ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

Team Udayavani, May 24, 2022, 1:30 AM IST

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಬೆಂಗಳೂರು: ದಕ್ಷಿಣ ಭಾರತದ ಚಿರಾಪುಂಜಿ ಹಣೆಪಟ್ಟಿ ಈಗ ಆಗುಂಬೆಯಿಂದ ಕರಾವಳಿಗೆ ಶಿಫ್ಟ್ ಆಗಿದೆಯೇ? ಭವಿಷ್ಯದಲ್ಲಿ ಪಶ್ಚಿಮಘಟ್ಟಗಳಲ್ಲಿ ಇನ್ನೂ ವ್ಯಾಪಕ ಮಳೆ ಸುರಿಯಲಿದೆಯೇ?

“ಹೌದು’ ಎನ್ನುತ್ತವೆ ಕಳೆದ ಐದು ವರ್ಷಗಳಿಂದ ಸುರಿಯುತ್ತಿರುವ ಮಳೆಯ ಅಂಕಿ-ಅಂಶಗಳು ಹಾಗೂ ವಿಜ್ಞಾನಿಗಳ ಸಂಶೋಧನೆಗಳು.

ಈ ಹಿಂದೆ ಆಗುಂಬೆಯಲ್ಲಿ ಗರಿಷ್ಠ ಮಳೆಯಾಗುತ್ತಿತ್ತು. ಇದೇ ಕಾರಣಕ್ಕೆ ದಕ್ಷಿಣ ಭಾರತದ ಚಿರಾಪುಂಜಿ ಎಂಬ ಹೆಗ್ಗಳಿಕೆಗೂ ಅದು ಪಾತ್ರವಾಗಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಆ ಪಟ್ಟ ಕಳಚುತ್ತಿದ್ದು, ಕರಾವಳಿಯ ಉಡುಪಿ ಗರಿಷ್ಠ ಮಳೆಗೆ ಸಾಕ್ಷಿಯಾಗುತ್ತಿದೆ. ಮುಂಬರುವ ವರ್ಷಗಳಲ್ಲಿ ಕೂಡ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ದತ್ತಾಂಶದ ಪ್ರಕಾರ 2015ರಿಂದ 2021ರ ಅವಧಿಯಲ್ಲಿ ಐದು ವರ್ಷ ಉಡುಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಳೆ ದಾಖಲಾಗಿದೆ. ಇದಕ್ಕೆ ಪೂರಕವಾಗಿ ಹೇಳುವುದಾದರೆ, ಉಡುಪಿ ತಾಲೂಕಿನ ಬೈರಂಪಳ್ಳಿಯಲ್ಲಿ 2016ರಲ್ಲಿ 59.16 ಸೆಂ.ಮೀ. ಮಳೆಯಾಗಿತ್ತು. ಆ ವರ್ಷ ರಾಜ್ಯದಲ್ಲೇ ದಾಖಲಾದ ಅತಿಹೆಚ್ಚು ಮಳೆ ಅದು ಎನ್ನಲಾಗಿದೆ. ಅದೇ ರೀತಿ, 2017ರಲ್ಲಿ ಕಾರ್ಕಳ ತಾಲ್ಲೂಕಿನ ಶಿರ್ಲಾಲುವಿನಲ್ಲಿ ಅತಿ ಹೆಚ್ಚು ಅಂದರೆ 69.39 ಸೆಂ.ಮೀ. ಮಳೆ ದಾಖಲಾಗಿತ್ತು. 2019ರಲ್ಲಿ ಹೆಬ್ರಿಯಲ್ಲಿ 93.40 ಸೆಂ.ಮೀ. ಮಳೆ ಸುರಿದು, ಆ ವರ್ಷದ ಅಧಿಕ ಮಳೆಯಾದ ಸ್ಥಳ ಎಂದೆನಿಸಿಕೊಂಡಿತು. 2021ರಲ್ಲಿ ಉಡುಪಿಯ ಇನ್ನಂಜೆಯಲ್ಲಿ ಗರಿಷ್ಠ 79.88 ಸೆಂ.ಮೀ. ಮಳೆ ಸುರಿಯಿತು. ಅದರ ಮರುವರ್ಷ ಕಾರ್ಕಳದ ಮುದ್ರಾಡಿಯಲ್ಲಿ 79.49 ಸೆಂ.ಮೀ.

