ಉದ್ಘಾಟನೆಗೊಂಡ ಏಳು ತಿಂಗಳ ಬಳಿಕ ಕಾಪು ಪುರಸೌಧ ಕಾರ್ಯಾರಂಭಕ್ಕೆ ಸಿದ್ಧ

Team Udayavani, Jul 7, 2018, 6:00 AM IST

0607kpe9.jpg

ಕಾಪು: ರಾಜ್ಯದ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಂಡರೂ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಕಾರ್ಯಾರಂಭ ವ್ಯವಸ್ಥೆಯಿಂದ ದೂರವುಳಿದಿದ್ದ ಕಾಪು ಪುರಸಭೆಯ ಆಡಳಿತ ಕಚೇರಿ ಪುರಸೌಧ ಕಟ್ಟಡಕ್ಕೆ ಏಳು ತಿಂಗಳ ಬಳಿಕ ಆಡಳಿತಾತ್ಮಕವಾದ ಕಾರ್ಯಾರಂಭ ಭಾಗ್ಯ ಲಭಿಸಿದೆ.

ಸುಮಾರು 5.78 ಕೋ. ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ಕಾಪು ಪುರಸಭೆಯ ನೂತನ ಪುರಸೌಧ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಳೆದ ಜನವರಿ 8ರಂದು ಉದ್ಘಾಟಿಸಿದ್ದರು. ಅಂದು ತರಾತುರಿ ಯಲ್ಲಿ ನೂತನ ಪುರಸೌಧ ಕಟ್ಟಡ ಉದ್ಘಾಟನೆಗೊಂಡಿದ್ದರೂ ವಿವಿಧ ಕೆಲಸಗಳು ಬಾಕಿಯುಳಿದಿದ್ದ ಹಿನ್ನೆಲೆಯಲ್ಲಿ ಪುರಸಭೆ ಆಡಳಿತ ವ್ಯವಸ್ಥೆಯ ಸ್ಥಳಾಂತರ ಸಹಿತ ಕಾರ್ಯಾರಂಭ ಪ್ರಕ್ರಿಯೆಯು ವಿಳಂಬವಾಗಿತ್ತು.

ವಿಳಂಬಕ್ಕೆ ಹಲವು ಕಾರಣಗಳು
ಸ್ವಚ್ಛ ಕಾಪು – ಸುಂದರ ಕಾಪು ಎಂಬ ಕಲ್ಪನೆಯೊಂದಿಗೆ 2015ರ ಮೇ 22ರಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದ್ದ ಕಾಪು ಪುರಸಭೆ ಅಲ್ಪ ಅವಧಿಯಲ್ಲೇ ಬಹಳಷ್ಟು ಪ್ರಸಿದ್ಧಿಗೆ ಬಂದಿತ್ತು. ನೂತನ‌ ಪುರಸಭೆಗಳ ಪೈಕಿ ನಂ.1 ಪುರಸಭೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದ್ದು, ಕಡಿಮೆ ಅವಧಿಯಲ್ಲೇ ದೊಡ್ಡ ಮೊತ್ತದ ಅನುದಾನ ಸಹಿತವಾಗಿ ನೂತನ ಕಟ್ಟಡ ಮಂಜೂರಾಗಿತ್ತು. ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಂಡರೂ, ಆ ಬಳಿಕ ಎದುರಾದ ಚುನಾವಣಾ ಪ್ರಕ್ರಿಯೆಗಳು, ಮುಖ್ಯಾಧಿಕಾರಿಯ ವರ್ಗಾವಣೆ ಇತ್ಯಾದಿ ಕಾರಣಗಳಿಂದಾಗಿ ಕಾಮಗಾರಿ ಮುಂದುವರಿಸಲು ಮತ್ತು ಆಡಳಿತಾತ್ಮಕವಾದ ಸ್ಥಳಾಂತರ ಪ್ರಕ್ರಿಯೆಗೆ ತಾಂತ್ರಿಕ ಅಡಚಣೆ ಎದುರಾಗಿತ್ತು.

ಇದೀಗ ಪುರಸಭೆಯ ಆಡಳಿತ ಮತ್ತು ವಿಪಕ್ಷದ ಸತತ  ಆಗ್ರಹ, ಮುಖ್ಯಾಧಿಕಾರಿ ರಾಯಪ್ಪ ನೇತೃತ್ವದಲ್ಲಿ ಎಂಜಿನಿಯರ್‌ಗಳು ನಡೆಸಿರುವ ಸತತ ಪ್ರಯತ್ನ ಹಾಗೂ ಗುತ್ತಿಗೆದಾರ ಕೆ. ವಾಸುದೇವ ಶೆಟ್ಟಿ ಅವರ ನಿರಂತರ ಶ್ರಮದ ಫಲವಾಗಿ ಪುರಸೌಧ ಕಟ್ಟಡವು ಪೂರ್ಣ ಸ್ಥಿತಿಯಲ್ಲಿ ಜೋಡಣೆಯಾಗಿದ್ದು ಅಧಿಕೃತವಾಗಿ ಕಾರ್ಯಾರಂಭಕ್ಕೆ ಸನ್ನದ್ಧವಾಗಿದೆ.

