ಕಾಪು: ವೈದ್ಯ,ಸಾಮಾಜಿಕ, ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಸಾಧಕ ಡಾ| ಕೆ. ಪ್ರಭಾಕರ ಶೆಟ್ಟಿ ನಿಧನ

Team Udayavani, Jan 15, 2022, 6:48 PM IST

ಕಾಪು: ವೈದ್ಯ,ಸಾಮಾಜಿಕ, ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಸಾಧಕ ಡಾ| ಕೆ. ಪ್ರಭಾಕರ ಶೆಟ್ಟಿ ನಿಧನ

ಕಾಪುವಿನ ಹಿರಿಯ ವೈದ್ಯ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಡಾ| ಕೆ. ಪ್ರಭಾಕರ ಶೆಟ್ಟಿ

ಕಾಪು: ಕಾಪುವಿನ ಹಿರಿಯ ವೈದ್ಯ ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ಗೌರವಾಧ್ಯಕ್ಷ, ಪ್ರಶಾಂತ್ ಹಾಸ್ಪಿಟಲ್‌ನ ಸಂಸ್ಥಾಪಕ, ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣೀಯ ಕ್ಷೇತ್ರದ ಸಾಧಕ ಡಾ| ಕೆ. ಪ್ರಭಾಕರ ಶೆಟ್ಟಿ (81) ಅವರು ಜ. 15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ ಶ್ರೀ ಕಾಪು ಗೋವಿಂದ ಶೆಟ್ಟಿ ಮೆಮೋರಿಯಲ್ ಟ್ರಸ್ಟ್‌ನ ಅಧ್ಯಕ್ಷೆ ಶೋಭಾ ಪಿ. ಶೆಟ್ಟಿ ಮತ್ತು ಪುತ್ರ ಗೃಹರಕ್ಷಕದಳದ ಉಡುಪಿ ಜಿಲ್ಲಾ ಕಮಾಂಡೆಂಟ್ / ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ಸಂಚಾಲಕ ಡಾ| ಕೆ. ಪ್ರಶಾಂತ್ ಶೆಟ್ಟಿ ಅವರನ್ನು ಅಗಲಿದ್ದಾರೆ.

ಧಾರ್ಮಿಕ ಸೇವೆ : ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಮತ್ತು ಶ್ರೀ ಮೂರನೇ ಮಾರಿಯಮ್ಮ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾಗಿದ್ದ ಅವರು ಕೊಪ್ಪಲಂಗಡಿ ಶ್ರೀ ವಾಸುದೇವ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾಗಿ ದೇವಸ್ಥಾನದ ಅಭಿವೃದ್ಧಿಗಾಗಿ ಮುಂಚೂಣಿಯಲ್ಲಿ ನಿಂತು ಸೇವೆ ಸಲ್ಲಿಸಿದ್ದರು. ಕಾಪು ಶಾಂತಿ ಪಾಲನಾ ಸಮಿತಿಯ ಅಧ್ಯಕ್ಷರಾಗಿದ್ದ ಅವರು ಹಲವು ವರ್ಷಗಳ ಹಿಂದೆ ಸಂಭವಿಸಿದ್ದ ಕೋಮು ಘರ್ಷಣೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದರು.

