ಶಿರ್ವ: ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಾಳಿ: 3 ಲಾರಿ ಸಹಿತ ಜೆಸಿಬಿ ವಶ
Team Udayavani, Jul 8, 2021, 8:42 PM IST
ಶಿರ್ವ: ಇಲ್ಲಿಯ ಕಲ್ಲೊಟ್ಟು ತೆಂಕಬೆಟ್ಟು ಸೇತುವೆಯ ಕೆಳಗಡೆ ಕೇರಳ ಮೂಲದ ಕೋಶಿ ಎಂಬಾತನ ತೋಟದ ಬಳಿಯ ಜಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಗುರುವಾರ ಸಂಜೆ ದಾಳಿ ನಡೆಸಿದ್ದಾರೆ.
ಕಳೆದ 2-3 ದಿನಗಳಿಂದ ಅಕ್ರಮ ದಂಧೆಕೋರರು ಯಂತ್ರ ಬಳಸಿ ಮರಳುಗಾರಿಕೆ ನಡೆಸುತ್ತಿದ್ದು ದಾಳಿಯ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಕಾಪು ತಹಶೀಲ್ದಾರ್ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ಶಿರ್ವ ಪೊಲೀಸರ ಸಮಕ್ಷಮದಲ್ಲಿ 3 ಲಾರಿ ಮತ್ತು ಒಂದು ಜೆಸಿಬಿಯನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಗಣಿ ಇಲಾಖೆಯ ಅಧಿಕಾರಿ ಸಂಧ್ಯಾ, ಕಾಪು ಕಂದಾಯ ನಿರೀಕ್ಷಕ ಸುಧೀರ್ ಕುಮಾರ್ ಶೆಟ್ಟಿ,ಶಿರ್ವ ಗ್ರಾಮ ಕರಣಿಕ ವಿಜಯ್ ಮತ್ತು ಶಿರ್ವ ಪೊಲೀಸರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್