ಕಾಡ್ಗಿಚ್ಚು ತಡೆಯಲು ವಿಶೇಷ ಕಾರ್ಯಪಡೆ

 ಕುದುರೆಮುಖ ವನ್ಯಜೀವಿ ವಿಭಾಗದಲ್ಲಿ ಯೋಜನೆ

Team Udayavani, Feb 4, 2020, 5:48 AM IST

0302AJKE01

ಅಜೆಕಾರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಬೇಸಗೆಯಲ್ಲಿ ಸಂಭವಿಸಬಹುದಾದ ಕಾಡ್ಗಿಚ್ಚು ತಡೆಯಲು ವನ್ಯಜೀವಿ ವಿಭಾಗದ ಅಧಿಕಾರಿಗಳು ವಿಶೇಷ ಕಾರ್ಯಪಡೆ ರಚಿಸಿ ಕಣ್ಗಾವಲು ಇರಿಸಿದ್ದಾರೆ.

ಕಳೆದ ವರ್ಷ ಜನವರಿ ಫೆಬ್ರವರಿ ತಿಂಗಳಲ್ಲಿ ರಾಜ್ಯದ ಬಂಡೀಪುರ ಅಭಯಾರಣ್ಯದಲ್ಲಿ ಬೆಂಕಿಯ ಜ್ವಾಲೆಗೆ ಅಪಾರ ನಷ್ಟ ಸಂಭವಿಸಿದ್ದು ಇಂತಹ ಅವಘಡಗಳು ಕುದುರೆಮುಖ ವನ್ಯಜೀವಿ ವಿಭಾಗದ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭವಿಸದಂತೆ ಪ್ರತಿ ವರ್ಷ ಮುನ್ನೆಚ್ಚರಿಕೆಯನ್ನು ವಹಿಸಲಾಗುತ್ತಿದೆ.

2 ಕಣ್ಗಾವಲು ಪಡೆ
ಪ್ರತಿ ವರ್ಷ ಜನವರಿಯಿಂದ ಎಪ್ರಿಲ್‌ವರೆಗೆ ಕುದುರೆಮುಖ ವನ್ಯಜೀವಿ ವಿಭಾಗದ ರಾಷ್ಟ್ರೀಯ ಉದ್ಯಾನವನದ ಕೆಲವು ಪ್ರದೇಶಗಳಲ್ಲಿ ಅಲ್ಪ ಪ್ರಮಾಣದ ಬೆಂಕಿ ಕಾಣಿಸಿಕೊಳ್ಳುತ್ತಿದ್ದು ಇದರ ನಿರ್ಮೂಲನೆಗಾಗಿಯೇ ತಲಾ ನಾಲ್ಕು ಜನರನ್ನು ಒಳಗೊಂಡ ಎಫ್ಪಿಸಿ ಮತ್ತು ಎಪಿಸಿ ಎಂಬ 2 ಕಣ್ಗಾವಲು ಪಡೆಗಳನ್ನು ನೇಮಕ ಮಾಡಲಾಗಿದ್ದು ಈ ತಂಡಗಳು ದಿನದ 24 ಗಂಟೆಯೂ ಸದಾ ಕಾವಲು ಕಾಯುತ್ತವೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನವು ಒಟ್ಟು 4 ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ 1,300 ಚದರ ಕಿ.ಮೀ. ವ್ಯಾಪ್ತಿಯನ್ನು ಹೊಂದಿದ್ದು, ಅಪಾರ ಪ್ರಾಣಿ ವರ್ಗ, ವೃಕ್ಷ ಸಂಕುಲಕ್ಕೆ ಆಶ್ರಯವಾಗಿದೆ.

ರಾಜ್ಯದ ಇತರ ರಾಷ್ಟ್ರೀಯ ಉದ್ಯಾನವನಕ್ಕೆ ಹೋಲಿಸಿದಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನವು ನಿತ್ಯಹರಿದ್ವರ್ಣ ಕಾಡುಗಳಿಂದ ಆವೃತವಾಗಿರುವುದರಿಂದಾಗಿ ಈ ಪ್ರದೇಶದಲ್ಲಿ ಅಗ್ನಿ ಅವಘಡಗಳು ಸಂಭವಿಸುವುದು ವಿರಳವಾಗಿದೆ.