ಶೈಕ್ಷಣಿಕ ಕ್ಷೇತ್ರ : ಉಳಿಯಾರಗೋಳಿ ದಂಡತೀರ್ಥ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕತ್ವವನ್ನು ವಹಿಸಿಕೊಂಡ ಅವರು ಬಳಿಕ ಗ್ರಾಮೀಣ ವಿದ್ಯಾರ್ಥಿಗಳ ಅವಶ್ಯಕತೆಗನುಣವಾಗಿ ದಂಡತೀರ್ಥ ಆಂಗ್ಲ ಮಾಧ್ಯಮ ಶಾಲೆ ಮತ್ತು ದಂಡತೀರ್ಥ ಪದವಿ ಪೂರ್ವ ಕಾಲೇಜುಗಳನ್ನು ಸ್ಥಾಪಿಸಿ ವಿದ್ಯಾ ಸಂಸ್ಥೆಗಳ ಸಂಚಾಲಕರಾಗಿ, ಪ್ರಸ್ತುತ ಗೌರವಾಧ್ಯಕ್ಷರಾಗಿ ವಿದ್ಯಾರ್ಥಿಗಳ ಏಳಿಗೆಗಾಗಿ ಶಕ್ತಿಮೀರಿದ ಶ್ರಮ ವಹಿಸಿದ್ದರು. ಸಂಸ್ಥೆಯಲ್ಲಿ ಕಲಿಯುತ್ತಿರುವ ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ದಾನಿಗಳ ಸಹಕಾರದೊಂದಿಗೆ ೮ ಲಕ್ಷ ರೂ. ಗಳಷ್ಟು ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬಂದಿರುವ ಅವರು, ಪ್ರಶಾಂತ್ ಪ್ಯಾರಾ ಮೆಡಿಕಲ್ ಕಾಲೇಜಿನ ಸ್ಥಾಪನೆಗೂ ಕಾರಣೀಕರ್ತರಾಗಿದ್ದರು. ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಮಂಡಳಿಯ ಸದಸ್ಯರಾಗಿ, ಕಾಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಸಾಮಾಜಿಕ ಮುಖಂಡ : ಉಡುಪಿ ಜಿಲ್ಲಾ ಖಾಸಗಿ ಆಸ್ಪತ್ರೆಗಳ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಅವರು ಐಎಂಎ ಕರಾವಳಿ ಇದರ ಅಧ್ಯಕ್ಷರಾಗಿ, ಉಡುಪಿ ಕರಾವಳಿ ಐಎಂಎ ಭವನ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ, ಹಿಂದ್ ಕುಷ್ಠ ನಿವಾರಣಾ ಸಂಘ ಕಾಪು ಘಟಕದ ಗೌರವ ವೈದ್ಯಾಧಿಕಾರಿಯಾಗಿ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಸಲಹಾ ಸಮಿತಿಯ ಸದಸ್ಯರಾಗಿ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ವೀಕ್ಷಕ ವಿಭಾಗದ ಸದಸ್ಯರಾಗಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಗೌರವಾಧ್ಯಕ್ಷರಾಗಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಅಜೀವ ಸದಸ್ಯರಾಗಿ, ಕಾಪು ಲಯನ್ಸ್ ಕ್ಲಬ್‌ನ ಸ್ಥಾಪಕರಾಗಿ, ಅಧ್ಯಕ್ಷರಾಗಿ, ಜಿಲ್ಲಾ ಕ್ಯಾಬಿನೆಟ್ ಸದಸ್ಯರಾಗಿ, ಭಾರತೀಯ ಜೀವ ವಿಮಾ ನಗಮದ ವೈದ್ಯಕೀಯ ಪರಿವೀಕ್ಷಕರಾಗಿಯೂ ಸೇವೆ ಸಲ್ಲಿಸಿದ್ದರು.

ಸಮ್ಮಾನ -ಪುರಸ್ಕಾರಗಳು : ಕಾಪುವಿನ ಪ್ರಥಮ ಚಿನ್ನದ ಪದಕ ಪುರಸ್ಕೃತ ವೈದ್ಯರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅವರು 55 ವರ್ಷಗಳ ಸುದೀರ್ಘ ಅವಧಿಯ ಗ್ರಾಮೀಣ ಸೇವೆಗಾಗಿ ಹಲವು ಗೌರವ – ಸಮ್ಮಾನಗಳಿಗೆ ಪಾತ್ರರಾಗಿದ್ದಾರೆ. ಮಂಗಳೂರು ಬಂಟರ ಮಾತೃ ಸಂಘದಿಂದ ಚಿನ್ನದ ಪದಕ, ಲಯನ್ಸ್ ಸೇವಾ ಪುರಸ್ಕಾರ, ಗ್ರಾಮೀಣ ಸೇವೆಗಾಗಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಸಿಂಡಿಕೇಟ್ ಬ್ಯಾಂಕ್, ರೋಟರಿ ಕ್ಲಬ್ ಸಹಭಾಗಿತ್ವದ ಹೊಸ ವರ್ಷದ ಸಾಧನಾ ಪ್ರಶಸ್ತಿ, ಕರ್ನಾಟಕ ಸ್ಟೇಟ್ ಮೆಡಿಕಲ್ ಅಸೋಸಿಯೇಶನ್, ಐ.ಎಮ್.ಎ. ಉಡುಪಿ ಕರಾವಳಿಯಿಂದ ಸಮ್ಮಾನ, ಕಾಪು ತುಳುಕೂಟ, ಉಡುಪಿ ಜಯಂಟ್ಸ್ ಸಂಸ್ಥೆಗಳಿಂದ ಸಮ್ಮಾನ, ಶೀರೂರು ಮಠದಿಂದ ಶ್ರೀ ಕೃಷ್ಣ ವಿಠಲ ಪರಮಾನುಗ್ರಹ ಪ್ರಶಸ್ತಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ ಮೊದಲಾದ ಗೌರವ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಸಂತಾಪ : ಡಾ| ಕೆ. ಪ್ರಭಾಕರ ಶೆಟ್ಟಿ ಅವರ ನಿಧನಕ್ಕೆ ಉಡುಪಿ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ, ಕರಾವಳಿ‌ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಪಿ. ಶೆಟ್ಟಿ ಗುರ್ಮೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಕೆಪಿಸಿಸಿ ಸಂಯೋಜಕ ನವೀನ್‌ಚಂದ್ರ ಜೆ. ಶೆಟ್ಟಿ, ಮುಂಬೈಯ ಹಿರಿಯ ಪೊಲೀಸ್ ಅಧಿಕಾರಿ ದಯಾ ನಾಯಕ್, ಕಾಪು ಬಂಟರ ಸಂಘದ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾಪು ಬಿಲ್ಲವರ ಸಂಘದ ಅಧ್ಯಕ್ಷ ವಿಕ್ರಂ ಕಾಪು ಮೊದಲಾದ ಗಣ್ಯರು ಹಾಗೂ ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ಆಡಳಿತಾಽಕಾರಿ ಆಲ್ಬನ್ ರೋಡ್ರಗಸ್, ಪ್ರಾಂಶುಪಾಲೆ ವರ್ಷಾ ಪ್ರಭು ಮತ್ತು ಸಿಬಂದಿ ವರ್ಗದವರು ಸಂತಾಪ ಸೂಚಿಸಿದ್ದಾರೆ.

