ರಾಜ್ಯಮಟ್ಟದ ವರ್ಣೋತ್ಸವ ಸಮಾರೋಪ
Team Udayavani, Mar 10, 2019, 1:00 AM IST
ಶಿರ್ವ: ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನೊಳಗೊಂಡ ಎರಡು ದಿನಗಳ ವಣೊìàತ್ಸವದ ಸಮಾರೋಪ ಸಮಾರಂಭವು ಶ್ರೀ ಸೋದೆ ಮಠದ ಮಠಾಧೀಶ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದ ಅವರ ಅಧ್ಯಕ್ಷತೆಯಲ್ಲಿ ಕಾಲೇಜಿನಲ್ಲಿ ಶುಕ್ರವಾರ ನಡೆಯಿತು.
ಮುಖ್ಯ ಅತಿಥಿಯಾಗಿ ಪೂರ್ಣಪ್ರಜ್ಞ ಪ.ಪೂ. ಕಾಲೇಜಿನ ಪ್ರಾಂಶುಪಾಲ ಸಂದೀಪ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವರ್ಣೋತ್ಸವ ಉತ್ತಮ ವೇದಿಕೆಯಾಗಿದೆ ಎಂದರು.
ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಬಹುಮಾನ ವಿತರಿಸಿದರು. ನಿಟ್ಟೆ ಎನ್ಎಂಎಎಂಐಟಿ ಕಾಲೇಜು ತಂಡ ಪ್ರಥಮ ಸ್ಥಾನ ಗಳಿಸಿದರೆ ಮಿಜಾರ್ ಮೈಟ್ ಕಾಲೇಜು ತಂಡವು ದ್ವಿತೀಯ ಸ್ಥಾನ ಗಳಿಸಿತು. ರಾಜ್ಯದ ವಿವಿಧ ತಾಂತ್ರಿಕ ಮಹಾವಿದ್ಯಾಲಯಗಳಿಂದ ಸುಮಾರು 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗವಹಿಸಿದ್ದರು.
ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್, ಪ್ರಾಂಶುಪಾಲ ಡಾ| ತಿರುಮಲೇಶ್ವರ ಭಟ್ ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದ ಬಳಿಕ ಸಂಸ್ಥೆಯ ಸಿಬಂದಿ, ವಿದ್ಯಾರ್ಥಿಗಳಿಂದ “ವೀರಮಣಿ ಕಾಳಗ’ ಯಕ್ಷಗಾನ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