“ಶಾಲೆ, ಕಾಲೇಜು ಮೂಲಸೌಕರ್ಯಕ್ಕೆ ವಿಶೇಷ ಒತ್ತು’
Team Udayavani, Jul 5, 2017, 3:45 AM IST
ಉಡುಪಿ: ಸರಕಾರವು ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾಳಜಿ ವಹಿಸಿದೆ. ಶಾಲಾ ಕಾಲೇಜುಗಳ ಮೂಲ ಸೌಕರ್ಯಗಳ ಹೆಚ್ಚಳಕ್ಕೆ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಅವರು ಹೇಳಿದರು.
ಅವರು ಉಡುಪಿ ಬಾಲಕಿಯರ ಪ.ಪೂ. ಕಾಲೇಜಿನ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಧನ ಸಹಾಯ ನೀಡಿ ಪ್ರೋತ್ಸಾಹ ನೀಡಿದ ಆಲ್ಕಾರ್ಗೋ ಲಾಜಿಸ್ಟಿಕ್ ಸಂಸ್ಥೆಯ ನಕ್ರೆ ಸುರೇಂದ್ರನಾಥ ಶೆಟ್ಟಿ ಮತ್ತು ಉಡುಪಿ ಬೈಲೂರು ಕೆ. ಲಕ್ಷ್ಮೀನಾರಾಯಣ ಭಟ್ ಅವರನ್ನು ಸಚಿವರು ಸಮ್ಮಾನಿಸಿದರು.
ದ.ಕ. ಉಡುಪಿ ಜಿಲ್ಲಾ ಮೀನುಗಾರಿಕಾ ಫೆಡರೇಶನ್ಅಧ್ಯಕ್ಷ ಯಶ್ಪಾಲ್ ಎ. ಸುವರ್ಣ, ಸಂಸ್ಥೆಯ ಪ್ರಾಂಶುಪಾಲ ಜಗದೀಶ್ ಕುಮಾರ್, ಮುಖ್ಯ ಶಿಕ್ಷಕ ವಿಶ್ವನಾಥ ಬಾಯರಿ, ಶಿಕ್ಷಣ ಸೇವಾ ಸಮಿತಿ ಅಧ್ಯಕ್ಷ ಸಕೀರ್ ಎಂ. ಹಾವಂಜೆ, ಎಸ್ಡಿಎಂಸಿ ಉಪಾಧ್ಯಕ್ಷ ಪ್ರಕಾಶ್ ಅಂದ್ರಾದೆ, ಕೇದಾರನಾಥ ಕಿಶೋರ್ ಹೆಗ್ಡೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶ್ರೀಲಕ್ಷ್ಮೀ, ಕಾರ್ಯದರ್ಶಿ ಪ್ರತೀûಾ ಉಪಸ್ಥಿತರಿದ್ದರು.
ಉಪನ್ಯಾಸಕ ಡಿ. ದಯಾನಂದ ಸ್ವಾಗತಿಸಿದರು. ಉಪನ್ಯಾಸಕ ಗಂಗಾಧರ ಎ.ವಿ. ಸಮ್ಮಾನಿತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿನಿಯರಾದ ಸುಕನ್ಯಾ ಮತ್ತು ನಿಶಾ ಅಮೀನ್ ಕಾರ್ಯಕ್ರಮ ನಿರೂಪಿಸಿದರು. ಕಾವ್ಯಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