ಸಾಸ್ತಾನ: ಟೋಲ್‌ ವಿರುದ್ಧ ಹೆಚ್ಚಿದ ಪ್ರತಿಭಟನೆಯ ಕಾವು


Team Udayavani, Feb 12, 2017, 3:45 AM IST

satana.jpg

ಕೋಟ: ಸ್ಥಳೀಯರಿಗೆ ಟೋಲ್‌ನಲ್ಲಿ ವಿನಾಯಿತಿ ನೀಡಬೇಕು ಎನ್ನುವ ಸಾರ್ವಜನಿಕರ ಹೋರಾಟದ ಕಾವು ತೀವ್ರಗೊಂಡಿದೆ. ಶನಿವಾರ ಸಾಸ್ತಾನದ ಶಿವಕೃಪಾ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಪ್ರತಿಭಟನ ನಿರತರು ಶುಲ್ಕ ಸಂಗ್ರಹಕ್ಕೆ ಅವಕಾಶ ನೀಡಿದ ಜಿಲ್ಲಾಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಅನಂತರ ಟೋಲ್‌ಗೇಟಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿ ಪೊಲೀಸರಿಂದ ಬಂಧನಕ್ಕೊಳಗಾದರು.

ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜಿಲ್ಲಾಧಿಕಾರಿಗಳು ಟೋಲ್‌ ವಿಚಾರದಲ್ಲಿ ಅವಸರದ ತೀರ್ಮಾನ ಕೈಗೊಂಡಿದ್ದಾರೆ. ಏಕಾಏಕಿ ಟೋಲ್‌ಗೆ ಅವಕಾಶ ನೀಡಿದ್ದು ಸರಿಯಲ್ಲ ಎಂದರು.

ಸಾಮಾಜಿಕ ಹೋರಾಟಗಾರ ಕಿಶೋರ ಕುಮಾರ್‌ ಮಾತನಾಡಿ, ಉಡುಪಿ ಜಿಲ್ಲಾಧಿಕಾರಿಗಳು ನಮ್ಮ ಜಿಲ್ಲೆಯಲ್ಲಿ ಬಿಹಾರದ ಕಾನೂನನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದಾರೆ ಮತ್ತು ಸಾರ್ವಜನಿಕರ ಬೇಡಿಕೆಗಳಿಗೆ ಬೆಲೆ ನೀಡುವ ಬದಲು ಬಂಡವಾಳಶಾಹಿಗಳ ಪರ ನಿಂತಿದ್ದಾರೆ ಎಂದರು.

ಇಂದಿನ ಪೊಲೀಸ್‌ ಬಂದೋಬಸ್ತ್, ಪ್ರತಿಭಟನೆ ಯನ್ನು ಹತ್ತಿಕ್ಕಲು ಮಾಡುತ್ತಿರುವ ಪ್ರಯತ್ನಗಳನ್ನು ನೋಡಿದರೆ ಸ್ವಾತಂತ್ರÂ ಪೂರ್ವದ ದಿನಗಳು ನೆನಪಾಗುತ್ತಿವೆ ಎಂದು ಜಿಲ್ಲಾ ಲಾರಿ ಮಾಲಕರ ಸಂಘದ ಅಧ್ಯಕ್ಷ ರಾಜೇಶ ಕಾವೇರಿ ತಿಳಿಸಿದರು. ಸಾರ್ವಜನಿಕರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ನೀಡದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್‌ ಎಚ್ಚರಿಕೆ ನೀಡಿದರು.

ಹೋರಾಟಗಾರರನ್ನು ಭಯೋತ್ಪಾದಕರಂತೆ ಬಿಂಬಿಸಲಾಗುತ್ತಿದ್ದು, ಜಿಲ್ಲಾಧಿಕಾರಿಗಳಿಗೆ ಜನಸಾಮಾನ್ಯರ ಸಮಸ್ಯೆ ಕುರಿತು ಕಾಳಜಿ ಇಲ್ಲ ಎಂದು ಜಯಕರ್ನಾಟಕ ಸಂಘಟನೆ ಅಣ್ಣಪ್ಪ ಕುಲಾಲ್‌, ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ, ಗುಂಡ್ಮಿ ಮಸೀದಿಯ ಮಹಮ್ಮದ್‌ ಮುಂತಾದವರು ಅಭಿಪ್ರಾಯಪಟ್ಟರು.

ಜಯಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲಾ ಮಾಜಿ ಅಧ್ಯಕ್ಷ ಸತೀಶ್‌ ಪೂಜಾರಿ, ಹೆದ್ದಾರಿ ಜಾಗೃತ ಸಮಿತಿಯ ಅಧ್ಯಕ್ಷ ಪ್ರತಾಪ್‌ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ಶಂಕರ ಕುಂದರ್‌ ಕೋಟ ಮುಂತಾದವರು ಮಾತನಾಡಿದರು.

ಹೋರಾಟಗಾರರ ಬಂಧನ: ಪ್ರತಿಭಟನ ಸಭೆಯ ಅನಂತರ ಹೋರಾಟಗಾರರು ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು ಹಾಗೂ ಉಡುಪಿಯಿಂದ ಕುಂದಾಪುರಕ್ಕೆ ತೆರಳುವ ಮಾರ್ಗದಲ್ಲಿ ಕೆಲವು ನಿಮಿಷಗಳ ಕಾಲ ರಸ್ತೆ ತಡೆ ನಡೆಸಿದರು. 

ಈ ಸಂದರ್ಭ ಸಾಸ್ತಾನ ಮುಖ್ಯಪೇಟೆಯ ಬಳಿ ಜಮಾವಣೆಗೊಂಡಿದ್ದ ನೂರಾರು ಸಂಖ್ಯೆಯ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ಟೋಲ್‌ ಕೇಂದ್ರದಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ತಡೆದರು.

ಸೋಮವಾರ ಜಿಲ್ಲಾ  ಬಂದ್‌ ನಿಶ್ಚಿತ
ಜಿಲ್ಲಾಡಳಿತ ನಮ್ಮ ಸಮಸ್ಯೆಗೆ ದನಿಯಾಗುವ ಬದಲು ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದ್ದರಿಂದ ಸೋಮವಾರ ಕರೆ ನೀಡಿರುವ ಬಂದ್‌ ದೊಡ್ಡ ಪ್ರಮಾಣದಲ್ಲಿ ನಡೆಯಲಿದೆ. ಈಗಾಗಲೇ ವಿದ್ಯಾರ್ಥಿ ಸಂಘಟನೆಗಳು, ಬಸ್‌ ಮಾಲಕರು ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದಾರೆ. ಎಲ್ಲ ಸಂಘ-ಸಂಸ್ಥೆಗಳು, ಬೆಂಬಲ ನೀಡುವ ಭರವಸೆ ಇದೆ. ಸೋಮವಾರ ಜಿಲ್ಲೆಯಾದ್ಯಂತ ಎಲ್ಲ ಭಾಗಗಳಲ್ಲಿ ಸ್ಥಳೀಯ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೆದ್ದಾರಿ ಜಾಗೃತ ಸಮಿತಿಯ ಅಧ್ಯಕ್ಷ ಪ್ರತಾಪ್‌ ಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.