ಮುನ್ನೆಚ್ಚರಿಕೆ
ಈ ಭಾಗದಲ್ಲಿ ನಿರಂತರ ಮಳೆ ಸುರಿಯುವುದು ಒಂದೆಡೆಯಾದರೆ ಹುಲ್ಲುಗಾವಲು ಪ್ರದೇಶ ಕಡಿಮೆ ಪ್ರಮಾಣದಲ್ಲಿ ಇರುವುದರಿಂದ ಕಾಡ್ಗಿಚ್ಚು ಸಂಭವಿಸುವುದು ಅತಿ ಕಡಿಮೆಯಾಗಿದೆ. ಆದರೂ ಸಹ ಅರಣ್ಯದೊಳಗೆ ತೆರಳುವ ಕೆಲವು ಪ್ರವಾಸಿಗರು ಬೆಂಕಿ ಹಾಕುವುದರಿಂದ ಅಗ್ನಿ ಅನಾಹುತಗಳು ಕೆಲವೊಮ್ಮೆ ಸಂಭವಿಸುತ್ತವೆ. ಈ ನಿಟ್ಟಿನಲ್ಲಿ ವನ್ಯಜೀವಿ ವಿಭಾಗ ಮುನ್ನೆಚ್ಚರಿಕೆ ವಹಿಸಿದೆ.

ಆಧುನಿಕ ತಂತ್ರಜ್ಞಾನ
ರಾ.ಉದ್ಯಾನವನ ವ್ಯಾಪ್ತಿಯಲ್ಲಿ ಯಾವುದೇ ಬೆಂಕಿ ಅನಾಹುತ ಸಂಭವಿಸುವ ಲಕ್ಷಣವಿದ್ದಲ್ಲಿ ತತ್‌ಕ್ಷಣ ಅಧಿಕಾರಿಗಳ ಮೊಬೈಲ್‌ಗೆ ಸಂದೇಶ ರವಾನೆಯಾಗುವಂತೆ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ. ಇದರಿಂದಾಗಿ ಅವಘಡಗಳು ಸಂಭವಿಸಿದ ತತ್‌ಕ್ಷಣವೇ ಅಧಿಕಾರಿಗಳು ಕಾರ್ಯೋನ್ಮುಖರಾಗಲು ಸಹಕಾರಿಯಾಗಿದೆ. ಡ್ರೋನ್‌ ಕೆಮರಾ ಬಳಸಿಯೂ ಅರಣ್ಯ ಪ್ರದೇಶವನ್ನು ನಿರಂತರವಾಗಿ ವೀಕ್ಷಿಸಲಾಗುತ್ತಿದೆ.

ಬೆಂಕಿ ಅವಘಡದ ಪ್ರದೇಶಗಳು
ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಮುಖವಾಗಿ ನೆಮ್ಮಾರ್‌, ಮಲ್ಲೇಶ್ವರ್‌, ಶೀರಲ್‌ ಹಾಗೂ ಕುದುರೆಮುಖ ಅದಿರು ಸಂಗ್ರಹಣ ಪ್ರದೇಶದಲ್ಲಿ ಹೆಚ್ಚಾಗಿ ಬೆಂಕಿ ಕಾಣಿಸಿಕೊಳ್ಳುತ್ತದೆ. ಅಲ್ಲದೆ ವಾಲಿಕುಂಜಕ್ಕೆ (ಅಜ್ಜಿಕುಂಜ) ಪ್ರದೇಶದಲ್ಲೂ ಅಗ್ನಿ ಅನಾಹುತ ಸಂಭವಿಸುತ್ತದೆ.

17 ಕಡೆಗಳಲ್ಲಿ ವೀಕ್ಷಣಾ ಸ್ಥಳ
ಉದ್ಯಾನವನದ ಅತೀ ಎತ್ತರದ 17 ಪ್ರದೇಶಗಳನ್ನು ಅರಣ್ಯ ವೀಕ್ಷಣೆಗಾಗಿ ಆಯ್ಕೆ ಮಾಡಲಾಗಿದೆ. ಅರಣ್ಯ ಇಲಾಖೆಯ ಸಿಬಂದಿ ಹಾಗೂ ಎಪಿಸಿ ಕಣ್ಗಾವಲು ಪಡೆಯ ಸಿಬಂದಿ ಕಾರ್ಯನಿರ್ವಹಿಸುತ್ತಿದ್ದು, ಈ 17 ಪ್ರದೇಶಗಳಲ್ಲಿ ಇರುವ ಟವರ್‌ ಮೂಲಕ ಸುತ್ತಲಿನ ಅರಣ್ಯ ಪ್ರದೇಶವನ್ನು ನಿರಂತರವಾಗಿ ವೀಕ್ಷಣೆ ಮಾಡುತ್ತಿರುತ್ತಾರೆ.

