ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ಭೇಟಿ : ಜಿಲ್ಲಾಡಳಿತದಿಂದ ಸ್ವಾಗತ

Team Udayavani, Jul 27, 2019, 5:11 AM IST

2607KDPP1

ಲಂಕಾ ಪ್ರಧಾನಿ ಬರಮಾಡಿಕೊಳ್ಳಲು ಸಜ್ಜಾಗಿರುವ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು.

ಕುಂದಾಪುರ/ಕೊಲ್ಲೂರು: ಶ್ರೀಲಂಕಾ ಪ್ರಧಾನಿ ರನಿಲ್‌ ವಿಕ್ರಮ ಸಿಂಘೆ ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ದರ್ಶನ ಪಡೆಯಲು ಆಗಮಿಸಿದ್ದು, ಉಡುಪಿ ಜಿಲ್ಲಾಡಳಿತದಿಂದ ಗೌರವಯುತವಾಗಿ ಸ್ವಾಗತಿಸಲಾಯಿತು.

ಕೊಲ್ಲೂರಿಗೆ ಆಗಮಿಸಿದ ರನಿಲ್‌ ವಿಕ್ರಮ ಸಿಂಘೆ ಅವರನ್ನು ಇಲ್ಲಿನ
ಆರ್‌.ಎನ್‌. ಶೆಟ್ಟಿ ಅತಿಥಿ ಗೃಹದ ಮುಂಭಾಗ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸ್ವಾಗತಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌ ಉಪಸ್ಥಿತರಿದ್ದರು.

ಹವಾಮಾನ ವೈಪರೀತ್ಯದ ಕಾರಣದಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 9 ಗಂಟೆಗೆ ಬಂದಿಳಿದ ಶ್ರೀಲಂಕಾ ಪ್ರಧಾನಿಯವರನ್ನು ಕೊಲ್ಲೂರಿಗೆ ರಸ್ತೆಯ ಮೂಲಕ ಶೂನ್ಯ ಸಂಚಾರ ವ್ಯವಸ್ಥೆಯಲ್ಲಿ 15ಕ್ಕೂ ಮಿಕ್ಕಿ ಎಸ್ಕಾರ್ಟ್‌ ವಾಹನ ದಲ್ಲಿ ಬಿಗಿ ಭದ್ರತೆಯೊಂದಿಗೆ ಕರೆ ತರಲಾಯಿತು.

ಅರೆ ಶಿರೂರಿನಲ್ಲಿ ಸಿದ್ಧತೆ

ಅರೆ ಶಿರೂರಿನ ಹೆಲಿಪ್ಯಾಡ್‌ನ‌ಲ್ಲಿಯೂ ಎಲ್ಲ ಸಿದ್ಧತೆ ಬಿಗಿ ಭದ್ರತೆ ವಹಿಸಲಾಗಿತ್ತು. ಮಳೆ ಕಡಿಮೆಯಾಗಿದ್ದರೆ, ಮಂಗಳೂರಿನಿಂದ ಅರೆ ಶಿರೂರಿನವರೆಗೆ ಹೆಲಿಕಾಪ್ಟರ್‌ನಲ್ಲಿ ಬಂದು ಅಲ್ಲಿಂದ ಕೊಲ್ಲೂರಿಗೆ ರಸ್ತೆಯ ಮೂಲಕ ಸಂಚರಿಸಲು ಕೂಡ ಸಿದ್ಧತೆ ಮಾಡಲಾಗಿತ್ತು. ಇಲ್ಲಿ ಹೆಲಿಕಾಪ್ಟರ್‌ ಇಳಿಯಬಹುದು ಎನ್ನುವ ಸಂದೇಶವನ್ನು ಕೊಟ್ಟರೂ ಕೂಡ ಮಂಗಳೂರಿನಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ ಪಯಣವನ್ನು ಕೈ ಬಿಡಲಾಯಿತು.

ಆದರೆ ಕೊಲ್ಲೂರಿನಿಂದ ವಾಪಸ್‌ ಮಂಗಳೂರಿಗೆ ಅರೆ ಶಿರೂರಿನಿಂದ ಹೆಲಿಕಾಪ್ಟರ್‌ನಲ್ಲಿಯೇ ತೆರಳಿದರು. ಕುಂದಾಪುರ ಉಪ ವಿಭಾಗದ ಸಹಾಯಕ
ಆಯುಕ್ತ ಡಾ| ಎಸ್‌.ಎಸ್‌. ಮಧುಕೇಶ್ವರ್‌ ಇಲ್ಲಿ ಉಸ್ತುವಾರಿ ವಹಿಸಿದ್ದರು.

ಶಾಸಕರ ದಿಢೀರ್‌ ನಿರ್ಗಮನ
ಇನ್ನು ಲಂಕಾ ಪ್ರಧಾನಿಯನ್ನು ಸ್ವಾಗತಿ ಸಲು ಕೊಲ್ಲೂರಿಗೆ ಬೈಂದೂರು ಶಾಸಕ
ಬಿ.ಎಂ. ಸುಕುಮಾರ್‌ ಶೆಟ್ಟಿ ಆಗಮಿಸಿ ದ್ದರು. ದೇವಿಯ ದರ್ಶನ ಪಡೆದು ಹೊರಗೆ ಬರುತ್ತಿದ್ದಂತೆ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆ ಎನ್ನುವ ಸೂಚನೆ ಸಿಗುತ್ತಿದ್ದಂತೆ ಬೆಂಗಳೂರಿಗೆ ತೆರಳುವ ಸಲುವಾಗಿ
ಶಾಸಕರು ದಿಢೀರ್‌ ನಿರ್ಗಮಿಸಿದರು.