ಇಲ್ಲೂ ಇದೆ ಸಿಬಂದಿಗಳ ಕೊರತೆ
2015ರಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಪು ಪುರಸಭೆಗೆ ಒಟ್ಟು 92 ಹುದ್ದೆಗಳು ಮಂಜೂರಾಗಿದ್ದು, ಇದರಲ್ಲಿ ಪೌರ ಕಾರ್ಮಿಕರು ಮತ್ತು ಹೊರ ಗುತ್ತಿಗೆ ಆಧಾರದ ಸಿಬಂದಿಗಳೂ ಸೇರಿದಂತೆ 60 ಮಂದಿ ಕಾರ್ಯನಿರ್ವಹಣೆಯಲ್ಲಿ ತೊಡಗಿದ್ದಾರೆ. ಉಳಿದಂತೆ 30ಕ್ಕೂ ಅಧಿಕ ಹುದ್ದೆಗಳು ಇನ್ನೂ ಖಾಲಿಯಾಗಿಯೇ ಉಳಿದಿವೆೆ. ಪರಿಸರ ಅಭ್ಯಂತರರು – 1, ಹಿರಿಯ ಆರೋಗ್ಯ ನಿರೀಕ್ಷಕ – 2, ಕಂದಾಯ ನಿರೀಕ್ಷಕ-1, ಪ್ರಥಮ ದರ್ಜೆ ಸಹಾಯಕ – 1, ಪೌರ ಕಾರ್ಮಿಕರು – 7 ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳ ಭರ್ತಿಗೆ ಸರಕಾರ ವಿಶೇಷ ಕ್ರಮ ತೆಗೆದುಕೊಳ್ಳಬೇಕಿದೆ.

ಜು. 9ರಿಂದ ನೂತನ ಪುರಸೌಧದಲ್ಲಿ ಆಡಳಿತ ನಿರ್ವಹಣೆ 
ಜು. 7ರಂದು ನೂತನ ಪುರಸೌಧ ಕಟ್ಟಡದಲ್ಲಿ ಧಾರ್ಮಿಕ ಪೂಜೆ ನಡೆಯಲಿದೆ. ಪೂಜೆಯ ಬಳಿಕ ದಾಖಲಾತಿ, ಕಚೇರಿಗಳ ಸ್ಥಳಾಂತರ ಪ್ರಕ್ರಿಯೆಗಳು ನಡೆದು ಜು. 9ರಿಂದ ಅಧಿಕೃತವಾಗಿ ಪುರಸಭೆಯ ಕಾರ್ಯ ಚಟುವಟಿಕೆಗಳು ಪುರಸೌಧ ಕಟ್ಟಡದಲ್ಲಿ ಪ್ರಾರಂಭಗೊಳ್ಳಲಿವೆ. ಸಂಪೂರ್ಣ ಇ ಆಡಳಿತ ವ್ಯವಸ್ಥೆಯೊಂದಿಗೆ ನೂತನ ಪುರಸೌಧದಲ್ಲಿ ಆಡಳಿತ ನಿರ್ವಹಣೆ ನಡೆಯಲಿದ್ದು, ಸಾರ್ವಜನಿಕರು ಪುರಸಭೆಯ ಎಲ್ಲಾ ಕಚೇರಿ ಕೆಲಸ ಕಾರ್ಯಗಳಿಗೆ ನೂತನ ಕಟ್ಟಡಕ್ಕೆ ಆಗಮಿಸಬೇಕು.
 – ರಾಯಪ್ಪ , ಮುಖ್ಯಾಧಿಕಾರಿ, ಪುರಸಭೆ

ಪುರಸಭೆ ರಚನೆಯಲ್ಲಿ ಸೊರಕೆ ಪಾತ್ರ ಮಹತ್ವದ್ದು 
ಕಾಪು ಸರ್ವಾಂಗೀಣ ಅಭಿವೃದ್ಧಿ ಹೊಂದಿದ ಕ್ಷೇತ್ರವಾಗಬೇಕೆಂಬ ಸಂಕಲ್ಪದೊಂದಿಗೆ ಅಂದಿನ ನಗರಾಭಿವೃದ್ಧಿ ಸಚಿವರೂ ಮತ್ತು ಕಾಪು ಕ್ಷೇತ್ರದ ಶಾಸಕರೂ ಆಗಿದ್ದ ವಿನಯಕುಮಾರ್‌ ಸೊರಕೆ ಅವರು ವಿಶೇಷ ಮುತುವರ್ಜಿ ವಹಿಸಿ ಕಾಪುವನ್ನು ಪುರಸಭೆಯನ್ನಾಗಿ ರಚಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅತೀ ಕಡಿಮೆ ಅವಧಿಯಲ್ಲಿ ಕರ್ನಾಟಕ ಸರಕಾರದಿಂದ ಅನುಮೋದನೆ ಪಡೆದು ಸುಂದರ ಪುರಸೌಧ ಕಟ್ಟಡ ನಿರ್ಮಾಣಕ್ಕೆ ಅನುದಾನ ಜೋಡಿಸಿದ್ದು, ಇದ‌ಕ್ಕೆ ಕಾರಣರಾದ ಮಾಜಿ ನಗರಾಭಿವೃದ್ಧಿ ಸಚಿವ ವಿನಯಕುಮಾರ್‌ ಸೊರಕೆ ಅವರಿಗೆ ನಾವು ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ.
– ಮಾಲಿನಿ ಅಧ್ಯಕ್ಷರು, ಕಾಪು ಪುರಸಭೆ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.