ನಾಳೆ ಕಡಲಿಗಿಳಿಯಲಿವೆ ದೋಣಿಗಳು


Team Udayavani, Jul 31, 2018, 9:47 AM IST

3007mlr42.jpg

ಮಂಗಳೂರು / ಮಲ್ಪೆ : ಮಳೆಗಾಲದ 60 ದಿನಗಳ ಸುದೀರ್ಘ‌ ರಜೆಯ ಬಳಿಕ ಆ. 1 ರಿಂದ ಹೊಸ ಮೀನುಗಾರಿಕೆ ಋತು ಆರಂಭವಾಗುತ್ತಿದೆ. ಮೀನುಗಾರರು ಹೊಸ ನಿರೀಕ್ಷೆಯೊಂದಿಗೆ ಕಡಲಿಗೆ ಇಳಿಯಲು ಸಿದ್ಧತೆ ನಡೆಸುತ್ತಿದ್ದಾರೆ.
ಈ ಬಾರಿ ಮುಂಗಾರು ಪ್ರಬಲವಾಗಿದ್ದು, ಕಡಲು ಬಹಳಷ್ಟು ಪ್ರಕ್ಷುಬ್ಧವಾದ ಹಿನ್ನೆಲಯಲ್ಲಿ ಎಲ್ಲ ಬಗೆಯ ಮೀನು ಗಾರಿಕೆ ಬೋಟುಗಳು ಆ.1ರಿಂದಲೇ ಮೀನುಗಾರಿಕೆಗೆ ತೆರಳುವುದು ಕಷ್ಟಸಾಧ್ಯ. ಆದರೆ ಶೇ.10ರಿಂದ 20ರಷ್ಟು ಬೋಟುಗಳು ಬಲೆ ಬೀಸಲು ಸಿದ್ಧತೆ ಕೈಗೊಂಡಿವೆ. ಉಳಿದ ಬೋಟುಗಳು ಮುಂದಿನ ಒಂದು ವಾರದೊಳಗೆ ಕಡಲಿ ಗಿಳಿಯುವ ಸಾಧ್ಯತೆ ಇದೆ. 

ಮೀನುಗಾರಿಕೆ ಋತು ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಮಂಗಳೂರಿನ ಧಕ್ಕೆಯಲ್ಲಿ ಚಟುವಟಿಕೆಗಳು ಗರಿಗೆದರಿವೆ. ಎರಡು ತಿಂಗಳಿನಿಂದ ಬಿಕೋ ಎನ್ನುತ್ತಿದ್ದ ಧಕ್ಕೆಗೆ ಹೊಸ ರೂಪ ದೊರೆಯುತ್ತಿದೆ. ರಜೆಯ ಮೂಡ್‌ನ‌ಲ್ಲಿದ್ದ ಹೊರ ರಾಜ್ಯ, ಜಿಲ್ಲೆ ಹಾಗೂ ಸ್ಥಳೀಯ ಮೀನುಗಾರರು ಧಕ್ಕೆಯತ್ತ ಮುಖ ಮಾಡಿದ್ದಾರೆ. ರಜೆಯ ಸಂದರ್ಭ ದುರಸ್ತಿ ಸಹಿತ ಇತರ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸಿ ಬೋಟುಗಳು ಈಗ ಧಕ್ಕೆಯಲ್ಲಿ ಲಂಗರು ಹಾಕಿ, ಮೀನುಗಾರಿಕೆಗೆ ತೆರಳಲು ಸನ್ನದ್ಧವಾಗಿ ನಿಂತಿವೆ. ಧಕ್ಕೆಯಲ್ಲಿ ಸುಮಾರು 1,420 ಮೋಟಾರ್‌ ಅಳವಡಿಸಿದ ನಾಡದೋಣಿ ಹಾಗೂ 1,234ರಷ್ಟು ಯಾಂತ್ರೀಕೃತ ದೋಣಿಗಳಿವೆ. ಮಲ್ಪೆಯಲ್ಲಿ 700 ನಾಡದೋಣಿಗಳು, 2,200 ಮೋಟಾರ್‌ ಅಳವಡಿಸಿದ ದೊಡ್ಡ ದೋಣಿಗಳಿವೆ. 

