
ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿ
Team Udayavani, Mar 25, 2023, 11:03 PM IST

ಶಿರ್ವ: ಚರ್ಚಿನಲ್ಲಿ ಪೂಜೆ ಮುಗಿಸಿ ಮನೆಗೆ ತೆರಳುತ್ತಿರುವ ವೇಳೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಮಹಿಳೆಯ ಸರಕಸಿದು ಪರಾರಿಯಾದ ಘಟನೆ ತುಂಡುಬಲ್ಲೆ ಲೆತ್ತಿ ಬಾಯಿ ಮನೆ ಬಳಿ ಶನಿವಾರ ಸಂಜೆ ನಡೆದಿದೆ.
ಶಿರ್ವ ಸೊರ್ಪು ನಿವಾಸಿ ಎಮಿಲಿಯನ್ ಸಲ್ದಾನ (64) ಅವರು ಶಿರ್ವ ಚರ್ಚ್ ನಲ್ಲಿ ಪೂಜೆ ಮುಗಿಸಿ ತುಂಡು ಬಲ್ಲೆ ಬಳಿ ಬಸ್ಸಿನಿಂದಿಳಿದು ಮನೆ ಕಡೆ ಒಬ್ಬರೇ ತೆರಳುತ್ತಿದ್ದರು. ಆ ವೇಳೆ ಹೆಲ್ಮೆಟ್ ಧರಿಸಿ ಕಪ್ಪು ಬೈಕ್ ನಲ್ಲಿ ಬಂದ ಯುವಕರಿಬ್ಬರಲ್ಲಿ ಓರ್ವ ಮಹಿಳೆಯ ಬಳಿ ಬಂದು ಚೀಟಿ ತೋರಿಸಿ ತುಳುವಿನಲ್ಲಿ ಉಂದು ಏರೆನ ಇಲ್ಲ್ ಗೊತ್ತುಂಡೇ ಎಂದು ಕೇಳಿದ್ದಾನೆ. ಮಹಿಳೆ ಇಲ್ಲವೆಂದು ಹೇಳಿ ಮುಂದೆ ಹೋದಾಗ ಹಿಂದಿನಿಂದ ಬಂದು ಆಕೆಯ ಕುತ್ತಿಗೆಯಲ್ಲಿದ್ದ ಸುಮಾರು 12 ಗ್ರಾಮ್ ತೂಕದ ಕ್ರಾಸ್ ಪೇಂಡೆಂಟ್ ಇರುವ ಚಿನ್ನದ ಸರವನ್ನು ಕಸಿಡಿದ್ದಾನೆ. ಆಗ ಮಹಿಳೆ ಜೋರಾಗಿ ಬೊಬ್ಬೆ ಹೊಡೆದಿದ್ದು ಸವಾರರಿಬ್ಬರೂ ತುಂಡುಬಲ್ಲೆ ಮುಖ್ಯರಸ್ತೆಯ ಕಡೆಗೆ ಪರಾರಿಯಾಗಿದ್ದಾರೆ. ಚಿನ್ನದ ಸರದ ಮೌಲ್ಯ ಸುಮಾರು 60,000/- ಆಗಿದ್ದು ಮಹಿಳೆ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ಚಿನ್ನ ಗೆದ್ದು ದಾಖಲೆ ಬರೆದ ನೀತು ಘಂಘಾಸ್
ಟಾಪ್ ನ್ಯೂಸ್