ಸೋಮವಾರ ಅಂತ್ಯ ಸಂಸ್ಕಾರ ‌: ಡಾ. ಕೆ. ಪ್ರಭಾಕರ ಶೆಟ್ಟಿ ಅವರ ಅ‌ಂತ್ಯ ಸಂಸ್ಕಾರ ಪ್ರಕ್ರಿಯೆಯು ಜ. 17ರಂದು ಸೋಮವಾರ ಬೆಳಗ್ಗೆ ಕಾಪುವಿನ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ದುರ್ಗದ ಕೋಟೆ ಗೋಡೆ ಏರಿದ ಮಂಗಳೂರು ಪೊಲೀಸ್‌ ಕಮಿಷನರ್‌! ವಿಡಿಯೋ ವೈರಲ್‌

ಚಿತ್ರದುರ್ಗದ ಕೋಟೆ ಗೋಡೆ ಏರಿದ ಮಂಗಳೂರು ಪೊಲೀಸ್‌ ಕಮಿಷನರ್‌! ವಿಡಿಯೋ ವೈರಲ್‌

ರಾಜಸ್ಥಾನದಲ್ಲಿ ನಡೆದ ಪೈಶಾಚಿಕ ಘಟನೆಗೆ ಆರ್‌. ಅಶೋಕ್‌ ತೀವ್ರ ಆಕ್ರೋಶ

ರಾಜಸ್ಥಾನದಲ್ಲಿ ನಡೆದ ಪೈಶಾಚಿಕ ಘಟನೆಗೆ ಆರ್‌. ಅಶೋಕ್‌ ತೀವ್ರ ಆಕ್ರೋಶ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಆಕ್ಸಿಜನ್‌ ಜನರೇಟರ್‌ ಸ್ಥಾಪನೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಆಕ್ಸಿಜನ್‌ ಜನರೇಟರ್‌ ಸ್ಥಾಪನೆ

ನಾಯಕತ್ವ ವಿರುದ್ಧ ಅಸಮಾಧಾನ: ಎಂ.ಆರ್‌.ಸೀತಾರಾಂಗೆ ನೋಟಿಸ್‌ ?

ನಾಯಕತ್ವ ವಿರುದ್ಧ ಅಸಮಾಧಾನ: ಎಂ.ಆರ್‌.ಸೀತಾರಾಂಗೆ ನೋಟಿಸ್‌ ?

ಹುಣಸೂರು : ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಶಾಲಾ ಶಿಕ್ಷಕ ಸಾವು

ಹುಣಸೂರು : ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಶಾಲಾ ಶಿಕ್ಷಕ ಸಾವು

ತೀಸ್ತಾ ಸೆಟಲ್ವಾಡ್‌ ಪದ್ಮಶ್ರೀ ಹಿಂಪಡೆಯಬೇಕು: ನರೋತ್ತಮ್‌ ಮಿಶ್ರಾ

ತೀಸ್ತಾ ಸೆಟಲ್ವಾಡ್‌ ಪದ್ಮಶ್ರೀ ಹಿಂಪಡೆಯಬೇಕು: ನರೋತ್ತಮ್‌ ಮಿಶ್ರಾ

ಉಡುಪಿ : ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ : ಆರೋಪಿಗೆ 10 ವರ್ಷ ಜೈಲು

ಉಡುಪಿ : ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ : ಆರೋಪಿಗೆ 10 ವರ್ಷ ಜೈಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ : ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ : ಆರೋಪಿಗೆ 10 ವರ್ಷ ಜೈಲು

ಉಡುಪಿ : ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ : ಆರೋಪಿಗೆ 10 ವರ್ಷ ಜೈಲು