ಮಳೆಯಾಗಿತ್ತು. ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕೆರೆ ಎಂಬಲ್ಲಿ 52.99 ಸೆಂ.ಮೀ. ಮಳೆ 2015ರಲ್ಲಿ ದಾಖಲಾಗಿದ್ದು, ಇದು ರಾಜ್ಯದಲ್ಲೇ ಹೆಚ್ಚು. ಉ.ಕ. ಜಿಲ್ಲೆ ಸಿದ್ದಾಪುರ ತಾ| ಕೊಕಣಿಯಲ್ಲಿ 2018ರಲ್ಲಿ 79.78 ಸೆಂ.ಮೀ. ಮಳೆ ದಾಖಲಾಗಿತ್ತು. ಈ ಎರಡೂ ಜಿಲ್ಲೆಗಳೂ ಪಶ್ಚಿಮ ಘಟ್ಟದ ಭಾಗಗಳೇ 2015ರಿಂದ 2121ರ ಅವಧಿಯಲ್ಲಿ ಆಗುಂಬೆಗಿಂತ ನಾಲ್ಕು ಬಾರಿ ಹೊಸನಗರ ತಾ|ನ ಹುಲಿಕಲ್‌ನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

ತಾಪಮಾನವೂ ಹೆಚ್ಚಳ!
ತಾಪಮಾನದಲ್ಲೂ ಹೆಚ್ಚಳ ಆಗಿದೆ. ಪಶ್ಚಿಮಘಟ್ಟ ಪ್ರದೇಶಗಳಲ್ಲಿ 0.5 ಡಿಗ್ರಿ ಸೆ. ಉಷ್ಣಾಂಶ ಏರಿಕೆ ಆಗಿದೆ. ಇದಕ್ಕೆಲ್ಲ ಮುಖ್ಯ ಕಾರಣ ಕಳೆದ ಎರಡು-ಮೂರು ದಶಕಗಳಲ್ಲಿ ಅರಣ್ಯಪ್ರದೇಶ ಗಣನೀಯವಾಗಿ ಕಡಿಮೆಯಾಗಿದ್ದು, ಕೃಷಿ ಚಟುವಟಿಕೆಗಳು, ಅಕೇಷಿಯ, ರಬ್ಬರ್‌ನಂತಹ ಏಕವಿಧದ ಗಿಡಮರಗಳು ಹೆಚ್ಚಾಗಿವೆ’ ಎಂದು ಐಐಎಸ್ಸಿಯ ವಿಜ್ಞಾನಿ ಟಿ.ವಿ. ರಾಮಚಂದ್ರ ಹೇಳಿದ್ದಾರೆ.

ಟಾಪ್ ನ್ಯೂಸ್

13

ಮಾಧ್ಯಮದ ಕಣ್ತಪ್ಪಿಸಿ ಬಂದ ಶಿವಸೇನೆಯ ಬಂಡಾಯ ಶಾಸಕರು

12

ಧಾರಾಕಾರ ಮಳೆ; ಬಂಟ್ವಾಳದಲ್ಲಿ ಅಪಾಯದ ಮಟ್ಟ ತಲುಪದ ನೇತ್ರಾವತಿ

11

ವಿಟ್ಲ: ಮಳೆ ಅಬ್ಬರ- ಹಲವು ಮನೆಗಳು ಜಲಾವೃತ-ಜನ ಜೀವನ ಅಸ್ತವ್ಯಸ್ತ

ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ

ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ

ಉದಯಪುರ ಮತ್ತೆ ಉದ್ವಿಗ್ನ: ಶಿರಚ್ಛೇದನ ಘಟನೆ ಖಂಡಿಸಿ ಬೃಹತ್ ಪ್ರತಿಭಟನೆ, ಕಲ್ಲುತೂರಾಟ

ಉದಯಪುರ ಮತ್ತೆ ಉದ್ವಿಗ್ನ: ಶಿರಚ್ಛೇದನ ಘಟನೆ ಖಂಡಿಸಿ ಬೃಹತ್ ಪ್ರತಿಭಟನೆ, ಕಲ್ಲುತೂರಾಟ

Kannada movie bairagee to release in 400 theaters

400 ಥಿಯೇಟರ್‌ ಗಳಲ್ಲಿ ಬಿಡುಗಡೆಯಾಗಲಿದೆ ‘ಬೈರಾಗಿ’

k h muniyappa is not happy with the inclusion of M.C.Sudhakar and kothanuru manjunath

