ಇಂದು ಉಡುಪಿಗೆ ಸುಪ್ರೀಂ, ಹೈಕೋರ್ಟ್ ನ್ಯಾಯಾಧೀಶರು
Team Udayavani, Dec 30, 2022, 7:25 AM IST
ಉಡುಪಿ : ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಡಿ. 30ರಂದು ನಡೆಯಲಿರುವ ನೂತನ ಅನೆಕ್ಸ್ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳು ಭಾಗವಹಿಸುವರು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಶಿಲಾನ್ಯಾಸ ನೆರವೇರಿಸಲಿದ್ದು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಅಧ್ಯಕ್ಷತೆ ವಹಿಸುವರು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆದ ನ್ಯಾಯಮೂರ್ತಿ ಬಿ. ವೀರಪ್ಪ, ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಹೈಕೋರ್ಟ್ ನ್ಯಾಯಮೂರ್ತಿ, ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಹೈಕೋರ್ಟ್ ನ್ಯಾಯಮೂರ್ತಿಗಳಾದ ಎಸ್. ವಿಶ್ವಜಿತ್ ಶೆಟ್ಟಿ, ಸಿ.ಎಂ. ಜೋಶಿ, ಟಿ.ಜಿ. ಶಿವಶಂಕರೇ ಗೌಡ, ಉಚ್ಚ ನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ಬಿ. ಮುರಳೀಧರ ಪೈ ಉಪಸ್ಥಿತರಿರಲಿದ್ದಾರೆ ಎಂದು ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್, ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