ಸುವರ್ಣ ಉಡುಪಿಗೆ ಈಗಿಂದಲೇ ಚಿಂತನೆ ಅಗತ್ಯ: ಸಚಿವ ಸುನಿಲ್‌


Team Udayavani, Dec 4, 2022, 5:10 AM IST

ಸುವರ್ಣ ಉಡುಪಿಗೆ ಈಗಿಂದಲೇ ಚಿಂತನೆ ಅಗತ್ಯ: ಸಚಿವ ಸುನಿಲ್‌

ಉಡುಪಿ: ಮುಂದಿನ 25 ವರ್ಷಗಳಲ್ಲಿ ಉಡುಪಿ ಜಿಲ್ಲೆ ಕೃಷಿ, ಆರೋಗ್ಯ, ಶಿಕ್ಷಣ, ಉದ್ಯಮ ಹಾಗೂ ಯುವ ಜನತೆಯ ಚಿಂತನ ಲಹರಿ ಹೀಗೆ ಎಲ್ಲವೂ ಸಕಾರಾತ್ಮಕವಾಗಿ ಸಾಗಿ ಮತ್ತಷ್ಟು ಅಭಿವೃದ್ಧಿ ಕಾಣಬೇಕು. ಸುವರ್ಣ ಉಡುಪಿಗೆ ಈಗಿಂದಲೇ ಯೋಚನೆ, ಯೋಜನೆ ಆರಂಭವಾಗಬೇಕು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ ಕುಮಾರ್‌ ಹೇಳಿದರು.

ಉಡುಪಿ ಜಿಲ್ಲಾಡಳಿತದಿಂದ ರಜತೋತ್ಸವದ ಅಂಗವಾಗಿ ಶನಿವಾರ ಅಜ್ಜರಕಾಡಿನ ಪುರಭವನದಲ್ಲಿ ಹಮ್ಮಿಕೊಂಡಿರುವ “ದಿಕ್ಸೂಚಿ : ಸುವರ್ಣ ಉಡುಪಿಗೆ ರಜತ ಉಡುಪಿಯ ಪರಿಕಲ್ಪನೆ’ ಎಂಬ ಎರಡು ದಿನಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಚಾರ-ವಿಚಾರ, ಜೀವನ ಪದ್ಧತಿ, ಸಾಂಸ್ಕೃತಿಕ ಚಟುವಟಿಕೆ, ಭಾಷೆ ಹೀಗೆ ಎಲ್ಲದರಲ್ಲೂ ಉಡುಪಿ ಜಿಲ್ಲೆ ಭಿನ್ನವಾಗಿದೆ. ಜಿಲ್ಲೆ ಆರಂಭವಾಗಿ 25 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದೆ. ಮುಂದಿನ 25 ವರ್ಷಗಳ‌ಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸುವ ಅಧಿಕಾರಿಗಳು ಕೂಡ ಜನ ನೆನಪಿಡುವಂತಹ ಸ್ತುತ್ಯರ್ಹ ಕಾರ್ಯ ನೀಡಬೇಕು ಎಂದರು.

