಡ ದಾಟುತ್ತಿರುವಾಗ ಗೋಚರಿಸದೆ ವಾಹನ  ಅವಘಡಗಳು ಸಂಭವಿಸುತ್ತವೆ. ಜನರು ಹೆಚ್ಚು ಓಡಾಡುವ ಮತ್ತು ರಸ್ತೆ ದಾಟುವ ನೇರ ರಸ್ತೆ ಇರುವ ಕಡೆಗಳಲ್ಲಿಯೂ ಬ್ಯಾರಿಕೇಡ್‌, ಹಂಪ್‌ಗ್ಳನ್ನು ಅಳವಡಿಸಿ ಅಪಘಾತ ತಪ್ಪಿಸಬಹುದು. ಶಾಲಾ ಕಾಲೇಜುಗಳಿರುವ ಸ್ಥಳಗಳಲ್ಲಿ ಮಕ್ಕಳು ರಸ್ತೆಯಲ್ಲಿ ಓಡಾಡುವುದು, ದಾಟುವುದು ಮಾಡುತ್ತಿರುತ್ತಾರೆ. ಇಂತಹ ಕಡೆಗಳಲ್ಲಿ ವೇಗ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಬೇಕಿದೆ.

ಹೆಚ್ಚು ಅಪಘಾತವಾಗುವ ಜಂಕ್ಷನ್‌ ಮತ್ತು ರಸ್ತೆಗಳಿರುವ ಕಡೆಗಳಲ್ಲಿ ಗೃಹರಕ್ಷಕ ದಳ, ಪೊಲೀಸ್‌ ಸಿಬಂದಿಯನ್ನು ವಾಹನ, ಜನ ಸಂಚಾರ ಹೆಚ್ಚಿರುವ ಬೆಳಗ್ಗೆ ಮತ್ತು ಸಂಜೆ ಹೊತ್ತಿನಲ್ಲಾದರೂ ನಿಯೋಜಿಸಿದಲ್ಲಿ ಬಹಳಷ್ಟು ಅನುಕೂಲವಾಗುತ್ತದೆ.

ಹೆಚ್ಚು ಅಪಘಾತ ನಡೆಯುವ ಸ್ಥಳಗಳನ್ನು ಗುರುತಿಸಿ, ಸುರಕ್ಷಾ ಲೋಪಗಳನ್ನು ಸರಿಪಡಿಸಲು ಸಂಬಂದಿಸಿದ ಇಲಾಖೆಗಳು ಯೋಜನೆ ರೂಪಿಸುವು ಅಗತ್ಯ. ಗ್ರಾಮೀಣ ರಸ್ತೆಗಳ ಪೈಕಿ ಕೆಲವೆಡೆ ಗುಂಡಿ ಬಿದ್ದಿದ್ದು, ಅಪಘಾತ ಸಂಭವಿಸಲು ಕಾರಣವಾಗುತ್ತಿದೆ. ಇವೆಲ್ಲದರ ಕಡೆ ಸಂಬಂಧಿಸಿದ ಇಲಾಖೆಗಳು ಗಮನ ಹರಿಸದೆ ಹೋದಲ್ಲಿ ಅಪಘಾತ, ಸಾವು-ನೋವು ಮುಂದುವರಿಯುತ್ತದೆ. ಹಾಗಾಗದಿರಲಿ, ಅದಕ್ಕಾಗಿ ಇಲಾಖೆಗಳು ಈಗಿಂದೀಗಲೇ ಕಾರ್ಯೋನ್ಮುಖವಾಗಲಿ.

-ಸಂ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.