ಶಾಲಾ ಪ್ರಾರಂಭೋತ್ಸವ: ಮಕ್ಕಳಿಗೆ ಸಂಭ್ರಮದ ಸ್ವಾಗತ
Team Udayavani, May 16, 2022, 12:05 PM IST
ಹೆಬ್ರಿ: ಹಿರಿಯಡ್ಕ ಪಬ್ಲಿಕ್ ಸ್ಕೂಲ್ ನ ಪ್ರಾಥಮಿಕ ವಿಭಾಗದಲ್ಲಿ ಮೇ 16ರಂದು ಶಾಲಾ ಪ್ರಾರಂಭೋತ್ಸವ ಅಂಗವಾಗಿ ಶಾಲೆಯನ್ನು ತಳಿರು ತೋರಣಗಳಿಂದ ಶೃಂಗರಿಸಿ, ಹಿರಿಯಡ್ಕ ವೀರಭದ್ರ ಸ್ವಾಮಿ ದೇವಸ್ಥಾನದಿಂದ ಆಕರ್ಷಕ ಮೆರವಣಿಗೆ ಮೂಲಕ ಮಕ್ಕಳನ್ನು ಪ್ರೀತಿಯಿಂದ ಸಂಭ್ರಮದ ಮೂಲಕ ಬರಮಾಡಿಕೊಂಡು ಸ್ವಾಗತಿಸಲಾಯಿತು.
ಸರಕಾರಿ ಶಾಲೆಯೊಂದರಲ್ಲಿ ಸುಮಾರು 700 ಕ್ಕೂ ಹೆಚ್ಚು ಪ್ರಾಥಮಿಕ ವಿಭಾಗದ ಮಕ್ಕಳಿದ್ದು, ಪ್ರತಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡುವ ಜತೆಗೆ ಸಿಹಿ ತಿಂಡಿ ವಿತರಿಸಿ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಎಸ್ ಡಿಎಂಸಿ ಉಪಾಧ್ಯಕ್ಷ ಬಿ ಎಲ್ ವಿಶ್ವನಾಥ್ ಭಟ್, ಶಾಲಾ ಮುಖ್ಯ ಶಿಕ್ಷಕ ಕೃಷ್ಣ ನಾಯ್ಕ್, ಉಪನ್ಯಾಸಕಿ ನಳಿನಾ ದೇವಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಅಶೋಕ್ ಜೋಗಿ, ದೇವರಾಜ್ ಶಾಸ್ತ್ರಿ, ಸುಬ್ರಹ್ಮಣ್ಯ ರಾವ್, ಮೋಹನ್ ಶೆಟ್ಟಿ, ವಿಜೇತ್ ಕುಮಾರ್, ಯಶೋಧಾ, ರೇಖಾ, ಸರೋಜಿನಿ, ಜ್ಯೋತಿ ,ಲಕ್ಷ್ಮಿ ಮೊದಲಾದವರು ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಪ್ರಕಾಶ್ ನಾಯಕ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸುಳ್ಳು ಅನ್ನೋದು ಬಿಜೆಪಿಯವರಿಗೆ ರಕ್ತಗತವಾಗಿದೆ : ರಾಮಲಿಂಗಾ ರೆಡ್ಡಿ
ಫ್ರೀಡಂ ಪಾರ್ಕ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ; ಪೂರಕ ಸ್ಪಂದನೆ ಎಂದ ಸಚಿವ
ಕೆಲಸಕಿದ್ದ ಮನೆಯಲ್ಲಿ ನಗನಾಣ್ಯ ಕದ್ದ ತಾಯಿ-ಮಗಳು
ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಿದ್ದತೆ ಮುಖ್ಯವೆಂದ ಡಿಕೆಶಿ
ಕಲಬುರಗಿ- ಯಾದಗಿರಿ ಡಿಸಿಸಿ ಬ್ಯಾಂಕ್ ಗೆ 19 ಕೋ ರೂ ಲಾಭ : ತೇಲ್ಕೂರ