ಪ್ರವೇಶ ನಿಷೇಧ
ಉದ್ಯಾನವನದೊಳಗೆ ಅಗ್ನಿ ದುರಂತಗಳನ್ನು ತಡೆಯುವ ನಿಟ್ಟಿನಲ್ಲಿ ಬೇಸಗೆ ಸಮಯದಲ್ಲಿ ಜನರು ಅರಣ್ಯ ಪ್ರವೇಶ ಮಾಡುವುದನ್ನು ನಿಷೇಧಿಸಲಾಗುತ್ತದೆ. ಈ ಬಾರಿಯೂ ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಉದ್ಯಾನವನ ವ್ಯಾಪ್ತಿಯಲ್ಲಿ ಯಾವುದೇ ಬೆಂಕಿಯ ಕುರುಹು ಕಂಡುಬಂದ ತತ್‌ಕ್ಷಣ ಕಾರ್ಯಾಚರಿಸಲು ಸಿಬಂದಿ ಹಾಗೂ ಹೆಚ್ಚುವರಿ ವಾಹನಗಳನ್ನು ನಿಯೋಜನೆ ಮಾಡಲಾಗಿದ್ದು, ಬೆಂಕಿ ನಂದಿಸಲು ಅಗತ್ಯವಿರುವ ನೀರು ಹಾಗೂ ಅಗತ್ಯ ಉಪಕರಣಗಳು ಮತ್ತು ಅಗ್ನಿಶಾಮಕ ವ್ಯವಸ್ಥೆಗಳನ್ನು ಸಿಬಂದಿಗೆ ನೀಡಲಾಗಿದೆ.

ಕಟ್ಟೆಚ್ಚರ
ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡ್ಗಿಚ್ಚಿನಂತಹ ಪ್ರಕರಣಗಳು ತೀರಾ ವಿರಳ. ಆದರೂ ಸಹ ಮುಂಜಾಗ್ರತೆ ಕ್ರಮವಾಗಿ ಹೆಚ್ಚುವರಿ ಸಿಬಂದಿ ನೇಮಿಸಿಕೊಂಡು ವಿಶೇಷ ಕಾರ್ಯಪಡೆ ರಚಿಸಿ ಉದ್ಯಾನವನ ವ್ಯಾಪ್ತಿಯಲ್ಲಿ ಟವರ್‌ಗಳನ್ನು ನಿರ್ಮಿಸಿ ಕಟ್ಟೆಚ್ಚರ ವಹಿಸಲಾಗಿದೆ.
-ರುಥÅನ್‌,
ವಲಯ ಅರಣ್ಯಾಧಿಕಾರಿ, ಕುದುರೆಮುಖ ವನ್ಯಜೀವಿ ವಿಭಾಗ

ಪ್ರತಿಯೋರ್ವರ ಕರ್ತವ್ಯ
ಯಾವುದೇ ರೀತಿಯ ಅನಾಹುತ ನಡೆಯದಂತೆ ನೋಡಿಕೊಳ್ಳವುದು ಪ್ರತಿಯೋರ್ವ ನಾಗರಿಕನ ಕರ್ತವ್ಯ. ಕಣ್ಗಾವಲು ತಂಡದಲ್ಲಿ ಅರಣ್ಯ ಪರಿಸರದ ಸ್ಥಳೀಯರನ್ನು ಸೇರಿಸಿಕೊಂಡಲ್ಲಿ ಕಾಡ್ಗಿಚ್ಚಿನಂತಹ ಅನಾಹುತ ತಡೆಯಲು ಸುಲಭ ಸಾಧ್ಯವಾಗುತ್ತದೆ.
-ಶ್ರೀಧರ್‌ ಗೌಡ,
ಅಧ್ಯಕ್ಷರು, ಅರಣ್ಯ ಹಕ್ಕು ಸಮಿತಿ ಈದು

ಸೀಮಿತವಲ್ಲ
ಅರಣ್ಯ ಸೇರಿದಂತೆ ವನ್ಯಜೀವಿಗಳ ಸಂರಕ್ಷಣೆ ಕೇವಲ ಇಲಾಖೆಗೆ ಸೀಮಿತವಲ್ಲ, ಯಾವುದೇ ಕಾರಣಕ್ಕೂ ಅರಣ್ಯದೊಳಗೆ ಬೆಂಕಿ ಸಂಬಂಧಿತ ವಸ್ತುಗಳನ್ನು ಕೊಂಡೊಯ್ಯಬಾರದು.
-ಕೌಶಿಕ್‌, ವಿದ್ಯಾರ್ಥಿ

ಜಗದೀಶ್‌ ಅಜೆಕಾರು

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.