ಪಡುಬಿದ್ರಿಯಲ್ಲಿ ಕೊನೆಗೂ ಹೆದ್ದಾರಿ ‘ದೀಪ ಮೋಕ್ಷ’

ಪಡುಬಿದ್ರಿಯಲ್ಲಿ ಕೊನೆಗೂ ಹೆದ್ದಾರಿ ‘ದೀಪ ಮೋಕ್ಷ’

ಉಡುಪಿ: ಪೋಷಕರಲ್ಲಿ ಅಪಹರಣದ ನಾಟಕವಾಡಿ 5 ಲಕ್ಷಕ್ಕೆ ಬೇಡಿಕೆ ಇಟ್ಟ ಮಗ: ಕೊನೆಗೆ ಆಗಿದ್ದೇ ಬೇರೆ

ಉಡುಪಿ: ಪೋಷಕರಲ್ಲಿ ಅಪಹರಣದ ನಾಟಕವಾಡಿ 5 ಲಕ್ಷಕ್ಕೆ ಬೇಡಿಕೆ ಇಟ್ಟ ಮಗ: ಕೊನೆಗೆ ಆಗಿದ್ದೇ ಬೇರೆ

ಕಾಪು ಶಾಸಕ ಲಾಲಾಜಿ‌ ಆರ್. ಮೆಂಡನ್ ಅವರಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ

ಕಾಪು ಶಾಸಕ ಲಾಲಾಜಿ‌ ಆರ್. ಮೆಂಡನ್ ಅವರಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ

4

ಗುಜರಿ ಕೊಂಪೆಯಾದ ಗಾಂಧಿ ಪಾರ್ಕ್‌

MUST WATCH

udayavani youtube

ತಂದೆ ಮೇಣದ ಪ್ರತಿಮೆ ಮುಂದೆ ಹಸೆಮಣೆಯೇರಿದ ಮಗಳು

udayavani youtube

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ : ಸುಟ್ಟು ಕರಕಲಾಯ್ತು ಮನೆ

udayavani youtube

ಭಾಗಮಂಡಲ ಸೇರಿದಂತೆ ವಿವಿಧ ಕಡೆ ಭೂಮಿ ಕಂಪಿಸಿದ ಅನುಭವ

udayavani youtube

ಹುಣಸೂರಿನಲ್ಲಿ ಭೀಕರ ರಸ್ತೆ ಅಪಘಾತ : ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ

udayavani youtube

ಮಣ್ಣೆತ್ತಿನ ಅಮಾವಾಸ್ಯೆ : ಬಸವ ಮೂರ್ತಿಗಳ ಆರಾಧನೆ; ಕೃಷಿಕರ ಮುಂಗಾರಿನ ಮೊದಲ ಹಬ್ಬ

ಹೊಸ ಸೇರ್ಪಡೆ

ದುರ್ಗದ ಕೋಟೆ ಗೋಡೆ ಏರಿದ ಮಂಗಳೂರು ಪೊಲೀಸ್‌ ಕಮಿಷನರ್‌! ವಿಡಿಯೋ ವೈರಲ್‌

ಚಿತ್ರದುರ್ಗದ ಕೋಟೆ ಗೋಡೆ ಏರಿದ ಮಂಗಳೂರು ಪೊಲೀಸ್‌ ಕಮಿಷನರ್‌! ವಿಡಿಯೋ ವೈರಲ್‌

ರಾಜಸ್ಥಾನದಲ್ಲಿ ನಡೆದ ಪೈಶಾಚಿಕ ಘಟನೆಗೆ ಆರ್‌. ಅಶೋಕ್‌ ತೀವ್ರ ಆಕ್ರೋಶ

ರಾಜಸ್ಥಾನದಲ್ಲಿ ನಡೆದ ಪೈಶಾಚಿಕ ಘಟನೆಗೆ ಆರ್‌. ಅಶೋಕ್‌ ತೀವ್ರ ಆಕ್ರೋಶ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಆಕ್ಸಿಜನ್‌ ಜನರೇಟರ್‌ ಸ್ಥಾಪನೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಆಕ್ಸಿಜನ್‌ ಜನರೇಟರ್‌ ಸ್ಥಾಪನೆ

ನಾಯಕತ್ವ ವಿರುದ್ಧ ಅಸಮಾಧಾನ: ಎಂ.ಆರ್‌.ಸೀತಾರಾಂಗೆ ನೋಟಿಸ್‌ ?

ನಾಯಕತ್ವ ವಿರುದ್ಧ ಅಸಮಾಧಾನ: ಎಂ.ಆರ್‌.ಸೀತಾರಾಂಗೆ ನೋಟಿಸ್‌ ?

ಹುಣಸೂರು : ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಶಾಲಾ ಶಿಕ್ಷಕ ಸಾವು

ಹುಣಸೂರು : ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಶಾಲಾ ಶಿಕ್ಷಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.