ನ. 23ರಿಂದ ಆ್ಯಪ್‌ ಬಳಸಿ ಮರಳು ವಿತರಣೆ: ಡಿಸಿ

Team Udayavani, Nov 21, 2019, 4:07 AM IST

ಉಡುಪಿ: ಜಿಲ್ಲೆಯಲ್ಲಿ ನ. 23ರಿಂದ ಉಡುಪಿ ಇ-ಸ್ಯಾಂಡ್‌ ಆ್ಯಪ್‌ ಮೂಲಕ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರು ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಳ್ಳಲಿದ್ದು, ಆವಶ್ಯಕತೆ ಇರುವವರು UDUPI E SAND APP ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ. ನ. 23ರಂದು ಬೆಳಗ್ಗೆ 10 ಗಂಟೆಗೆ ಇ-ಸ್ಯಾಂಡ್‌ ಆ್ಯಪ್‌ ಮೂಲಕ ಮರಳು ವಿತರಣೆ ಆರಂಭವಾಗಲಿದ್ದು, ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಹೊರಗೆ ಮರಳು ಪೂರೈಸಲು ಅವಕಾಶವಿಲ್ಲ ಎಂವರು ತಿಳಿಸಿದ್ದಾರೆ.

ಮರಳನ್ನು ಸಾಗಾಟ ಮಾಡಲು ಇಚ್ಛಿಸುವವರು ತಮ್ಮ ವಾಹನಗಳನ್ನು ಉಡುಪಿ ಇ-ಸ್ಯಾಂಡ್‌ ಆ್ಯಪ್‌ನಲ್ಲಿ ನೊಂದಾಯಿಸಿಕೊಳ್ಳಲು ಈಗಾಗಲೇ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ, ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಉಡುಪಿ ಜಿಲ್ಲೆ ದೂ.ಸಂ. 0820-2572333ನ್ನು ಸಂಪರ್ಕಿಸಬಹುದು ಎಂದವರು ತಿಳಿಸಿದ್ದಾರೆ.

ಡಿ.1ರಿಂದ ಫಾಸ್ಟ್ಯಾಗ್‌ ಕಡ್ಡಾಯ
ದೇಶದಾದ್ಯಂತ ಡಿ. 1ರಿಂದ ಎಲ್ಲ ಹೆದ್ದಾರಿ ಟೋಲ್‌ಗ‌ಳಲ್ಲಿ ಕಡ್ಡಾಯ ಫಾಸ್ಟಾಗ್‌ ಅಳವಡಿಕೆಗೆ ಕೇಂದ್ರ ಸರಕಾರ ಆದೇಶ ಹೊರಡಿಸಿದ್ದು, ಎಲ್ಲ ವಾಹನಗಳ ಮಾಲಕರು ವಾಹನಗಳಿಗೆ ಫಾಸ್ಟಾಗ್‌ ಕಡ್ಡಾಯವಾಗಿ ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಫಾಸ್ಟಾಗ್‌ ಇರದ ವಾಹನಗಳು ನಿಗದಿತ ಶುಲ್ಕದ ಎರಡು ಪಟ್ಟು ನೀಡಬೇಕಾಗುತ್ತದೆ ಎಂದು ತಿಳಿಸಿದ ಡಿಸಿ, ಫಾಸ್ಟಾಗ್‌ ಸೌಲಭ್ಯವನ್ನು ಎಲ್ಲ ಟೋಲ್‌ಗ‌ಳಲ್ಲಿ ಮತ್ತು ಸಂಬಂಧಿಸಿದ ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‌ಗಳಲ್ಲಿ ಪಡೆಯಬಹುದಾಗಿದೆ ಎಂದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಆರ್‌ಟಿಒ ರಾಮಕೃಷ್ಣ ರೈ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ರಮೇಶ್‌ ಬಾಬು, ನವಯುಗದ ಶಿವಪ್ರಸಾದ್‌ ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ನಮ್ಮ ಊರಿನ ಒಬ್ಬ ರೈತರು ಟೆಫ್ ಎಂಬ ಹೊಸ ಬೆಳೆಯನ್ನು ಬೆಳೆಯುತ್ತಿದ್ದಾರೆ. ಅದು ಯಾವ ಬೆಳೆ, ಹೇಗೆ ಬೆಳೆಯಬೇಕು ಇತ್ಯಾದಿ ಮಾಹಿತಿ ನೀಡುವಿರಾ? - ಮಂಜುನಾಥ ಪಟೇಲ್‌,...

  • ಮನದ ಮೂಲೆಯಲ್ಲಿ ಇಡಿಸೂಡಿ ಹಿಡಿದ ಕೈಯೊಂದು ಮನೆಯ ಮೂಲೆಮೂಲೆಗಳನ್ನು ಸ್ವತ್ಛಗೊಳಿಸುತ್ತಿರುವಂತೆ ಭಾಸವಾದಾಗ ಒಂದು ಕ್ಷಣ ಯೋಚನೆಯಲ್ಲೇ ಮುಳುಗಿ ಹೋಯ್ತು ಮನ....

  • ಹುಬ್ಬಳ್ಳಿ: ಉತ್ತರಾಧಿಕಾರಿ ನೇಮಕ ವಿಚಾರ, ತಮ್ಮ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡುವ ನಿಟ್ಟಿನಲ್ಲಿ ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ,...

  • ಜಾಗತಿಕ ಮಟ್ಟದಲ್ಲಿ ಬೆಂಗಳೂರು ಬೆಳೆಯುತ್ತಿದೆ. ದೇಶದ ನಾನಾ ಭಾಗಗಳಿಂದ ಜನ ಇಲ್ಲಿಗೆ ಬಂದು ನೆಲೆಸಿದ್ದಾರೆ. ಬದುಕಿರುವಾಗ ಹೇಗೋ ನೆಲೆ ಸಿಗುತ್ತಿದೆ. ಆದರೆ ಅದೇ...

  • ಬೆಂಗಳೂರು: ವಿವಿಧ ಇಲಾಖೆಯ ಸಚಿವರು ಸುಲಭವಾಗಿ ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಲಭ್ಯವಾಗಬೇಕೆಂಬ ಸದುದ್ದೇಶದಿಂದ ಬಿಜೆಪಿ ಕೇಂದ್ರ ಕಚೇರಿಗೆ ವಾರಕ್ಕೆ...