“ವಿಶೇಷ ಮಕ್ಕಳು ವಿಕಲಚೇತನರಲ್ಲ’

Team Udayavani, Jul 10, 2017, 3:35 AM IST

0907KAR2.jpg

ಕಾರ್ಕಳ: ವಿಶೇಷ ಮಕ್ಕಳಲ್ಲಿ ಅಂಗ ವೈಕಲ್ಯವಿರುವುದನ್ನು ಹೊರತು ಪಡಿಸಿದರೆ ಅವರು ಎಂದೂ ವಿಕಲಚೇತನರಲ್ಲ, ಅವರಿಗೆ ಪ್ರಶಿಕ್ಷಣದ ಜತೆ ಸರಿಯಾದ ಮಾರ್ಗದರ್ಶನ ನೀಡಿದಲ್ಲಿ ಅವರಲ್ಲಿರುವ ವಿಶೇಷ ಪ್ರತಿಭೆಯನ್ನು ಗುರುತಿಸಲು ಸಾಧ್ಯವೆಂದು ಶ್ರೀ ಕ್ಷೇತ್ರ ಒಡಿಯೂರು ಇಲ್ಲಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ.

ಅವರು ಇತ್ತೀಚೆಗೆ ಚೇತನಾ ವಿಶೇಷ ಶಾಲೆ ಇಲ್ಲಿ ವಿಶೇಷ ಮಕ್ಕಳಿಗೋಸ್ಕರ ಸುಮಾರು ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಫಿಸಿಯೋಥೆರಫಿ ಘಟಕದ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.

ಇಂದು ವಿಶೇಷ ಮಕ್ಕಳ ಬೆಳವಣಿಗೆ ಸಮಯದಲ್ಲಿ ಅವರಿಗೆ ಪ್ರಶಿಕ್ಷಣದ ಜತೆ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಫಿಸಿಯೋಥೆರಫಿ ಚಿಕಿತ್ಸೆಯು ಅತೀ ಆವಶ್ಯಕವಿದ್ದು ಇದಕ್ಕೆ ಪೂರಕವಾಗಿ ಚೇತನಾ ವಿಶೇಷ ಶಾಲೆಯಲ್ಲಿ ಪೂರ್ಣ  ಪ್ರಮಾಣದ ಫಿಸಿಯೋಥೆರಫಿ ಘಟಕದ ಸ್ಥಾಪನೆಯಿಂದ ವಿಶೇಷ ಮಕ್ಕಳ ಬೆಳ ವಣಿಗೆಗೆ ಸಹಕಾರಿಯಾಗಲಿದೆ ಎಂದರು.

ಹ್ಯಾಂಗ್ಯೊ ಐಸ್ಕ್ರೀಮ್‌ ಪ್ರೈ.ಲಿ. ಮಂಗಳೂರು ಇದರ ಆಡಳಿತ ನಿರ್ದೇಶಕ‌ ಪ್ರದೀಪ್‌ ಜಿ. ಪೈ, ಮುಂಬಯಿಯ ಉದ್ಯಮಿಗಳಾದ ದಿವಾಕರ್‌ ಎನ್‌. ಶೆಟ್ಟಿ, ಅಪ್ಪಣ್ಣ ಎಂ. ಶೆಟ್ಟಿ, ಗಿಲ್ಬರ್ಟ್‌ ಸೈಮನ್‌ ಡಿ’ಸೋಜಾ, ನೂತನವಾಗಿ ನಿರ್ಮಾಣವಾಗಲಿರುವ ಫಿಸಿಯೋಥೆರಫಿ ಘಟಕದ ನಿರ್ಮಾಣಕ್ಕೆ ಹಾಗೂ ವಿಶೇಷ ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುವ ಭರವಸೆ ನೀಡಿದರು. 

ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಬಿ. ಗಣಪತಿ ಹೆಗ್ಡೆ, ಭಾರತೀ ಸೇವಾ ಮಂಡಳಿ ಅಧ್ಯಕ್ಷ ಎಂ. ಗಣಪತಿ ಪೈ, ಶಾಲಾ ಸಲಹಾ ಮಂಡಳಿ ಸದಸ್ಯ ಶ್ಯಾಮ ಎನ್‌. ಶೆಟ್ಟಿ ಮುಂಬಯಿ ಉಪಸ್ಥಿತರಿದ್ದರು.

ಶಾಲಾ ಸಂಚಾಲಕರಾದ ರಘುನಾಥ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕಿಯರಾದ ಮಂಜುಳಾ, ಸಂಧ್ಯಾ, ಸುಮಿತ್ರಾ, ಶೋಭಾ ಹಾಗೂ ಶಾಲಾ ಟ್ರಸ್ಟಿ ಗೀತಾ ಜಿ. ಪೈ ಅತಿಥಿಗಳನ್ನು ಪರಿಚಯಿಸಿದರು. ಶಾಲಾ ಮುಖ್ಯೋ ಪಾಧ್ಯಾಯಿನಿ ಹೇಮಲತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸಂಧ್ಯಾ ವಂದಿಸಿದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.