ಅಂಗಡಿ – ಮುಂಗಟ್ಟು ಬಂದ್‌
ಲಂಕಾ ಪ್ರಧಾನಿ ಭೇಟಿಯ ಸಲು ವಾಗಿ ಭದ್ರತಾ ಕಾರಣಕ್ಕೆ ಕೊಲ್ಲೂರು ದೇವಸ್ಥಾನದ ಆಸುಪಾಸಿನಲ್ಲಿರುವ ಎಲ್ಲ ಅಂಗಡಿ – ಮುಂಗಟ್ಟು ಬೆಳಗ್ಗಿನಿಂದ, ತೆರಳುವವರೆಗೆ ಮುಚ್ಚಲಾಗಿತ್ತು. ಇದಲ್ಲದೆ ಬೆಳಗ್ಗಿನಿಂದ‌ ಮಧ್ಯಾಹ್ನದವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು.

2ನೇ ಭೇಟಿ
ರನಿಲ್‌ ವಿಕ್ರಮ ಸಿಂಘೆ ಪ್ರಧಾನಿಯಾದ ಬಳಿಕ ಕೊಲ್ಲೂರಿಗೆ ಇದು ಅವರ ಎರಡನೇ ಭೇಟಿಯಾಗಿದೆ. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ, ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಹರೀಶ ಕುಮಾರ್‌ ಶೆಟ್ಟಿ, ಸಮಿತಿ ಸದಸ್ಯರು, ಅರ್ಚಕ ವೃಂದದವರು ಇದ್ದರು.

ಸಮಯ ವೇಳಾಪಟ್ಟಿ
ಬೆಳಗ್ಗೆ 11.10 ಕ್ಕೆ ಅತಿಥಿ ಗೃಹಕ್ಕೆ ಆಗಮನ.
ಬೆಳಗ್ಗೆ 11.30 ಕ್ಕೆ ದೇವಸ್ಥಾನದ ದರ್ಶನಕ್ಕೆ ಆಗಮನ.
ಮಧ್ಯಾಹ್ನ 12.30ಕ್ಕೆ ದೇವಸ್ಥಾನದಿಂದ ಪೂಜೆ ಮುಗಿಸಿ ನಿರ್ಗಮನ.
ಮಧ್ಯಾಹ್ನ ಮಧ್ಯಾಹ್ನ 2.50 ಕ್ಕೆ ಅರೆ ಶಿರೂರಿನಿಂದ ಹೆಲಿಕಾಪ್ಟರ್‌ ಮೂಲಕ ನಿರ್ಗಮನ.

ಫೋಟೋ, ವೀಡಿಯೋಗೆ ನಿರ್ಬಂಧ
ಶ್ರೀಲಂಕಾ ಪ್ರಧಾನಿ ಭೇಟಿ ಕುರಿತು ಮಾಧ್ಯಮಗಳಿಗೆ ಚಿತ್ರ ಹಾಗೂ ವಿಡಿಯೋ ಚಿತ್ರಿಕರಿಸಲು ಜಿಲ್ಲಾಡಳಿತದಿಂದ ನಿರ್ಬಂಧ ವಿಧಿಸಲಾಗಿತ್ತು. ಹೈಕಮಿಷನರ್‌ ಕಚೇರಿಯಿಂದಲೇ ಉಡುಪಿ ಜಿಲ್ಲಾಡಳಿತಕ್ಕೆ ಸ್ಪಷ್ಟ ಆದೇಶ ಬಂದ ಹಿನ್ನೆಲೆಯಲ್ಲಿ ಈ ಕ್ರಮಗಳನ್ನು ಅನುಸರಿಸಲಾಗಿದೆ ಎನ್ನುವುದಾಗಿ ಪತ್ರಕರ್ತರಿಗೆ ಡಿಸಿ ತಿಳಿಸಿದ್ದಾರೆ.

ಬಿಗಿ ಭದ್ರತೆ
ಶ್ರೀಲಂಕಾ ಪ್ರಧಾನಿ ಮೇಲೆ ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ಹಿಂದಿನ
ಭೇಟಿಗಿಂತಲೂ ಈ ಬಾರಿ ಹೆಚ್ಚಿನ ಭದ್ರತೆಯನ್ನು ಜಿಲ್ಲಾಡಳಿತ, ಪೊಲೀಸ್‌ ಇಲಾಖೆಯಿಂದ ಮಾಡಲಾಗಿತ್ತು. ಸಂಚರಿಸುವ ದಾರಿಯುದ್ದಕ್ಕೂ ಅಲ್ಲಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಪ್ರಮುಖ ಜಂಕ್ಷನ್‌, ಪೇಟೆಗಳಲ್ಲಿ, ರಸ್ತೆ ತಿರುವು, ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್‌ ಸಿಬಂದಿಯನ್ನು ಭದ್ರತೆಗಾಗಿ ನಿಲ್ಲಿಸಲಾಗಿತ್ತು. ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಡಿವೈಎಸ್‌ಪಿಗಳಾದ ಬಿ.ಪಿ. ದಿನೇಶ್‌ ಕುಮಾರ್‌, ಜೈಶಂಕರ್‌, ವೃತ್ತ ನಿರೀಕ್ಷಕರು, ಎಸ್‌ಐಗಳು ಭದ್ರತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.