“ಸಖಿ ಯೋಜನೆ: ಸಾರ್ವಜನಿಕರಿಗೆ ಮಾಹಿತಿ ನೀಡಿ’

ಸಖಿ ಒನ್‌ ಸ್ಟಾಪ್‌ ಸೆಂಟರ್‌, ಸಖಿ ಟಾಸ್ಕ್ ಫೋರ್ಸ್‌ ಯೋಜನೆ: ಸಮಿತಿ ಸಭೆ

Team Udayavani, Dec 13, 2019, 8:50 PM IST

ಉಡುಪಿ: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಕಡೆ ಆರೋಗ್ಯ, ಕಾನೂನು, ವಸತಿ ಮತ್ತು ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಸಖಿ ವನ್‌ ಸ್ಟಾಪ್‌ ಸೆಂಟರ್‌ ಪ್ರಾರಂಭಿಸಲಾಗಿದ್ದು, ಈ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡುವ ಮೂಲಕ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ನೆರವು ಒದಗಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್‌ ಸೂಚಿಸಿದ್ದಾರೆ.

ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನಡೆದ ರಾಜ್ಯದಲ್ಲಿ ಸಖೀ ಒನ್‌ ಸ್ಟಾಪ್‌ ಸೆಂಟರ್‌, ಸಖಿ ಟಾಸ್ಕ್ ಫೋರ್ಸ್‌ ಯೋಜನೆಯ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲೇ ಪ್ರಪ್ರಥಮವಾಗಿ ಉಡುಪಿ ಜಿಲ್ಲೆಯಲ್ಲಿ ಸಖೀ ವನ್‌ ಸ್ಟಾಪ್‌ ಸೆಂಟರಿಗೆಂದೇ ನಿಟ್ಟೂರಿನಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಜಿಲ್ಲೆಯ ನೊಂದ ಮಹಿಳೆಯರಿಗೆ ಒಂದೇ ಸ್ಥಳದಲ್ಲಿ ಅಗತ್ಯರುವ ಎಲ್ಲ ರೀತಿಯ ನೆರವು ನೀಡುವ ಈ ಕೇಂದ್ರದ ಕುರಿತಂತೆ ಜಿಲ್ಲೆಯಲ್ಲಿ ನಡೆಯುವ ಎಲ್ಲ ಗ್ರಾಮಸಭೆ ಮತ್ತು ಮಹಿಳಾ ಗ್ರಾಮಸಭೆಗಳಲ್ಲಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾ ರಕಿಯರು ಮತ್ತು ಸಖಿ ಕೇಂದ್ರದ ಸಿಬಂದಿಗಳಿಗೆ ಮಾಹಿತಿ ನೀಡುವಂತೆ ಹಾಗೂ ಎಲ್ಲ ಗ್ರಾ.ಪಂ.ಗಳಲ್ಲಿ ಪೋಸ್ಟರ್‌ಗಳು ಮತ್ತು ಕರಪತ್ರಗಳ ಮೂಲಕ ಮಾಹಿತಿ ನೀಡುವಂತೆ ಸೂಚಿಸಿದರು.

ಪ್ರಸಕ್ತ ಸಾಲಿನಲ್ಲಿ ಸಖಿ ಕೇಂದ್ರದಲ್ಲಿ ಜುಲೈನಿಂದ ನವೆಂಬರ್‌ವರೆಗೆ ಕೌಟುಂಬಿಕ ದೌರ್ಜನ್ಯದ 13, ಲೈಂಗಿಕ ಕಿರುಕುಳ 1 ಮತ್ತು ಇತರೆ 7 ಸೇರಿದಂತೆ 21 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 6 ಪ್ರಕರಣ ಇತ್ಯರ್ಥಗೊಂಡಿದ್ದು, 8 ಪ್ರಕರಣ ನ್ಯಾಯಾಲಯದಲ್ಲಿದೆ. 7 ಪ್ರಕರಣಗಳು ಸಮಾಲೋಚನೆಯ ಹಂತದಲ್ಲಿದ್ದು, ನೊಂದ ಮಹಿಳೆಯರಿಗೆ ಸಾಂತ್ವನ ನೀಡುವ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಪೊಲೀಸ್‌ ಇಲಾಖೆಯಲ್ಲಿ ದಾಖ ಲಾಗುವ ಮಹಿಳಾ ದೌರ್ಜನ್ಯ ಪ್ರಕರಣ ಬಗ್ಗೆ, ಮಾಹಿತಿ ಪಡೆದು ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ಸಖಿ ಕೇಂದ್ರದ ಮೂಲಕ ನೆರವು ಒಗದಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಿ ಬಾಯಿ, ಜಿ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ ಜಿ. ಪುತ್ರನ್‌, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್‌ ಪಡೆ°àಕರ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾ ಖೆಯ ಪ್ರಭಾರ ಉಪನಿರ್ದೇಶಕಿ ವೀಣಾ ವಿವೇಕಾನಂದ, ಡಿ.ವೈ.ಎಸ್‌.ಪಿ. ಜೈ ಶಂಕರ್‌, ಡಿ.ಡಿ.ಪಿ.ಐ. ಶೇಷ ಶ‌ಯನ ಕಾರಿಂಜ ಮತ್ತಿತರರು ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