ಶಿರ್ವ : ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆ, ಯುವಕ ಸಾವು
Team Udayavani, Dec 24, 2022, 6:21 PM IST
ಶಿರ್ವ : ಕಟಪಾಡಿ- ಶಿರ್ವ ಮುಖ್ಯರಸ್ತೆಯ ಪಂಜಿಮಾರು ಪಾಲಮೆ ಬಳಿ ಕಾರು ಮತ್ತು ಟೆಂಪೋ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಕೊನೆಯುಸಿರೆಳೆದಿರುವ ಅವಘಡ ಶನಿವಾರ ಸಂಜೆ ನಡೆದಿದೆ.
ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸ್ ಅಧಿಕಾರಿಗಳು ಸಿಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೂಡಬಿದಿರೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರಿಗೆ ಕಟಪಾಡಿಯಿಂದ ಶಿರ್ವ ಕಡೆಗೆ ತೆರಳುತ್ತಿದ್ದ ಟೆಂಪೋ ಮುಖಾಮುಖಿಯಾಗಿ ಅವಘಡ ಸಂಭವಿಸಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿತ್ತು. ಉಡುಪಿಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ವೈದ್ಯರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರು ಮೂಲದ ಕಾರು ಎಂದು ತಿಳಿದು ಬಂದಿದ್ದು, ಮೃತರು ಬೆಂಗಳೂರಿನ ಉತ್ತರಹಳ್ಳಿಯ ಪವನ್ ಬಿ.ಎಸ್ (27) ಮತ್ತು ಸಪ್ನಾ ಶಶಿಧರ್ (42) ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