ಮೀನುಗಾರರಿಗೆ ಸಹಾಯಧನ: ಕೇಂದ್ರದ ಅನುದಾನಕ್ಕೆ  ಪತ್ರ


Team Udayavani, Feb 13, 2017, 3:45 AM IST

12-LOC-1.jpg

ಉಡುಪಿ: ಮೀನುಗಾರರಿಗೆ ಸಹಾಯ ಧನ ಮಂಜೂರು ಮಾಡಲು ಮೀನುಗಾರಿಕೆ ದೋಣಿಗಳು ಬಳಸುವ ಡೀಸೆಲ್‌ ಮೇಲೆ 100 ಕೋ.ರೂ. ಹಾಗೂ ಸೀಮೆ ಎಣ್ಣೆ ಮೇಲೆ 50 ಕೋ.ರೂ. ಸಹಾಯಾನುದಾನವನ್ನು ಕೇಂದ್ರ ಸರಕಾರ ದಿಂದ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ತಿಳಿಸಿದ್ದಾರೆ.

ಮೀನುಗಾರರಿಗೆ ಸಹಾಯಕವಾಗಲು ಹಾಗೂ ಸುಗಮ ಆಡಳಿತ ವ್ಯವಸ್ಥೆಗಾಗಿ ಉಡುಪಿಯಲ್ಲಿ ಮೀನುಗಾರಿಕೆ ಉಪನಿರ್ದೇಶಕರ ಕಚೇರಿಯನ್ನು ಸೃಷ್ಟಿಸಿ ಆದೇಶವನ್ನು ಹೊರಡಿಸಲಾಗಿದೆ. ಮೀನುಗಾರರು ವಾಣಿಜ್ಯ ಬ್ಯಾಂಕ್‌ಗಳಿಂದ ಪಡೆದ ಸಾಲದ ಮೇಲಿನ ಶೇ. 2ಕ್ಕಿಂತ ಹೆಚ್ಚಿನ ಬಡ್ಡಿ ಯನ್ನು ಪಾವತಿಸುವ ಯೋಜನೆಯಲ್ಲಿ 2016- 17ನೇ ಸಾಲಿನಲ್ಲಿ 100 ಲ.ರೂ.ಗಳನ್ನು ಮೀನು
ಗಾರರ ಪರವಾಗಿ ಬ್ಯಾಂಕ್‌ಗಳಿಗೆ ಪಾವತಿಸಲಾಗಿದೆ.  ಸರಕಾರ ಪುನಃ 596.51 ಲ.ರೂ. ಅನುದಾನ ಒದಗಿಸಿದ್ದು ಇದನ್ನು ಮೀನುಗಾರರ ಬ್ಯಾಂಕ್‌ ಸಾಲಕ್ಕೆ ಪಾವತಿಸಲು ಕ್ರಮವಹಿಸಲಾಗಿದೆ ಎಂದಿದ್ದಾರೆ.

ಮೀನುಗಾರಿಕೆ ದೋಣಿಗಳಿಗೆ ಡೀಸೆಲ್‌ ಮಾರಾಟ ತೆರಿಗೆ ಮರುಪಾವತಿ ಯೋಜನೆಯಡಿ 2016-17ನೇ ಸಾಲಿಗೆ  10,050 ಲ.ರೂ. ಅನುದಾನ ನಿಗದಿಗೊಳಿಸಲಾಗಿದೆ. ಇದರಲ್ಲಿ ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಯಡಿ ಇತರ  ಕಾರ್ಯಕ್ರಮಗಳಿಗೆ ನಿಗದಿಪಡಿಸಿದ ಮೊತ್ತ ಹೊರತುಪಡಿಸಿ 9,552 ಲ.ರೂ. ಡೀಸೆಲ್‌ ಮಾರಾಟ ತೆರಿಗೆ ಮರುಪಾವತಿ ಗಾಗಿ ಲಭ್ಯವಾಗಿದೆ. ಆದರೆ 2016 ಎಪ್ರಿಲ್‌ನಿಂದ ಅನ್ವಯವಾಗುವಂತೆ ಡೀಸೆಲ್‌ ಮೇಲಿನ ಮಾರಾಟ ಕರವನ್ನು ಹೆಚ್ಚಿಸಿದ ಕಾರಣ ಹಾಗೂ ಡೀಸೆಲ್‌ ದರದಲ್ಲಿ ಹೆಚ್ಚಳವಾದ ಕಾರಣ ಪ್ರಸ್ತುತ ಪ್ರತಿ ಲೀಟರ್‌ ಡೀಸೆಲ್‌ ಮೇಲೆ 9.27 ರೂ. ಮಾರಾಟ ಕರವನ್ನು ಮರುಪಾವತಿ ಮಾಡಬೇಕಾಗಿದೆ. ಈ ವರೆಗೆ ಲಭ್ಯವಿರುವ ಅನುದಾನದಲ್ಲಿ 7,143 ಲ.ರೂ. ಸಹಾಯಧನವನ್ನು ಮೀನುಗಾರರ ಖಾತೆಗಳಿಗೆ ಜಮಾ ಮಾಡಲಾಗಿದೆ. ಅಕ್ಟೋಬರ್‌ ತಿಂಗಳಲ್ಲಿ ಬಾಕಿ ಇದ್ದ ಹಾಗೂ ನವೆಂಬರ್‌ ತಿಂಗಳ ಸಹಾಯಧನ ಪಾವತಿಗಾಗಿ ಒಟ್ಟು 2,363 ಲ.ರೂ. ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲಾಗಿದೆ. ಇದರಿಂದ ನವೆಂಬರ್‌ ಅಂತ್ಯದವರೆಗೆ ಒಟ್ಟು 1.15 ಲ.ಕಿ.ಲೀ. ಡೀಸೆಲ್‌ ಮೇಲೆ ಒಟ್ಟು
9,523 ಲ.ರೂ. ಸಹಾಯಧನವನ್ನು ಮೀನುಗಾರ ರಿಗೆ ಪಾವತಿ ಮಾಡಿದಂತಾಗುತ್ತದೆ. ಡಿಸೆಂಬರ್‌, ಜನವರಿ, ಫೆಬ್ರವರಿಯ ಡೀಸೆಲ್‌ ಸಹಾಯಧನ ಪಾವತಿಗಾಗಿ ಹೆಚ್ಚುವರಿಯಾಗಿ 33 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಲು ಸರಕಾರವನ್ನು ಕೋರಲಾಗಿದೆ.

ಡೀಸೆಲ್‌ ಮತ್ತು ಸೀಮೆಎಣ್ಣೆ ದರಗಳು ತೀವ್ರವಾಗಿ ಹೆಚ್ಚುತ್ತಿದ್ದು ಮೀನುಗಾರರಿಗೆ ಮೀನುಗಾರಿಕೆ ನಡೆಸಲು ವೆಚ್ಚವು ಹೆಚ್ಚಳವಾಗುತ್ತಿದೆ. ವಾರ್ಷಿಕ ಸುಮಾರು 1.80 ಲ.ಕಿ.ಲೀ. ಡೀಸೆಲ್‌ ಹಾಗೂ ಸುಮಾರು 28,000 ಕಿ.ಲೀ. ಸೀಮೆಎಣ್ಣೆ ಮೀನುಗಾರಿಕೆ ದೋಣಿಗಳಿಗೆ ಬೇಕಾಗುತ್ತದೆ. ಆದ್ದರಿಂದ ಮೀನುಗಾರರಿಗೆ ಅನುದಾನ ಮಾಡಲು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.