ಎಂ.ಸಿ ಸುಧಾಕರ್,‌ ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ: ಕೆ.ಹೆಚ್ ಮುನಿಯಪ್ಪ ತೀವ್ರ ಅಸಮಾಧಾನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ: ತಾಯಿ-ಮಕ್ಕಳ ಆಸ್ಪತ್ರೆ ಬಾಕಿ ವೇತನ ಪಾವತಿಗೆ ಮುಖ್ಯಮಂತ್ರಿ ಸೂಚನೆ

ಉಡುಪಿ: ತಾಯಿ-ಮಕ್ಕಳ ಆಸ್ಪತ್ರೆ ಬಾಕಿ ವೇತನ ಪಾವತಿಗೆ ಮುಖ್ಯಮಂತ್ರಿ ಸೂಚನೆ

ಉದಯ್‌ಪುರ ಘಟನೆ: ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು; ವೆರೋನಿಕಾ ಕರ್ನೆಲಿಯೊ

ಉದಯ್‌ಪುರ ಘಟನೆ: ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು; ವೆರೋನಿಕಾ ಕರ್ನೆಲಿಯೊ

ಮಕ್ಕಳಿಗೆ ಕೃಷಿ ಕಾರ್ಯ ಕಲಿಸಿ: ಡಾ| ವೀರೇಂದ್ರ ಹೆಗ್ಗಡೆ

ಮಕ್ಕಳಿಗೆ ಕೃಷಿ ಕಾರ್ಯ ಕಲಿಸಿ: ಡಾ| ವೀರೇಂದ್ರ ಹೆಗ್ಗಡೆ

ಸಾಲ ನೀಡುವ ಪ್ರಮಾಣ ಹೆಚ್ಚಿಸಿ: ಬ್ಯಾಂಕ್‌ಗಳಿಗೆ ಜಿ.ಪಂ. ಸಿಇಒ ಸೂಚನೆ

ಸಾಲ ನೀಡುವ ಪ್ರಮಾಣ ಹೆಚ್ಚಿಸಿ: ಬ್ಯಾಂಕ್‌ಗಳಿಗೆ ಜಿ.ಪಂ. ಸಿಇಒ ಸೂಚನೆ

ಉಡುಪಿ : ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ : ಆರೋಪಿಗೆ 10 ವರ್ಷ ಜೈಲು

ಉಡುಪಿ : ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ : ಆರೋಪಿಗೆ 10 ವರ್ಷ ಜೈಲು

MUST WATCH

udayavani youtube

ಮಂಗಳೂರಿನಾದ್ಯಂತ ವ್ಯಾಪಕ ಮಳೆಹಲವು ಪ್ರದೇಶಗಳು ಜಲಾವೃತ

udayavani youtube

ತುಪ್ಪವನ್ನು ಯಾರು, ಯಾವಾಗ, ಎಷ್ಟು ಸೇವಿಸಿದರೆ ಒಳ್ಳೆಯದು..?

udayavani youtube

ಸುಳ್ಯ : ಮಗುವಿನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ; ಬದುಕುಳಿದ ಮಗು

udayavani youtube

ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಯುವಕರಿಂದ ಅಂತ್ಯ ಸಂಸ್ಕಾರ

udayavani youtube

ಬನಹಟ್ಟಿಯಲ್ಲಿ ಉಡುಪು ಕಳ್ಳತನ:ವಿಚಿತ್ರ ವ್ಯಕ್ತಿ ಆಕಾರ ನೋಡಿ ಬೆಚ್ಚಿ ಬಿದ್ದ ಜನತೆ!

ಹೊಸ ಸೇರ್ಪಡೆ

13

ಮಾಧ್ಯಮದ ಕಣ್ತಪ್ಪಿಸಿ ಬಂದ ಶಿವಸೇನೆಯ ಬಂಡಾಯ ಶಾಸಕರು

Social media day

Social Media Day: ತುಸು ಹೆಚ್ಚು ಅಭಿವ್ಯಕ್ತಿಗೊಳ್ಳುವಂತೆ ಆಹ್ವಾನಿಸುತ್ತಿದೆ ‘ಕೂ’ ಅಭಿಯಾನ!

12

ಧಾರಾಕಾರ ಮಳೆ; ಬಂಟ್ವಾಳದಲ್ಲಿ ಅಪಾಯದ ಮಟ್ಟ ತಲುಪದ ನೇತ್ರಾವತಿ

11

ವಿಟ್ಲ: ಮಳೆ ಅಬ್ಬರ- ಹಲವು ಮನೆಗಳು ಜಲಾವೃತ-ಜನ ಜೀವನ ಅಸ್ತವ್ಯಸ್ತ

ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ

ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.