2017ರ ಎಪ್ರಿಲ್‌ನಿಂದ 2018ರ ಮಾರ್ಚ್‌ ವರೆಗೆ ಉಭಯ ಜಿಲ್ಲೆಗಳಲ್ಲಿ ಒಟ್ಟು 3,236.99 ಕೋ.ರೂ. ಮೌಲ್ಯದ 2,92,061 ಟನ್‌ ಮೀನು ಹಿಡಿಯಲಾಗಿತ್ತು. ಈ ಪೈಕಿ ದ.ಕ. ಜಿಲ್ಲೆಯಲ್ಲಿ 1,656.99 ಕೋ.ರೂ. ಮೌಲ್ಯದ 1,63,925 ಟನ್‌ ಮೀನು ಲಭ್ಯವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ (1,582.90 ಕೋ.ರೂ. ಮೌಲ್ಯದ 1,52,573 ಟನ್‌) 11,352 ಟನ್‌ ಅಧಿಕ ಮೀನು ಲಭ್ಯ ವಾಗಿತ್ತು. ಉಡುಪಿ ಜಿಲ್ಲೆಯಲ್ಲಿ ಮಾರ್ಚ್‌ವರೆಗೆ, 1,580.00 ಕೋ.ರೂ. ಮೌಲ್ಯದ 1,28,136 ಟನ್‌ ಮೀನು ಲಭ್ಯವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ (1,456.64 ಕೋ.ರೂ. ಮೌಲ್ಯದ 1,44,525 ಟನ್‌) 16,389 ಟನ್‌ ಕಡಿಮೆ ಮೀನು ಲಭ್ಯವಾಗಿತ್ತು. 2015-16ರಲ್ಲಿ ದ.ಕ. ಜಿಲ್ಲೆಯಲ್ಲಿ 1,370.53 ಕೋ.ರೂ. ಮೌಲ್ಯದ 1,51,458 ಟನ್‌ ಹಾಗೂ ಉಡುಪಿ ಜಿಲ್ಲೆಯಲ್ಲಿ 1,463.66 ಕೋ.ರೂ. ಮೌಲ್ಯದ 1,51,099 ಟನ್‌ ಮೀನು ಹಿಡಿಯಲಾಗಿದೆ. 

5 ರಾಜ್ಯಗಳಲ್ಲಿ  ಒಂದೇ ಅವಧಿಯ ರಜೆ
ಪಶ್ಚಿಮ ಕರಾವಳಿಯಲ್ಲಿ 2015 ಕ್ಕಿಂತ ಹಿಂದೆ 57 ದಿನ (ಜೂ. 15 ರಿಂದ ಆ. 10) ಮೀನು ಗಾರಿಕೆ ನಿಷೇಧ ವಿತ್ತು. ಆದರೆ ಮತ್ಸ   ಕ್ಷಾಮ ನೀಗಿ ಸುವ ಉದ್ದೇಶ ದಿಂದ 2015ರಲ್ಲಿ ಕೇಂದ್ರ ಸರಕಾರ ಪಶ್ಚಿಮ ಕರಾವಳಿಗೆ ಏಕ ರೂಪ ದಲ್ಲಿ 61 ದಿನ ನಿಷೇಧ ವಿಧಿಸಿ ಆದೇಶ ಹೊರಡಿ ಸಿದೆ. ಅದರಂತೆ ಗುಜರಾತ್‌, ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಒಂದೇ ಅವಧಿಯ ಮೀನುಗಾರಿಕೆ ನಿಷೇಧವಿದೆ. 

ಮೀನುಗಾರರಿಗೆ “ಕಾಡ್‌ ಎಂಡ್‌ ಬಲೆ’ ಉಚಿತ
ಸಮುದ್ರದಲ್ಲಿ ಮೀನು ಹಿಡಿಯಲು ಬಳಸುವ ಬಲೆಯ ಕಣ್ಣು ಗಾತ್ರ ಕನಿಷ್ಠ 35 ಎಂ.ಎಂ. ಕಡ್ಡಾಯಗೊಳಿಸಿ ಮೀನುಗಾರಿಕಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇತ್ತೀಚಿನ ವರ್ಷಗಳಲ್ಲಿ ಮೀನು ಸಿಗುವುದು ಕಡಿಮೆಯಾದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದೆ. ಸಣ್ಣ ಕಣ್ಣಿನ ಬಲೆಯನ್ನು ಬಳಸಲು ಇನ್ನು ಅವಕಾಶವಿಲ್ಲ. ಈ ಬಗ್ಗೆ ಪ್ರಾರಂಭಿಕ ಹಂತದಲ್ಲಿ ಮೀನುಗಾರರಿಗೆ ಮಾಹಿತಿ ನೀಡುವ ಜತೆಗೆ ಪ್ರೋತ್ಸಾಹ ನೀಡುವ ಇರಾದೆಯಿಂದ “ಕಾಡ್‌ ಎಂಡ್‌ ಬಲೆ’ಯನ್ನು ಉಚಿತವಾಗಿ ನೀಡಲು ಸರಕಾರ ಕ್ರಮ ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಸುಮಾರು 800 ಕಾಡ್‌ ಎಂಡ್‌ ಬಲೆ ನೀಡಲು ಗುರಿ ಇರಿಸಲಾಗಿದ್ದು, ತಲಾ ಒಂದು ಬಲೆಗೆ 10,000 ರೂ. ವೆಚ್ಚವಾಗಲಿದೆ ಎನ್ನುತ್ತಾರೆ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಮಹೇಶ್‌. ಮಲ್ಪೆ ಬಂದರಿಗೆ ಸುಮಾರು 1,300 ಬಲೆ ನೀಡುವ ಗುರಿ ಇರಿಸಿಕೊಳ್ಳಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.