ನವ ಭಾರತಕ್ಕೆ ನವ ಕರ್ನಾಟಕದ ಕೊಡುಗೆ ಎಂಬ ನಿಟ್ಟಿನಲ್ಲಿ ರಾಜ್ಯ ಸರಕಾರ ಕಾರ್ಯಾರಂಭ ಮಾಡಿದೆ. ಅದರಂತೆ ಉಡುಪಿಯೂ ನವ ಕರ್ನಾಟಕ, ನವ ಭಾರತಕ್ಕೆ ಕೊಡುಗೆ ನೀಡುವಂತಾಗಬೇಕು. ಡಾ| ವಿ.ಎಸ್‌. ಆಚಾರ್ಯ ಸಹಿತ ಎಲ್ಲ ರಾಜಕೀಯ ಪಕ್ಷದ ನಾಯಕರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಮುಂದಿನ ಅಭಿವೃದ್ಧಿಗೆ ಸಂಬಂಧ ಎಲ್ಲ ಆಯಾಮಗಳಲ್ಲೂ, ಸಾರ್ವಜನಿಕರಿಂದಲೂ ಚರ್ಚೆ ನಡೆದು ಅದರಂತೆ ಮುಂದೆ ಸಾಗುವಂತಾಗಬೇಕು ಎಂದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ ಮಾತನಾಡಿ, ಜಿಲ್ಲೆಗೆ ಒಂದು ವೈದ್ಯಕೀಯ ಕಾಲೇಜು ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಅಗತ್ಯವಿದೆ. ಶಿಕ್ಷಣದಲ್ಲೂ ಇನ್ನಷ್ಟು ಅಭಿವೃದ್ಧಿ ಕಾಣಬೇಕು. ಜಿಲ್ಲೆಯ ಒಳಗೆ ಉದ್ಯೋಗ ಸೃಷ್ಟಿಯಾಗಬೇಕು ಮತ್ತು ಸ್ಥಳೀಯವಾಗಿ ಇಲ್ಲಿನ ಯುವ ಜನತೆಗೆ ಉದ್ಯೋಗ ಸಿಗುವಂತೆ ಆಗಬೇಕು. ಇದೆಲ್ಲದರ ಜತೆಗೆ ಬ್ಯಾಂಕ್‌ ಸಹಿತ ವಿವಿಧ ಕ್ಷೇತ್ರಕ್ಕೆ ಬೇರೆ ರಾಜ್ಯಗಳಿಂದ ಬರುವ ಮೇಲಧಿಕಾರಿಗಳು ಇಲ್ಲಿನ ಜನರೊಂದಿಗೆ ಸಂಯಮದಿಂದ ವರ್ತಿಸ ಬೇಕು ಮತ್ತು ಸ್ಥಳೀಯ ಸಂಸ್ಕೃತಿಯ ಅರಿತು, ಅದರಂತೆ ಸಾಗಬೇಕು ಎಂದು ಸಲಹೆ ನೀಡಿದರು.

ಶಾಸಕ ಕೆ. ರಘುಪತಿ ಭಟ್‌ ಅಧ್ಯಕ್ಷತೆ ವಹಿಸಿ, ಕೃಷಿ, ಮೀನುಗಾರಿಕೆ ಸಹಿತ ಎಲ್ಲ ಕ್ಷೇತ್ರದಲ್ಲೂ ಜಿಲ್ಲೆ ಸಮಗ್ರ ಅಭಿವೃದ್ಧಿ ಕಾಣಬೇಕು. ಈ ನಿಟ್ಟಿನಲ್ಲಿ ಹಲವು ಯೋಜನೆಗಳು, ಯೋಚನೆಗಳು ಅಗತ್ಯವಿದೆ ಎಂದರು.

ಶಾಸಕ ಲಾಲಾಜಿ ಆರ್‌. ಮೆಂಡನ್‌, ಕ್ಯಾಂಪ್ಕೋ ಅಧ್ಯಕ್ಷ ಕಿರಣ್‌ ಕುಮಾರ್‌ ಕೊಡ್ಗಿ, ಮೈಸೂರು ಎಲೆಕ್ಟ್ರಿಕಲ್‌ ಇಂಡಸ್ಟ್ರೀಸ್‌ನ ಅಧ್ಯಕ್ಷ ಕೆ.ಉದಯ ಕುಮಾರ್‌ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್‌. ನಾಯಕ್‌, ಜಿಲ್ಲೆಯ ಪ್ರಥಮ ಜಿಲ್ಲಾಧಿಕಾರಿಯಾಗಿದ್ದ ಕಲ್ಪನಾ, ಜಿ.ಪಂ. ಸಿಇಒ ಪ್ರಸನ್ನ ಎಚ್‌., ಎಸ್‌ಪಿ ಹಾಕೆ ಅಕ್ಷಯ್‌ ಮಚ್ಚೀಂದ್ರ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ ನಿರೂಪಿಸಿದರು.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.